ಗ್ಯಾರಂಟಿ ಸ್ಕೀಂ ನಿಲ್ಲಿಸಲು ನಡೆದಿದೆಯಾ ಪ್ಲ್ಯಾನ್? ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ

By Kannadaprabha News  |  First Published Nov 2, 2024, 7:44 AM IST

ಸರ್ಕಾರವು ಜನರ ಪಲ್ಸ್ ತಿಳಿದುಕೊಳ್ಳುವುದಕ್ಕೆ ಶಕ್ತಿ ಯೋಜನೆ ಪ್ರಾರಂಭ ಮಾಡಿದ್ದು, ಗ್ಯಾರಂಟಿಗಳನ್ನು ಒಂದೊಂದೇ ವಾಪಸ್ ಪಡೆಯುವ ಸಲುವಾಗಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.


ತುಮಕೂರು (ನ.2): ಸರ್ಕಾರವು ಜನರ ಪಲ್ಸ್ ತಿಳಿದುಕೊಳ್ಳುವುದಕ್ಕೆ ಶಕ್ತಿ ಯೋಜನೆ ಪ್ರಾರಂಭ ಮಾಡಿದ್ದು, ಗ್ಯಾರಂಟಿಗಳನ್ನು ಒಂದೊಂದೇ ವಾಪಸ್ ಪಡೆಯುವ ಸಲುವಾಗಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

ಅವರು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

Latest Videos

undefined

ಕಾಂಗ್ರೆಸ್ ಆಡಳಿತ ಯಾವ ರೀತಿ ಇದೆ, ಕಾಂಗ್ರೆಸ್ ನಾಯಕರ ಪರಸ್ಪರ ಕಚ್ಚಾಟ ಯಾವ ರೀತಿ ನಡೀತಾ ಇದೆ ಎಂದು ನಾವು ಹೇಳಬೇಕಾಗಿಲ್ಲ ಎಂದ ಅವರು, ಖರ್ಗೆಯವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರು ನಾಯಕರನ್ನು ಅಕ್ಕ- ಪಕ್ಕ ಕೂರಿಸಿಕೊಂಡು ಉಪದೇಶ ಮಾಡಿ ಸಲಹೆ ನೀಡಿ ಹೋಗಿದ್ದಾರೆ, ನಾವು ಕೊಟ್ಟಿದ್ದೇವಾ ಎಂದು ಪ್ರಶ್ನಿಸಿದರು.

ಉಪಚುನಾವಣೆ ಹೊತ್ತಲ್ಲಿ ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ! ಬಿಜೆಪಿಯಿಂದ ಕಾಂಗ್ರೆಸ್‌ಗೆ ಸೇರ್ತಾರಾ ಇನ್ನಷ್ಟು ಶಾಸಕರು?

ವಕ್ಫ್ ಆಸ್ತಿ ವಿಚಾರ ಯಾಕೆ ಪ್ರಾರಂಭವಾಯಿತು, ಇಷ್ಟು ದಿನ ಯಾಕೆ ಇರಲಿಲ್ಲ ಎಂದು ಪ್ರಶ್ನಿಸಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ‌ನ ದುರಾಡಳಿತ ಹೊರಬರಲಿಕ್ಕೆ ಪ್ರಾರಂಭವಾಗಿದೆ. ಕಾಂಗ್ರೆಸ್ ನ ಅಕ್ರಮ ಮುಚ್ಚಿಕೊಳ್ಳುವ ಪ್ರಯತ್ನ ಇದಾಗಿದೆ ಎಂದರು.

ಕೇಂದ್ರದ ಮೋದಿಯವರ ಕ್ಯಾಬಿನೆಟ್ ನಲ್ಲಿ ವಕ್ಫ್ ಸಂಬಂಧ ಚರ್ಚೆ ಆಗಿದೆ. ಇದೆಲ್ಲವನ್ನು ಅಂತಿಮ ಮಾಡಲಿಕ್ಕೆ ಕಾನೂನು ಬಲಿಷ್ಠ ವಾಗಿದೆ ಎಂದರು. ಬಿಜೆಪಿಯವರು ಸೇರಿ ಎಲ್ಲರೂ ಜೊತೆಗೂಡಿ ಚನ್ನಪಟ್ಟಣ ಸೇರಿದಂತೆ ಮೂರು ಕ್ಷೇತ್ರಗಳ ಕಡೆ ಕೆಲಸ ಮಾಡಲಾಗುತ್ತಿದ್ದೇವೆ ಎಂದರು. ಅಮಾವಾಸ್ಯೆ ಕಾರಣ ಚುಂಚನಗಿರಿ ಭೇಟಿ ಬಳಿಕ ಸಿದ್ಧಗಂಗಾ ಮಠಕ್ಕೆ ಬಂದು ಆಶೀರ್ವಾದ ಪಡೆದಿದ್ದಾಗಿ ತಿಳಿಸಿದರು.

