
ಬೆಂಗಳೂರು(ಆ.29): ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆಯ ಹಿಂದೆ ಅದೆಷ್ಟೇ ದೊಡ್ಡ ವ್ಯಕ್ತಿ ಅಥವಾ ಸಂಘಟನೆಯಾದರೂ ಇರಲಿ ಅವರನ್ನು ಬಿಡುವುದಿಲ್ಲ. ಜೀವನ ಪರ್ಯಂತ ನೆನಪಿಟ್ಟುಕೊಳ್ಳುವಂತಹ ಪಾಠ ಕಲಿಸುತ್ತೇವೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಎಚ್ಚರಿಕೆ ನೀಡಿದ್ದಾರೆ. ಗಲಭೆ ವೇಳೆ ಸಂತ್ರಸ್ತರಾದವರಿಗೆ ಶುಕ್ರವಾರ ಬಿಜೆಪಿ ವತಿಯಿಂದ ಪರಿಹಾರ ವಿತರಿಸಿದ ಬಳಿಕ ಮಾತನಾಡಿದ ಸಚಿವರು, ಹಿಂಸಾಚಾರದ ಕುರಿತು ಸಮಗ್ರ ತನಿಖೆ ನಡೆಯಲಿದೆ ಎಂದರು.
ಪುಲಿಕೇಶಿನಗರದಲ್ಲಿ ಅಹಿತಕರ ನಡೆದಿದೆ. ಆದರೆ ಮತ್ತೆ ಆ ರೀತಿಯ ಘಟನೆಗಳು ನಡೆಯದಂತೆ ಸರ್ಕಾರ ಎಚ್ಚರಿಕೆ ವಹಿಸಿದೆ. ಡಿ.ಜೆ.ಹಳ್ಳಿ-ಕೆ.ಜಿ.ಹಳ್ಳಿ ವ್ಯಾಪ್ತಿಯಲ್ಲಿ ಗಾಂಜಾ ದಂಧೆ, ಗೋವುಗಳ ಸಾಗಾಣಿಕೆ ಸೇರಿದಂತೆ ಎಲ್ಲ ಮಾದರಿಯ ಕಾನೂನು ಬಾಹಿರ ಚಟುವಟಿಕೆಗಳನ್ನು ಮಟ್ಟಹಾಕುತ್ತೇವೆ. ಇದಕ್ಕೆ ಜನರ ಸಹಕಾರ ಸಹ ಅಗತ್ಯವಾಗಿದೆ. ಸರ್ಕಾರದ ಕೆಲಸಗಳಿಗೆ ಜನರು ಒಗ್ಗೂಡಿ ಬೆಂಬಲಿಸಬೇಕು ಎಂದು ಕರೆ ನೀಡಿದರು.
ಬೆಂಗಳೂರು ಗಲಭೆ: ಶಾಸಕ ಅಖಂಡ ಶ್ರೀನಿವಾಸ್‌ಗೆ ಹೈಕೋರ್ಟ್ ನೋಟಿಸ್
ಗಲಭೆಯಲ್ಲಿ ವಾಹನ ಕಳೆದುಕೊಂಡ ಹಾಗೂ ಮನೆಗಳಿಗೆ ಹಾನಿಯಾಗಿರುವ ಜನರಿಗೆ ಪರಿಹಾರ ವಿತರಿಸಲಾಗಿದೆ. ಗಲಭೆಕೋರರನ್ನು ಅಂತ್ಯ ಕಾಣಿಸುತ್ತೇವೆ. ಈ ಬಗ್ಗೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಚಿವರು, ಪೊಲೀಸ್ ಅಧಿಕಾರಿಗಳ ಸಭೆ ನಡೆದು ನಿರ್ಣಯಿಸಲಾಗಿದೆ. ಅದೆಷ್ಟೇ ದೊಡ್ಡ ವ್ಯಕ್ತಿ ಅಥವಾ ಸಂಘಟನೆಯಾದರೂ ಬಿಡುವುದಿಲ್ಲ. ಜೀವನ ಪರ್ಯಂತ ನೆನೆಯುವಂತಹ ಪಾಠ ಕಲಿಸುತ್ತೇವೆ ಎಂದು ಅವರು ಗುಡುಗಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