ಡಿಕೆಶಿ ಅಕ್ರಮದ ಬಗ್ಗೆ ಟನ್‌ಗಟ್ಟಲೇ ಸಾಕ್ಷಿ ನನ್ನ ಬಳಿಯಿವೆ- ಹೆಚ್‌ಡಿಕೆ; ಎಷ್ಟೇ ಟನ್‌ ದಾಖಲೆ ಇದ್ರೂ ಬಿಡುಗಡೆ ಮಾಡಲಿ -ಡಿಕೆಶಿ!

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬಳ್ಳಾರಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ತಮ್ಮ ಬಳಿ ಟನ್‌ಗಟ್ಟಲೆ ದಾಖಲೆಗಳಿವೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಹಿಂದೆ ಯಡಿಯೂರಪ್ಪ ತನಿಖೆ ನಡೆಸಿದರೂ ಏನೂ ಸಿಕ್ಕಿರಲಿಲ್ಲ ಎಂದಿದ್ದಾರೆ.

Union Minister HD Kumaraswamy's statement on illegal mining in the name of DK Shivakumar Benami rav

ಬೆಂಗಳೂರು: ಬಳ್ಳಾರಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅಕ್ರಮ ಗಣಿಗಾರಿಕೆ ಮಾಡಿರುವ ಬಗ್ಗೆ ನನ್ನ ಬಳಿ ಟನ್‌ಗಟ್ಟಲೆ ದಾಖಲೆಗಳಿದ್ದು, ಅನಗತ್ಯವಾಗಿ ನನ್ನನ್ನು ಕೆಣಕುವುದು ಒಳ್ಳೆಯದಲ್ಲ ಎಂದು ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಶನಿವಾರ ಜೆಡಿಎಸ್‌ ಕಚೇರಿ ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾನು ಕನಕಪುರದಲ್ಲಷ್ಟೇ ಬಂಡೆ ಒಡೆದಿದ್ದೇನೆ. ಬಳ್ಳಾರಿಗೂ, ನನಗೂ ಏನು ಸಂಬಂಧ ಎಂದು ಉಪಮುಖ್ಯಮಂತ್ರಿ ಹೇಳಿಕೊಂಡಿದ್ದಾರೆ. ಆದರೆ, ಅವರು ಬಳ್ಳಾರಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದ್ದಕ್ಕೆ ನನ್ನ ಬಳಿ ಟನ್‌ಗಟ್ಟಲೆ ದಾಖಲೆಗಳಿವೆ. ನಾನೇನು ಗಾಳಿಯಲ್ಲಿ ಗುಂಡು ಹೊಡೆಯುತ್ತಿಲ್ಲ, ಇರುವ ಸತ್ಯ ಹೇಳುತ್ತಿದ್ದೇನೆ ಎಂದು ಹೇಳಿದರು.

Latest Videos

ಸಾಯಿ ವೆಂಕಟೇಶ್ವರ ಮೈನಿಂಗ್‌ ವಿಚಾರದಲ್ಲಿ ಪ್ರಕರಣ ದಾಖಲಿಸಿ ನಮ್ಮ ಕುಟುಂಬದ್ದೇನಿದೆ ಎಂಬುದನ್ನು ಈ ಹಿಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹುಡುಕಿಸಿದ್ದರು. ಆದರೆ, ಏನೂ ಸಿಕ್ಕಿರಲಿಲ್ಲ. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ನನ್ನ ಮೇಲೆ ನಾಲ್ಕು ಪ್ರಕರಣ ಹಾಕಿಸಿದ್ದರು. ಸಾಯಿ ವೆಂಕಟೇಶ್ವರ, ಜಂತಕಲ್ ಮೈನಿಂಗ್, ಡಿನೋಟಿಫಿಕೇಶನ್ ಪ್ರಕರಣ ಹಾಕಿದ್ದರು. ಇದಾಗಿ 17 ವರ್ಷವಾಗಿದ್ದು, ಒಂದು ತನಿಖೆ ನಡೆಸುವುದಕ್ಕೂ ಆಗಿಲ್ಲ. ಆಗ ಸ್ಪೈಸ್ ಜೆಟ್ ವೇಗದಲ್ಲಿ ತನಿಖೆ ಮಾಡಿದರು ಎಂದು ಕಿಡಿಕಾರಿದರು.

