RSS, Dharmasthala ಅಂತ ಕಾಲಹರಣ ಮಾಡೋದು ಬಿಟ್ಟು ರೈತರ ಕಡೆ ಗಮನ ಕೊಡಿ: ಎಚ್‌ಡಿಕೆ ಕಿಡಿ

Kannadaprabha News, Ravi Janekal |   | Kannada Prabha
Published : Oct 26, 2025, 07:01 AM IST
Kumaraswamy criticizes Karnataka government

ಸಾರಾಂಶ

ರಾಜ್ಯ ಕಾಂಗ್ರೆಸ್‌ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಆರ್‌ಎಸ್‌ಎಸ್‌ ವಿಷಯವನ್ನು ಮುನ್ನೆಲೆಗೆ ತಂದಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಆರ್‌ಎಸ್‌ಎಸ್‌ ಬಗ್ಗೆ  ಬಿಟ್ಟು, ಅಭಿವೃದ್ಧಿ ಹಾಗೂ ರೈತರ ಸಮಸ್ಯೆ ಪರಿಹಾರದತ್ತ ಗಮನ ಕೊಡಿ ಎಂದು ಸಲಹೆ ನೀಡಿದ್ದಾರೆ.

ಬೆಂಗಳೂರು (ಅ.26): ಆರ್‌ಎಸ್‌ಎಸ್‌ ದಶಕಗಳಿಂದ ಪಥ ಸಂಚಲನ ಮಾಡಿಕೊಂಡು ಬರುತ್ತಿದೆ. ರಾಜ್ಯ ಕಾಂಗ್ರೆಸ್‌ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಆರ್‌ಎಸ್‌ಎಸ್‌ ವಿಷಯ ಮುನ್ನೆಲೆಗೆ ತಂದಿದೆ ಎಂದು ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆರ್‌ಎಸ್‌ಎಸ್‌ ಸಂಘಟನೆ ನಿಷೇಧಿಸಲು ಸಾಧ್ಯವಿಲ್ಲ. ಅವರ ಬಗ್ಗೆ ನಿತ್ಯ ಏಕೆ ಮಾತನಾಡುವಿರಿ? ಅವರ ಪಾಡಿಗೆ ಅವರು ಏನೋ ಮಾಡಿಕೊಂಡು ಹೋಗುತ್ತಿದ್ದಾರೆ. ಆರ್‌ಎಸ್‌ಎಸ್‌ ಬಗ್ಗೆ ಮಾತು ಬಿಟ್ಟು ಅಭಿವೃದ್ಧಿ ಕಡೆಗೆ ಗಮನ ಕೊಡಿ. ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಕೊಡುವ ಕೆಲಸ ಮಾಡಿ. ಬರೀ ಟೀಕೆಗಳಿಂದ ಉಪಯೋಗವಿಲ್ಲ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ಹರಿಹಾಯ್ದರು.

ಸರ್ಕಾರ ಸುಖಾಸುಮ್ಮನೆ ಕಾಲಹರಣ ಮಾಡುತ್ತಿದೆ

ಕೆಲ ದಿನಗಳ ಕಾಲ ಧರ್ಮಸ್ಥಳದ ಮೇಲೆ ಬಿದ್ದಿರಿ. ಎಸ್‌ಐಟಿ ಮಾಡಿ ಕಾಲಹರಣ ಮಾಡಿದಿರಿ. ಈಗ ಮಹೇಶ್‌ ಶೆಟ್ಟಿ ತಿಮರೋಡಿಗೆ ಒಂದು ಕೇಸಿನಲ್ಲಿ ರಿಲೀಫ್‌ ಸಿಕ್ಕಿದೆ. ಈ ಸರ್ಕಾರದ ಕಾಲದಲ್ಲಿ ಯಾವುದೂ ತಾರ್ಕಿಕ ಅಂತ್ಯಕ್ಕೆ ಹೋಗುವುದಿಲ್ಲ. ಸುಖಾಸುಮ್ಮನೆ ಕಾಲಹರಣ ಮಾಡಿಕೊಂಡು ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಕಟುವಾಗಿ ಟೀಕಿಸಿದರು.

ಯಾರೂ ಬೇಕಾದರೂ ಸಿಎಂ ಆಗಬಹುದು:

ಡಾ.ಬಿ.ಆರ್‌.ಅಂಬೇಡ್ಕರ್ ಕೊಟ್ಟಿರುವ ಸಂವಿಧಾನದಲ್ಲಿ ‌ಯಾರು ಬೇಕಾದರೂ ಈ ದೇಶದಲ್ಲಿ ರಾಜಕೀಯವಾಗಿ ಮುಖ್ಯಮಂತ್ರಿ ಆಗಬಹುದು. ಅದು ಅವರ ಪಕ್ಷದ ವಿಚಾರ. ಯಾರನ್ನು ಮುಖ್ಯಮಂತ್ರಿ ಮಾಡಬೇಕು ಅಥವಾ ಮಾಡಬಾರದು ಎಂಬುದನ್ನು ಅವರೇ ತೀರ್ಮಾನಿಸುತ್ತಾರೆ. ಅದನ್ನು ಕಟ್ಟಿಕೊಂಡು ನನಗೇನು ಆಗಬೇಕಿಲ್ಲ ಎಂದು ಪ್ರಶ್ನೆಯೊಂದಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯಿಸಿದರು.

ರಾಜ್ಯದಲ್ಲಿ ರೈತರು ಸಮಸ್ಯೆ ಅನುಭವಿಸುತ್ತಿದ್ದಾರೆ. ಅದರ ಬಗ್ಗೆ ಕೇಂದ್ರ ಸರ್ಕಾರಕ್ಕೆ ವರದಿ ಕೊಟ್ಟಿದ್ದಾರೋ ಅಥವಾ ಇಲ್ಲವೋ ಗೊತ್ತಿಲ್ಲ. ಆರ್‌ಎಸ್‌ಎಸ್‌ ನಿಷೇಧಿಸುವುದು ಮುಖ್ಯವಲ್ಲ. ಮೊದಲು ಜನರ ಸಮಸ್ಯೆಗಳನ್ನು ಪರಿಹರಿಸಿ ಎಂದು ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!