ಜೇವರ್ಗಿ-ಚಾಮರಾಜನಗರ ಹೆದ್ದಾರಿ ಚತುಷ್ಪಥವಾಗಿ ಅಭಿವೃದ್ಧಿ ಮಾಡಿ; ಹೆಚ್.ಡಿ.ಕುಮಾರಸ್ವಾಮಿ ಮನವಿ

ಜೇವರ್ಗಿ- ಚಾಮರಾಜನಗರ ಹೆದ್ದಾರಿಯನ್ನು ಚತುಷ್ಪಥವನ್ನಾಗಿ ಅಭಿವೃದ್ಧಿಪಡಿಸಲು ಕುಮಾರಸ್ವಾಮಿ ಅವರು ನಿತಿನ್ ಗಡ್ಕರಿ ಅವರೊಂದಿಗೆ ಚರ್ಚಿಸಿದ್ದಾರೆ. ಪಾಂಡವಪುರದಲ್ಲಿ ಟ್ರಕ್ ವೇ ನಿರ್ಮಾಣ ಮತ್ತು ಮಂಡ್ಯ ವರ್ತುಲ ರಸ್ತೆ ಅಭಿವೃದ್ಧಿಯ ಬಗ್ಗೆಯೂ ಮನವಿ ಸಲ್ಲಿಸಿದ್ದಾರೆ.

Union Minister HD Kumaraswamy discuss with Nitin Gadkari about Jevargi-chamrajnagar-highway sat

ನವದೆಹಲಿ (ಮಾ.20): ಜೇವರ್ಗಿ- ಚಾಮರಾಜನಗರ ನಡುವೆ ಮೇಲುಕೋಟೆ ವಿಧಾನಸಭೆ ಕ್ಷೇತ್ರದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥದಿಂದ ಚತುಷ್ಪಥ ಹೆದ್ದಾರಿಯನ್ನಾಗಿ ಅಭಿವೃದ್ಧಿ ಮಾಡುವ ಬಗ್ಗೆಯು ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಚರ್ಚೆ ನಡೆಸಿದರು.

ಜೇವರ್ಗಿ- ಚಾಮರಾಜನಗರ ನಡುವೆ ಪಾಂಡವಪುರದ ಹಾಡುವ ಹೆದ್ದಾರಿ 150ಎ ದ್ವಿಪಥ ಹೆದ್ದಾರಿಯನ್ನು 597-560ರಿಂದ 606-670 ಕಿ.ಮೀ.ಚತುಷ್ಪಥ ಹೆದ್ದಾರಿಯನ್ನಾಗಿ ಅಭಿವೃದ್ಧಿಪಡಿಸಲು ಒಪ್ಪಿಗೆ ಕೊಡಬೇಕು ಹಾಗೂ ಪಾಂಡವಪುರ ರೈಲು ನಿಲ್ದಾಣದ ಬಳಿ ಇರುವ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಣೆ ಮಾಡುವ ರೈತರ ಅನುಕೂಲಕ್ಕಾಗಿ ಹೆದ್ದಾರಿ ಪಕ್ಷದಲ್ಲಿಯೇ ಟ್ರಕ್ ವೆ (Truck way) ನಿರ್ಮಾಣ ಮಾಡಬೇಕು ಎಂದು ಮನವಿ ಮಾಡಿದರು.

Latest Videos

ಇತ್ತೀಚೆಗೆ ತಾವು ಯೋಜನೆಯ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಿದಾಗ ಸ್ಥಳೀಯ ಜನರು ಈ ಬಗ್ಗೆ ಮನವಿ ಮಾಡಿದ್ದರು. ಅಲ್ಲದೆ, ಖುದ್ದು ಸ್ಥಳದಲ್ಲಿ ಪರಿಶೀಲನೆಯನ್ನು ನಡೆಸಿದ್ದೇನೆ. ಹೀಗಾಗಿ ಟ್ರಕ್ ವೆ ನಿರ್ಮಾಣ ಅಗತ್ಯವಾಗಿ ಆಗಬೇಕಿದೆ. ಹೆದ್ದಾರಿಯನ್ನು ನಾಲ್ಕು ಪಥಕ್ಕೆ ಅಭಿವೃದ್ಧಿ ಮಾಡುವುದರಿಂದ ಈ ಭಾಗದ ಅಭಿವೃದ್ಧಿ, ಸರಕು ಸಾಗಣೆಗೆ ಅನುಕೂಲ ಆಗುತ್ತದೆ. ವ್ಯಾಪಾರ ವಾಣಿಜ್ಯ ಚಟುವಟಿಕೆಗಳಿಗೆ ಉತ್ತೇಜನ ದೊರೆಯುತ್ತದೆ. ಅಲ್ಲದೆ, ಕೋಲಾರ ಲೋಕಸಭೆ ಕ್ಷೇತ್ರವೂ ಸೇರಿ ಕರ್ನಾಟಕದ ಹಲವಾರು ಹೆದ್ದಾರಿ ಯೋಜನೆಗಳ ಮಂಜೂರಾತಿ ಹಾಗೂ ಚಾಲ್ತಿಯಲ್ಲಿರುವ ಯೋಜನೆಗಳನ್ನು ವೇಗಗತಿಯಲ್ಲಿ ಅನುಷ್ಠಾನಗೊಳಿಸುವ ಬಗ್ಗೆ ಗಡ್ಕರಿ ಅವರೊಂದಿಗೆ ಸಚಿವರು ಮಾತುಕತೆ ನಡೆಸಿದರು.

