ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬಂದಿದೆ. ಕೃಷಿ ಸಮ್ಮಾನ್ ಯೋಜನೆಯ ಹಣ ಬಿಡುಗಡೆ ಕಾರ್ಯಕ್ರಮಕ್ಕೆ ಬಂದಿದ್ದೇನೆ ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ತಿಳಿಸಿದರು.
ಹುಬ್ಬಳ್ಳಿ (ಜೂ.18): ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬಂದಿದೆ. ಕೃಷಿ ಸಮ್ಮಾನ್ ಯೋಜನೆಯ ಹಣ ಬಿಡುಗಡೆ ಕಾರ್ಯಕ್ರಮಕ್ಕೆ ಬಂದಿದ್ದೇನೆ ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ತಿಳಿಸಿದರು.
ಧಾರವಾಡ ನಗರದ ಕೃಷಿ ವಿವಿಯಲ್ಲಿ ಇರುವ ರೈತ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ನಡೆದ ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ ನಿಧಿ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾದ ಎಚ್‌ಡಿ ಕುಮಾರಸ್ವಾಮಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿಗಳು 17 ಕಂತಿನ ಹಣ ಬಿಡುಗಡೆ ಮಾಡಿದ್ದಾರೆ ಅದರ ಕಾರ್ಯಕ್ರಮ ಇದೆ. ದೇಶದ 50 ಕೇಂದ್ರಗಳಲ್ಲಿ 20 ಸಾವಿರ ಕೋಟಿ ರೂ. ಹಣ ಬಿಡುಗಡೆ ಕಾರ್ಯಕ್ರಮ ನಡೆಯುತ್ತಿದೆ. ವಾರಾಣಸಿಯಲ್ಲಿ ಮೋದಿಯವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯುತ್ತಿದೆ ಎಂದರು.
ಪ್ರಧಾನಿ ಮೋದಿಯವರು ನನ್ನ ಮೇಲೆ ನಂಬಿಕೆ ಇಟ್ಟು ಎರಡು ಖಾತೆಗಳನ್ನು ನಿಡಿದ್ದಾರೆ. ದೇಶದ ಜಿಡಿಪಿ ಬೆಳವಣಿಗೆಗೆ ನನ್ನ ಖಾತೆ ಪ್ರಮುಖ ಪಾತ್ರವಹಿಸಲಿವೆ. ಖಾತೆಗಳ ಬಗ್ಗೆ ಪಾಸಿಟಿವ್ ನೆಗೆಟಿವ್ ಅರ್ಥ ಮಾಡಿಕೊಳ್ಳುತ್ತಿದ್ದೇನೆ. ನನ್ನ ಇಲಾಖೆ ಅರ್ಥ ಮಾಡಿಕೊಳ್ಳಲು ಸ್ವಲ್ಪ ಸಮಯ ಬೇಕಾಗುತ್ತೆ ಎಂದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ; ಚಿಕ್ಕಣ್ಣ ಬಳಿಕ ಮತ್ತೊಬ್ಬ ನಟನಿಗೆ ಸಂಕಷ್ಟ?
ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನ ಸಂಬಂಧ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನೀಗ ಕೇಂದ್ರ ಸಚಿವ, ಕೇಂದ್ರ ಮಂತ್ರಿಯಾಗಿ ಈ ಬಗ್ಗೆ ಪ್ರತಿಕ್ರಿಯಿಸಲು ಇಷ್ಟಪಡುವುದಿಲ್ಲ. ಆದರೆ ಕಾನೂನು ಎಲ್ಲರಿಗೂ ಒಂದೇ ಈಗ ಪೊಲೀಸ್ ತನಿಖೆ ನಡೆಯುತ್ತಿದೆ. ತನಿಖೆಯಲ್ಲಿ ಸತ್ಯಾಸತ್ಯತೆ ಹೊರಬರಲಿದೆ ಎಂದರು.
'ನಾನು ದರ್ಶನ್ ಗೆಳೆಯರು ಆದರೆ..,' ಪೊಲೀಸರ ಮುಂದೆ ಹಾಸ್ಯ ನಟ ಚಿಕ್ಕಣ್ಣ ಹೇಳಿದ್ದೇನು?
ಇದೇ ವೇಳೆ ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ದರ ಹೆಚ್ಚಳ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯ ಸರ್ಕಾರದ ಮನಸ್ಥಿತಿ, ಪರಿಸ್ಥಿತಿ ಹೇಗಿದೆ ಎಂಬುದು ಇದರಿಂದ ಗೊತ್ತಾಗುತ್ತದೆ. ಜನರಿಂದ ದುಡ್ಡು ಕಿತ್ತುಕೊಂಡು ಮತ್ತೆ ಜನರಿಗೆ ನೀಡುವಲ್ಲಿ ಅರ್ಥ ಏನಿದೆ? ಕಳೆದ ಏಂಟು ತಿಂಗಳಿಂದ ಹಾಲಿನ ಪ್ರೋತ್ಸಾಹ ಧನ ನೀಡಿಲ್ಲ. ಈಗ ಕೇಂದ್ರದ ಕಡೆ ಬೊಟ್ಟು ಮಾಡುತ್ತಾರೆ. ಕೇಂದ್ರ ಸರ್ಕಾರ ದರ ಏರಿಕೆ ಮಾಡಿಲ್ಲ ರಾಜ್ಯ ಸರ್ಕಾರ ಏರಿಕೆ ಮಾಡಿದೆ. ಗ್ಯಾರಂಟಿಗೆ ಹಣ ಬೇಕು ಅಂತ ಸ್ವತಃ ಎಂಬಿ ಪಾಟೀಲ್ ಹೇಳಿದ್ದಾರೆ. ಹೀಗಿರುವಾಗ ಕೇಂದ್ರದತ್ತ ಬೊಟ್ಟು ಮಾಡಲು ನಾಚಿಕೆ ಆಗೊಲ್ವೇ? ಎಂದು ತಿರುಗೇಟು ನೀಡಿದರು.