ಒಕ್ಕಲಿಗ, ಲಿಂಗಾಯತರನ್ನು 'ಡಿ' ಗ್ರೇಡ್ ಮಾಡಲೆತ್ನ: ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆಕ್ರೋಶ

Published : Jan 16, 2025, 10:24 AM IST
ಒಕ್ಕಲಿಗ, ಲಿಂಗಾಯತರನ್ನು 'ಡಿ' ಗ್ರೇಡ್ ಮಾಡಲೆತ್ನ: ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ಸಾರಾಂಶ

ಕಿಯೋನಿಕ್ಸ್ ವೆಂಡರ್ಸ್ ಬಿಲ್ ಬಾಕಿ ವಿಚಾರಕ್ಕೆ ಸಂಬಂಧಿಸಿ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಉಡಾಫೆ ಮಾತಗಳನ್ನಾಡದೆ ಬಾಕಿ ಬಿಲ್ ಅನ್ನು ಕ್ಲಿಯರ್ ಮಾಡಬೇಕು ಎಂದು ಆಗ್ರಹಿಸಿದ ಕುಮಾರಸ್ವಾಮಿ

ಬೆಂಗಳೂರು(ಡಿ.16): ಜಾತಿ ಗಣತಿ ವರದಿಯನ್ನು ಇಟ್ಟುಕೊಂಡು ಒಕ್ಕಲಿಗ, ಲಿಂಗಾಯತರನ್ನು ಕೆಳಮಟ್ಟಕ್ಕೆ ಇಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರಟಿದ್ದಾರೆ ಎಂದು ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಇದು ಕೇವಲ ಎರಡು ಸಮುದಾಯಗಳ ಪ್ರಶ್ನೆ ಅಲ್ಲ. ಇಷ್ಟು ದಿನ ಅಧಿಕಾರದಲ್ಲಿದ್ದ ಸಿದ್ದರಾಮಯ್ಯ ಅವರು ಶೋಷಿತ ಸಮುದಾಯಗಳಿಗೆ ಏನು ಮಾಡಿದ್ದಾರೆ ಎನ್ನುವುದನ್ನು ಹೇಳಬೇಕು. ಯಾವ ಯಾವ ಜಾತಿಯಲ್ಲಿ ಎಷ್ಟು ಜನ ಇದ್ದಾರೆ ಎನುವುದಕ್ಕಿಂತ, ಎಷ್ಟು ಜನ ಬಡವರಿದ್ದಾರೆ ಎಂಬುದನ್ನು ಗಮನಿಸಬೇಕು. ಇಷ್ಟು ದಿನ ಸರ್ಕಾರದ ಸೌಲಭ್ಯಗಳು ಯಾರಿಗೆ ಸಿಕ್ಕಿವೆ, ಯಾರಿಗೆ ಸಿಕ್ಕಿಲ್ಲ ಎಂಬುದರ ಮೇಲೆ ಸರ್ಕಾರ ಬೆಳಕು ಚೆಲ್ಲಬೇಕು ಎಂದು ಆಗ್ರಹಿಸಿದರು. 

ಸುಮಲತಾರ ಕಾರು ಹತ್ತಲ್ಲ ಎಂದು ನಾ ಹೇಳಿಲ್ಲ: ಕೇಂದ್ರ ಕುಮಾರಸ್ವಾಮಿ

ಸಚಿವ ಖರ್ಗೆ ಉಡಾಫೆ ಮಾತು ಬಿಟ್ಟು ಬಾಕಿ ಬಿಲ್ ಕ್ಲಿಯರ್ ಮಾಡಲಿ: 