ಇದನ್ನೂ ಓದಿ: ರಾಜಣ್ಣ ಹನಿ ಟ್ರಾಪ್ ಕೇಸ್ ಮುಗಿಸಿ ಆಯ್ತು, ರಾಜ್ಯ ಸರ್ಕಾರದ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

ಎಷ್ಟು ಕಂಪನಿ ಹೊಂದಿದ್ದಾರೆ?:

ಬಳ್ಳಾರಿಗೆ ಹೋಗಿಯೇ ಇಲ್ಲ ಎಂದು ಡಿ.ಕೆ.ಶಿವಕುಮಾರ್‌ ಹೇಳುತ್ತಾರೆ. ಆದರೆ ನಗರಾಭಿವೃದ್ಧಿ ಸಚಿವರಾಗಿ ಕಬ್ಬಿಣದ ಅದಿರು ಬೇಕೆಂದು ಕೇಂದ್ರ ಸಚಿವರಿಗೆ ಪತ್ರ ಬರೆಯುತ್ತಾರೆ. ಅವರು ಎಷ್ಟು ಕಂಪನಿಗಳನ್ನು ಹೊಂದಿದ್ದಾರೆ, ಎಷ್ಟು ಅದಿರು ಲೂಟಿ ಹೊಡೆದಿದ್ದಾರೆ? ಯಾವ ದರ್ಜೆಯ ಅದಿರನ್ನು ಲೂಟಿ ಹೊಡೆಯಲಾಗಿದೆ? ಅಣ್ಣ-ತಮ್ಮಂದಿರ ಬೇನಾಮಿ ಕಂಪನಿಗಳ ವ್ಯವಹಾರಗಳೇನು ಎಂಬುದರ ಬಗ್ಗೆ ನನ್ನ ಬಳಿ ದಾಖಲೆಗಳಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಗುತ್ತಿಗೆ ಮೀಸಲು ಶ್ವೇತಪತ್ರ ಹೊರಡಿಸಿ:ಮುಸ್ಲಿಮರಿಗೆ ಗುತ್ತಿಗೆ ಮೀಸಲು ಸೇರಿ ಯಾರು, ಯಾರಿಗೆ ಗುತ್ತಿಗೆ ಮೀಸಲು ನೀಡಿದ್ದಾರೋ? ಅದರಿಂದ ಅವರು ಎಷ್ಟು ಆರ್ಥಿಕವಾಗಿ ಸಬಲರಾಗಿದ್ದಾರೆ ಎಂಬ ಬಗ್ಗೆ ಜನರಿಗೆ ಮಾಹಿತಿ ನೀಡಲು ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದರು.

ದಾಖಲೆ ಬಿಡುಗಡೆ ಮಾಡಲಿ ಡಿಕೆಶಿ ಸವಾಲು

ನನ್ನ ವ್ಯವಹಾರದ ದಾಖಲೆಗಳಿದ್ದರೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಬಿಡುಗಡೆ ಮಾಡಲಿ. ಈ ಕುಮಾರಸ್ವಾಮಿ ಅಂಥವರಿಗೆಲ್ಲ ಹೆದರುವ ಮಗ ನಾನಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸವಾಲು ಹಾಕಿದ್ದಾರೆ.

ಇದನ್ನೂ ಓದಿ: ನನ್ನ, ಡಿಕೆಶಿ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಗೃಹ ಸಚಿವ ಪರಮೇಶ್ವರ್‌

ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿ ಎಚ್‌.ಡಿ.ಕುಮಾರಸ್ವಾಮಿ ಮಾಡಿರುವ ಆರೋಪಕ್ಕೆ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್‌, ನನ್ನ ವ್ಯವಹಾರದ ದಾಖಲೆಗಳು ಅವರ ಬಳಿಯಿದ್ದರೆ ಬಿಡುಗಡೆ ಮಾಡಲಿ. ಟನ್‌ ಅಷ್ಟೇ ಅಲ್ಲ, ಭೂಲೋಕ ಎಷ್ಟಿದೆಯೋ ಅಷ್ಟೂ ದಾಖಲೆಗಳನ್ನು ಬಿಡುಗಡೆ ಮಾಡಲಿ. ಅವರು ಏನು ಮಾಡುತ್ತಿದ್ದಾರೆ ಎಂಬುದು ನನಗೂ ತಿಳಿದಿದೆ. ನನ್ನ ಆಸ್ತಿ, ನನ್ನ ಮಕ್ಕಳ ಆಸ್ತಿ, ನನ್ನ ಕುಟುಂಬದವರ ಆಸ್ತಿ ದಾಖಲೆಗಳನ್ನೆಲ್ಲ ತಂದಿಟ್ಟುಕೊಂಡಿದ್ದಾರೆ. ಅವೆಲ್ಲವನ್ನೂ ಬಿಡುಗಡೆ ಮಾಡಲಿ ಎಂದು ತಿರುಗೇಟು ನೀಡಿದರು.

ನಾನು ಏನಾದರೂ ತಪ್ಪು ಮಾಡಿದ್ದರೆ ಯಾವ ಶಿಕ್ಷೆಗೆ ಬೇಕಾದರೂ ಒಳಗಾಗುತ್ತೇನೆ. ಅವರು ಎಲ್ಲ ದಾಖಲೆಗಳನ್ನೂ ಬಿಡುಗಡೆ ಮಾಡಲಿ ಎಂದು ಹೇಳಿದರು.

vuukle one pixel image
click me!