ಮಹಿಳೆಯರಿಗೆ ಉಚಿತ ಬಸ್ ಸಾರಿಗೆ ಸೌಲಭ್ಯ ಒದಗಿಸಲಾಗಿರುವ ಶಕ್ತಿ ಯೋಜನೆಯ ಸ್ಥಗಿತ, ಇಲ್ಲವೇ ಮರು ಪರಿಶೀಲನೆ ಮಾಡುವಂತೆ ಡಿ.ಕೆ.ಶಿವಕುಮಾರ್ ಅವರಿಗೆ ಮಹಿಳೆಯರು ಕನಸಿನಲ್ಲಿ ಬಂದು ಕೇಳಿದ್ದಾರೆಯೇ? ಅಥವಾ ದೇವರು ಬಂದು ಹೇಳಿದ್ದಾರೆಯೇ? ಒಂದೊಂದಾಗಿ 5 ಗ್ಯಾರಂಟಿಗಳನ್ನು ನಿಲ್ಲಿಸಲು ಇದೊಂದು ಮೊದಲ ಹೆಜ್ಜೆ ಅಷ್ಟೇ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು.

ಮಹಿಳೆಯರು ಆರ್ಥಿಕವಾಗಿ ಬಲಾಢ್ಯರಾಗಿದ್ದಾರೆಯೇ?:

ಟ್ವೀಟ್ ಮೂಲಕ ಮಹಿಳೆಯರು ಶಕ್ತಿ ಯೋಜನೆಯನ್ನು ನಿಲ್ಲಿಸಿ ಎಂದು ಒತ್ತಾಯ ಮಾಡುತ್ತಿದ್ದಾರೆ. ಯಾರು ಟ್ವೀಟ್ ಮಾಡಿದ್ದಾರೆ? ಅಥವಾ ಮಹಿಳೆಯರು ಆರ್ಥಿಕವಾಗಿ ಬಲಾಢ್ಯರಾಗಿದ್ದಾರೆ ಎಂದು ಇವರಿಗೆ ಹೊಸ ಜ್ಞಾನೋದಯ ಆಗಿದೆಯಾ? ಕೇವಲ ಒಂದೂವರೆ ವರ್ಷದಲ್ಲಿ ಇವರು ಆರ್ಥಿಕವಾಗಿ ಬಲಾಢ್ಯರಾಗಿದ್ದಾರೆಯೇ? ಎಂದು ಪ್ರಶ್ನಿಸಿದರು.

ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬ್ರೈನ್ ವಾಷ್:

ಶಕ್ತಿ ಯೋಜನೆಯ ಮರು ಪರಿಶೀಲನೆಯ ನಾಟಕ ಗ್ಯಾರಂಟಿಗಳನ್ನು ಒಂದೊಂದಾಗಿಯೇ ತೆಗೆಯಲು ಮೊದಲ ಹಂತದ ಪ್ರಕ್ರಿಯೆ ಎಂದೇ ಭಾವಿಸಬೇಕಾಗುತ್ತದೆ. ಇದು ಗ್ಯಾರಂಟಿ ನಿಲ್ಲಿಸಲು ಒಂದು ಪೀಠಿಕೆ ಮಾತ್ರ. ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಗ್ಯಾರಂಟಿಗಳನ್ನೇ ಪ್ರಮುಖವಾಗಿ ಇವರು ಹೇಳುತ್ತಿದ್ದರು. ನುಡಿದಂತೆ ನಡೆದಿದ್ದೇವೆ ಎಂದು ಜನರ ಬ್ರೈನ್ ವಾಷ್ ಮಾಡುತ್ತಿದ್ದರು. ಇದರಿಂದ ಅಭಿವೃದ್ಧಿ ಕೆಲಸಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದರು ಎಂದು ಆರೋಪಿಸಿದರು.

ತೆರಿಗೆ ಅಧಿಕಾರಿಗಳ ಸಭೆ ಮಾಡಿ ಇನ್ನೂ ಹೆಚ್ಚುವರಿಯಾಗಿ 10 ಸಾವಿರ ಕೋಟಿ ವಸೂಲಿ ಮಾಡುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಅಂದರೆ, ಇನ್ನಷ್ಟು ಸುಲಿಗೆ ಮಾಡಿ ಅಂತ ಅರ್ಥ ಅಲ್ಲವೇ? ಇದು ಯಾವ ಪುರುಷಾರ್ಥಕ್ಕೆ? ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಕುಮಾರಸ್ವಾಮಿಯಿಂದ ನಯಾಪೈಸೆ ಉಪಯೋಗವಾಗಲಿಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್

ಗ್ಯಾರಂಟಿ ಬಗ್ಗೆ ನಮಗೆ ಹೊಟ್ಟೆ ಉರಿ ಇಲ್ಲ :

ನಮಗೆ ಗ್ಯಾರಂಟಿ ಬಗ್ಗೆ ಯಾವುದೇ ಹೊಟ್ಟೆ ಉರಿ ಇಲ್ಲ. ಗ್ಯಾರಂಟಿ ಬೇಕಾದರೆ ಡಬಲ್ ಮಾಡಿಕೊಳ್ಳಿ. ಆದರೆ ರಾಜ್ಯವನ್ನು ದಿವಾಳಿ ಮಾಡಬೇಡಿ. ಸರ್ಕಾರದ ಅಭಿವೃದ್ಧಿ ಶೂನ್ಯ ಆಗಿದೆ. ಬೇರೆ ದೇಶಗಳಲ್ಲಿ ಉಂಟಾಗಿರುವ ಆರ್ಥಿಕ ಅರಾಜಕತೆ ನಮ್ಮ ರಾಜ್ಯಕ್ಕೆ ಬರಬಾರದು ನನ್ನ ನಮ್ಮ ಕಳಕಳಿ ಎಂದು ಕುಮಾರಸ್ವಾಮಿ ಹೇಳಿದರು.

click me!