
ಬೆಂಗಳೂರು (ಡಿ.19) : ಕೇಂದ್ರ ಸರ್ಕಾರವು ಉದ್ಯಮ ಸ್ನೇಹಿ ನೀತಿಗಳನ್ನು ಜಾರಿಗೆ ಬದ್ಧವಾಗಿದ್ದು, ಶೀಘ್ರದಲ್ಲಿಯೇ ನೂತನ ಸಮಗ್ರ ಡಿಜಿಟಲ್ ಆರ್ಥಿಕತೆ ನಿಯಂತ್ರಣ ನೀತಿಯನ್ನು ಜಾರಿಗೆ ತರಲಿದೆ ಎಂದು ಕೇಂದ್ರ ಸರ್ಕಾರದ ರೇಲ್ವೆ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಇಸ್ಫೋಸಿಸ್, ವಿಪ್ರೋ, ಟಿಸಿಎಸ್, ಐಬಿಎಂ ಸೇರಿದಂತೆ ಐಟಿ, ಬಿಟಿ ವಲಯಕ್ಕೆ ಸೇರಿದ 25ಕ್ಕೂ ಹೆಚ್ಚು ಪ್ರಮುಖ ಕಂಪನಿಗಳ ಪ್ರಮುಖರ ಜತೆಗಿನ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಕೇಂದ್ರವು ಸದ್ಯದಲ್ಲೇ ನೂತನ ಸಮಗ್ರ ಡಿಜಿಟಲ್ ಆರ್ಥಿಕತೆ ನಿಯಂತ್ರಣ ನೀತಿಯನ್ನು ಜಾರಿಗೆ ತರಲಿದೆ. ಜತೆಗೆ ಮೇಕ್ ಇನ್ ಇಂಡಿಯಾ ಉಪಕ್ರಮಕ್ಕೆ ಪೂರಕವಾಗಿ ಸಂಶೋಧನೆ ಮತ್ತು ಅಭಿವೃದ್ಧಿ ನೀತಿಯನ್ನು ಮತ್ತಷ್ಟುನಿಖರಗೊಳಿಸಲಾಗುವುದು ಎಂದು ಹೇಳಿದರು.
ಮತ್ತಿಕೆರೆ ನೇತಾಜಿ ವೃತ್ತದಲ್ಲಿ ಅತ್ಯಾಧುನಿಕ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನೆ
ಸಭೆಯಲ್ಲಿ ಐಟಿ-ಬಿಟಿ ಸಚಿವ ಡಾ ಸಿ.ಎನ್.ಅಶ್ವತ್ಥನಾರಾಯಣ, ಐಟಿ ಬಿಟಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿ, ನಿರ್ದೇಶಕ ಡಾ ಶಿವಶಂಕರ, ಜೆಟ್‌ವರ್ಕ್ನ ಅಮೃತ್ ಆಚಾರ್ಯ, ನಾಸ್ಕಾಂನ ಕೆ.ಎಸ್.ವಿಶ್ವನಾಥ್, ಟಿಸಿಎಸ್‌ನ ಸುನೀಲ್ ದೇಶಪಾಂಡೆ, ಇಸ್ಫೋಸಿಸ್‌ನ ಕಾರ್ತಿಕ್ ನೀಲಕಂಠನ್, ಕಿಂಡ್ರಲ್‌ನ ಲಿಂಗರಾಜು, ಸೀಮನ್ಸ್‌ನ ಮನೋಜ್ ಪ್ರಸಾದ್, ಮರ್ಸಿಡಿಸ್ ಬೆಂಜ್‌ನ ಮನು ಸಾಳೆ ಪಾಲ್ಗೊಂಡಿದ್ದರು.
ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ನೋಡಲ್ ಅಧಿಕಾರಿಯ ನೇಮಕ.
ಅಗತ್ಯತೆಗಳ ವರದಿ ನೀಡಲು ಸೂಚನೆ
ರಾಜ್ಯದ ಐಟಿ, ಸ್ಟಾರ್ಚ್‌ಪ್ ಮತ್ತು ಇಎಸ್‌ಡಿಎಂ ವಲಯದ ಕಂಪನಿಗಳಿಗೆ ಸಂಬಂಧಿಸಿದಂತೆ ಏನೇನು ಮಾಡಬೇಕು ಎನ್ನುವ ವರದಿಯನ್ನು ಕೊಡುವಂತೆ ಸಚಿವ ಅಶ್ವಿನಿ ವೈಷ್ಣವ್ ಅವರು ಐಟಿ ವಿಷನ್ ಗ್ರೂಪ್ ಅಧ್ಯಕ್ಷ ಕ್ರಿಸ್ ಗೋಪಾಲಕೃಷ್ಣನ್, ಸ್ಟಾರ್ಟಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್ ಮತ್ತು ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್‌ನ ಅಧ್ಯಕ್ಷ ಡಾ.ಬಿ ವಿ ನಾಯ್ಡು ಅವರಿಗೆ ಅವರು ಸೂಚಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