ಇದನ್ನೂ ಓದಿ: ಹೈಕೋರ್ಟ್ ಆದೇಶ, ಒತ್ತುವರಿ ಜಾಗದಲ್ಲಿರುವ ಎಚ್‌ಡಿಕೆ ಮನೆ ಕಾಂಪೌಂಡ್‌,ಶೆಡ್‌ಗೆ ನೆಲಸಮದ ಆತಂಕ!

ಮಂಡ್ಯ ನಗರ ವರ್ತುಲ ರಸ್ತೆಯನ್ನು ಅದಷ್ಟು ಬೇಗ ಕೈಗೆತ್ತಿಕೊಂಡು ಅನುಷ್ಠಾನಕ್ಕೆ ತರುವ ಬಗ್ಗೆ ಚರ್ಚೆ ಮಾಡಿದರು. ಈ ವೇಳೆ ಈಗಾಗಲೇ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರವು ಯೋಜನೆಗೆ ಡಿಪಿಆರ್ ಮಾಡಿದೆ. ಆದರೆ, ಪ್ರಾಧಿಕಾರದ ಅಂದಾಜು ವೆಚ್ಚ ಯೋಜನೆಗೆ ಸಾಕಾಗುವುದಿಲ್ಲ. ₹900 ಕೋಟಿ ವೆಚ್ಚದ ಪರಿಷ್ಕೃತ ಯೋಜನೆಗೆ ಒಪ್ಪಿಗೆ ಕೊಟ್ಟು ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದ್ದಕ್ಕೆ ಹೆದ್ದಾರಿ ಪ್ರಾಧಿಕಾರದ ಸಚಿವ ನಿತಿನ್ ಗಡ್ಕರಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದರು. ಭೂಸ್ವಾಧೀನಕ್ಕೆ ₹550 ಕೋಟಿ ಹಾಗೂ ನಿರ್ಮಾಣ ಕಾರ್ಯಕ್ಕೆ ₹350 ಕೋಟಿ ಬೇಕಾಗುತ್ತದೆ. ಹೀಗಾಗಿ ಯೋಜನೆಗೆ ₹900 ಕೋಟಿ ಅಗತ್ಯವಿದೆ ಎಂಬುದನ್ನು ಗಡ್ಕರಿ ಅವರಿಗೆ ಮನವರಿಕೆ ಮಾಡಿಕೊಟ್ಟರು. ವರ್ತುಲ ರಸ್ತೆ ಯೋಜನೆ ಅನುಷ್ಠಾನಗೊಂಡರೆ ಮಂಡ್ಯ ನಗರದ ಬೆಳವಣಿಗೆ, ಅಭಿವೃದ್ಧಿಗೆ ಬಹಳ ಅನುಕೂಲ ಆಗುತ್ತದೆ ಎಂಬುದನ್ನು ಕುಮಾರಸ್ವಾಮಿ ಮನವರಿಕೆ ಮಾಡಿಕೊಟ್ಟರು. ಈ ವೇಳೆ ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ಕೋಲಾರ ಸಂಸದ ಮಲ್ಲೇಶ್ ಬಾಬು ಉಪಸ್ಥಿತರಿದ್ದರು.

ಇದನ್ನೂ ಓದಿ: Pradeep Eshwar : ದ್ವೇಷ ರಾಜಕಾರಣ ಕುಮಾರಸ್ವಾಮಿ DNAನಲ್ಲಿದೆ

ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಉತ್ತಮ ಆರಂಭ ಸಿಕ್ಕಿದೆ. ಈಗಾಗಲೇ ನಿತಿನ್ ಗಡ್ಕರಿ ಅವರ ಸಹಕಾರದಿಂದ ಜಿಲೆಯಲ್ಲಿ ಹಾದು ಹೋಗುವ ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಿ ಅಭಿವೃದ್ಧಿ ಮಾಡುವ ಕೆಲಸಕ್ಕೆ ಚಾಲನೆ ಸಿಕ್ಕಿದೆ. ₹900 ಕೋಟಿ ವೆಚ್ಚದಲ್ಲಿ ಮಂಡ್ಯ ನಗರ ವರ್ತುಲ ಅಭಿವೃದ್ಧಿಗೆ ಚಾಲನೆ ಸಿಗುತ್ತಿರುವುದು ನನಗೆ ಬಹಳ ಸಂತೋಷ ಉಂಟು ಮಾಡಿದೆ. ಮಂಡ್ಯ ನಗರವು ಉತ್ತಮ ಸಾರಿಗೆ ವ್ಯವಸ್ಥೆಯಿಂದ ಮುಂಚೂಣಿ ನಗರವಾಗಿ ರೂಪುಗೊಳ್ಳಬೇಕು ಎಂಬುದು ನನ್ನ ಕನಸಾಗಿದೆ.
-ಸಿ.ಎಸ್. ಪುಟ್ಟರಾಜು, ಮಾಜಿ ಸಚಿವ

vuukle one pixel image
click me!