ಕಿಯೋನಿಕ್ಸ್ ವೆಂಡರ್ಸ್ ಬಿಲ್ ಬಾಕಿ ವಿಚಾರಕ್ಕೆ ಸಂಬಂಧಿಸಿ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಉಡಾಫೆ ಮಾತಗಳನ್ನಾಡದೆ ಬಾಕಿ ಬಿಲ್ ಅನ್ನು ಕ್ಲಿಯರ್ ಮಾಡಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ. 
ಕಾಂಗ್ರೆಸ್‌ ಸರ್ಕಾರವು ಗುತ್ತಿಗೆದಾರರು ಹಾಗೂ ವೆಂಡರ್ಸ್‌ಗಳ ಬಿಲ್ ಪಾವತಿಸಲು ಮೀನಮೇಷ ಎಣಿಸುತ್ತಿದೆ. ಸಣ್ಣ ಪ್ರಮಾಣದ ಗುತ್ತಿಗೆದಾರರು ತಮ್ಮ ಮನೆ ಹೆಣ್ಣು ಮಕ್ಕಳ ಒಡವೆಗಳನ್ನು ಒತ್ತೆ ಇಟ್ಟು ಕಾಮಗಾರಿಗಳನ್ನು ಪೂರ್ಣಗೊಳಿಸಿ ದ್ದಾರೆ.ಮಾಡಿರುವಸಾಲಗಳನ್ನು ತೀರಿಸಲಾಗದೆ ಬೀದಿಗೆ ಬಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಬೇರೆಯವರ ಬಗ್ಗೆ ಬೇಕಾಬಿಟ್ಟಿ ಮಾತನಾಡುವ ಪ್ರಿಯಾಂಕ್ ಖರ್ಗೆ ಸಬೂಬು ಹೇಳುವುದನ್ನು ಬಿಡಬೇಕು. ಗುತ್ತಿಗೆದಾರರ ಎಲ್‌ಓಸಿಗಳನ್ನು ಬಿಡುಗಡೆ ಮಾಡಲು ಈ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಗುತ್ತಿಗೆದಾರರು ಮೊದಲು ಒಗ್ಗಟ್ಟಾಗಬೇಕು. ಅವರಲ್ಲಿಯೇ ಗುಂಪುಗಳನ್ನು ಮಾಡಿಕೊಂಡರೆ ಸರ್ಕಾರ ಅದನ್ನು ದುರುಪಯೋಗ ಮಾಡಿಕೊಳ್ಳುತ್ತದೆ. ಒಂದು ವರ್ಷ ಯಾರು ಕೆಲಸ ಮಾಡಬಾರದು. ನೆರೆ ರಾಜ್ಯದವರನ್ನು ಕರೆದುಕೊಂಡು ಬಂದು ಕೆಲಸ ಮಾಡಿಸಲಿ, ಯಾರು ಬಂದು ಕೆಲಸ ಶೋಷಿತರ ಪರವಾಗಿ ಸರ್ಕಾರ ಕೆಲಸ ಮಾಡಲಿ ಮಾಡುತ್ತಾರೋ ನೋಡೋಣ ಎಂದು ಕಿಡಿಕಾರಿದರು. ಯಾರೂ ಧೃತಿಗೆಡುವ ಅಗತ್ಯವಿಲ್ಲ. ಸರ್ಕಾರ ಹಣ ಕೊಡಲೇಬೇಕು. ಯಾರು ಸಹ ಆತ್ಮಹತ್ಯೆಗೆ ಶರಣಾಗಬೇಕಾದ ಅಗತ್ಯ ಇಲ್ಲ. ದಯಾಮರಣಕ್ಕೆ ಯಾಕೆ ಅರ್ಜಿ ಹಾಕಬೇಕು? ಸರ್ಕಾರದ ವಿರುದ್ಧ ಹೋರಾಟ ಮಾಡುವ ಧೈರ್ಯ ಮಾಡಬೇಕು. ಅವರೇನು ಭಿಕ್ಷುಕರಲ್ಲ ಎಂದು ಗುತ್ತಿಗೆದಾರರಿಗೆ ಧೈರ್ಯ ತುಂಬಿದರು. 

ರಾಜ್ಯದಲ್ಲೀಗ ಸರ್ಕಾರದ ಸಹಿ ಮಾರಾಟಕ್ಕಿದೆ, ಇಲ್ಲಿರೋದು 60 ಪರ್ಸೆಂಟ್ ಕಮಿಷನ್: ಕುಮಾರಸ್ವಾಮಿ

ತೆರಿಗೆ ಸಂಗ್ರಹದಲ್ಲಿ ಹಿನ್ನಡೆ: 

ನುಡಿದಂತೆ ನಡೆದಿದ್ದೇವೆ, ಗ್ಯಾರಂಟಿ ನೀಡಲಾಗಿದೆ ಎಂಬುದಾಗಿ ಹೇಳುತ್ತಿರುವ ಕಾಂಗ್ರೆಸ್ ಸರ್ಕಾರದಲ್ಲಿ ಯಾವ ಕೆಲಸದಲ್ಲೂ ದಕ್ಷತೆ ಕಾಣುತ್ತಿಲ್ಲ. ನಿರೀಕ್ಷೆಗೆ ತಕ್ಕಂತೆ ತೆರಿಗೆ ಸಂಗ್ರಹವಾಗುತ್ತಿಲ್ಲ ಎಂದು ಇದೇ ವೇಳೆ ಕೇಂದ್ರ ಕೈಗಾರಿಕಾ ಸಚಿವ ಕುಮಾರಸ್ವಾಮಿ ಹೇಳಿದರು. 

ಬಜೆಟ್ ಮಂಡನೆಗೆ ತಯಾರಿ ಮಾಡಲಾಗುತ್ತಿದೆ. ಆದರೆ, ತೆರಿಗೆ ಸಂಗ್ರಹದಲ್ಲಿ ಹಿನ್ನಡೆಯಾಗಿದೆ. ಎಲ್ಲಾ ಬಾಬುಗಳಿಂದ ಸುಮಾರು 62,424 ಕೋಟಿ ರು. ತೆರಿಗೆ ಸಂಗ್ರಹ ಕಡಿಮೆಯಾಗಿದೆ. ಮೇಲಿಂದ ಮೇಲೆ ಸಾಲ ಮಾಡಲಾಗುತ್ತಿದೆ. ಎಲ್ಲ ರೀತಿಯಲ್ಲೂ ಬೆಲೆ ಏರಿಕೆ ಮಾಡಿದರೂ ತೆರಿಗೆ ಸಂಗ್ರಹದಲ್ಲಿ ಕೊರತೆಯಾಗಿದೆ ಎಂದು ವಾಗ್ದಾಳಿ ನಡೆಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಗಡೀಪಾರು ಸಂಕಷ್ಟದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ: ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಮಹಾಲಿಂಗೇಶ್ವರ್ ದೇಗುಲದ್ಲಿ ಪ್ರಾರ್ಥನೆ
ಸಿನಿಮಾ ರಿಲೀಸ್‌ಗೂ ಮುನ್ನವೇ ಜೈಲಲ್ಲಿ ಡೆವಿಲ್ ರೂಪ ತಾಳಿದ ದರ್ಶನ್; ಸಹ ಕೈದಿಗಳಿಗೆ ಕಾಲಿನಿಂದ ಒದ್ದು ದುರಹಂಕಾರ!