
ಹುಬ್ಬಳ್ಳಿ (ಫೆ.27): ರಾಜ್ಯಸಭಾ ಚುನಾವಣೆ ಫಲಿತಾಂಶದ ವೇಳೆ ಗೆಲುವು ಪಡೆದ ನಾಸಿರ್ ಹುಸೇನ್ ಬೆಂಬಲಿಗರು ವಿಧಾನಸೌಧದೊಳಗೇ 'ಪಾಕಿಸ್ತಾನ ಜಿಂದಾಬಾದ್' ಘೋಷಣೆ ಕೂಗಿರುವುದು ರಾಜ್ಯಾದ್ಯಂತ ವಿವಾದ ಭುಗಿಲೆದ್ದಿದೆ. ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು ದೇಶದ್ಕರೋಹಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ. ಈ ಘಟನೆ ಕುರಿತಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದು, ಪಾಕಿಸ್ತಾನ ಪರ ಘೋಷಣೆ ಕೂಗಿರುವ ದೇಶದ್ರೋಹಿಗಳನ್ನು ಮೊದಲು ಒದ್ದು ಒಳಗೆ ಹಾಕಲಿ ಎಂದು ಆಗ್ರಹಿಸಿದ್ದಾರೆ.
ರಾಜ್ಯ ಪೊಲೀಸ್ ಇಲಾಖೆ, ಗೃಹ ಸಚಿವರು ಮತ್ತು ಮುಖ್ಯಮಂತ್ರಿ ಅವರು ಆರೋಪಿಗಳನ್ನು ಬಂಧಿಸಲು ಕ್ರಮ ಕೈಗೊಳ್ಳಲಿ. ದೇಶದಲ್ಲಿ ಯಾವಾಗ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೋ ಆಗ ದೇಶ ದ್ರೋಹಿಗಳಿಗೆ ಮತ್ತು ಪಾಕಿಸ್ತಾನ ಸಮರ್ಥಕರಿಗೆ ಬಲ ಬಂದಂತೆ ಆಗುತ್ತಿದೆ. ಇಂದು ವಿಧಾನಸೌಧದಲ್ಲಿ ಕೇಳಿಬಂದಿರುವ ಪಾಕಿಸ್ತಾನ ಜಿಂದಾಬಾದ್ ಜೈಕಾರಕ್ಕೆ ಕಾಂಗ್ರೆಸ್ ಈವರೆಗೆ ಮಾಡಿರುವ ತುಷ್ಟೀಕರಣದ ರಾಜಕಾರಣವೇ ಕಾರಣ ಎಂದು ಜೋಶಿ ಅತ್ಯುಗ್ರವಾಗಿ ಖಂಡಿಸಿದ್ದಾರೆ.
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ: ಬಾಂಬೆಯ ತಾಜ್ ಹೋಟೆಲ್ನಲ್ಲಿ ಆದಂತಹ ಭಯ ನನಗೆ ಆಗ್ತಿದೆ: ಆರ್ ಅಶೋಕ್
ಈ ಕೂಡಲೇ ರಾಜ್ಯ ಪೊಲೀಸ್ ಇಲಾಖೆ ಮತ್ತು ಗೃಹ ಇಲಾಖೆ ಇದರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೇ ಘಟನೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಹಿರಂಗವಾಗಿ ಕ್ಷಮೆ ಕೇಳಬೇಕು. ರಾಹುಲ್ ಗಾಂಧಿ ಏನು ಹೇಳ್ತಾರೆ? ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಸಾಮಾನ್ಯ ಸಂಗತಿಯಲ್ಲ. ಕಾಂಗ್ರೆಸ್ ದೇಶ ದ್ರೋಹಕ್ಕೆ ಕುಮ್ಮಕ್ಕು ಕೊಡುವ ರೀತಿ ನಡೆದುಕೊಳ್ಳುತ್ತಿದೆ. ಈ ಬಗ್ಗೆ ರಾಹುಲ್ ಗಾಂಧಿ ಏನು ಹೇಳುತ್ತಾರೆ ಸ್ಪಷ್ಟಪಡಿಸಬೇಕು ಎಂದು ಸಚಿವ ಜೋಶಿ ಆಗ್ರಹಿಸಿದ್ದಾರೆ.
'ಕರ್ಕಶವಾದ ಲೌಡ್ ಸ್ಪೀಕರ್ ಅವನು..' ಪ್ರಧಾನಿ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ ಪ್ರಕಾಶ್ ರಾಜ್!
ಕಾಂಗ್ರೆಸ್ ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯಗೆ ದೇಶ, ದೇಶಭಕ್ತಿ, ಭಾರತ ಮಾತೆ ಬಗ್ಗೆ ಕಿಂಚಿತ್ತಾದರೂ ಗೌರವ ಇದ್ದರೆ ಮೊದಲು ಘೋಷಣೆ ಕೂಗಿದವರನ್ನು ಒದ್ದು ಒಳಗೆ ಹಾಕಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