
ಹುಬ್ಬಳ್ಳಿ (ನ.12): ಯುವಕನೋರ್ವನಿಗೆ ಠಾಣೆಗೆ ಕರೆಯಿಸಿ ಮನಬಂದಂತೆ ಥಳಿಸಿದ್ದ ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಧಾರವಾಡ ಶಹರ ಠಾಣೆ ಇನ್ಸ್‌ಪೆಕ್ಟರ್ ಕಾಡದೇವರಮಠಗೆ ತರಾಟೆ. ಯುವಕನಿಗೆ ಹೊಡೆಯಲು ನಿಮಗೇನು ಅಧಿಕಾರ ಇದೆ. ನಿಮ್ಮನ್ನು ಮನೆಗೆ ಕಳಿಸುತ್ತೇನೆ, ಸುಮ್ಮನೆ ಬಿಡಲ್ಲ. ಕಾಂಗ್ರೆಸ್ ಸರ್ಕಾರದ ಮಾತು ಕೇಳಿ ಮನಬಂದಂತೆ ವರ್ತಿಸುತ್ತಿದ್ದೀರಿ ಎಂದು ಧಾರವಾಡ ಶಹರ ಠಾಣೆ ಇನ್ಸ್‌ಪೆಕ್ಟರ್ ಕಾಡದೇವರಮಠ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಮತ್ತೆರಡು ಡಿಸಿಎಂ ಹುದ್ದೆ ಸೃಷ್ಟಿಗೆ ಸಿದ್ದರಾಮಯ್ಯ ಮುಂದಾಗಿದ್ದಾರೆ: ಜೋಶಿ
ಧಾರವಾಡ ಶಹರ ಠಾಣೆ ಇನ್ಸ್‌ಪೆಕ್ಟರ್ ಎನ್.ಸಿ. ಕಾಡದೇವರಮಠ ಅವರನ್ನು ಮನೆಗೆ ಕರೆಸಿದ್ದ ಕೇಂದ್ರ ಸಚಿವರು, ಬಿಜೆಪಿ ಕಾರ್ಯಕರ್ತ ಎಂಬ ಕಾರಣಕ್ಕೆ ದಬ್ಬಾಳಿಕೆ ಮಾಡಿದ್ದೀರಿ, ನಾವೂ ಅಧಿಕಾರಕ್ಕೆ ಬರುತ್ತೇವೆ, ಎಚ್ಚರಿಕೆಯಿಂದ ಇರಿ ಎಂದು ಚಳಿ ಬಿಡಿಸಿದ್ದಾರೆ.
ಯುವಕನಿಗೆ ಹೊಡೆಯಲು ನಿಮಗೇನು ಅಧಿಕಾರ ಇದೆ. ನಿಮ್ಮನ್ನು ಮನೆಗೆ ಕಳಿಸುತ್ತೇನೆ. ನಾನು ಸುಮ್ಮನೆ ಬಿಡಲ್ಲ. ಕಾಂಗ್ರೆಸ್ ಸರ್ಕಾರದ ಮಾತು ಕೇಳಿಕೊಂಡು ಮನಬಂದಂತೆ ವರ್ತಿಸುತ್ತಿದ್ದೀರಿ. ಬಿಜೆಪಿ ಕಾರ್ಯಕರ್ತ ಅನ್ನೋ ಕಾರಣಕ್ಕೆ ದಬ್ಬಾಳಿಕೆ ಮಾಡಿದ್ದೀರಿ. ನಾವೂ ಅಧಿಕಾರಕ್ಕೆ ಬರುತ್ತೇವೆ ಎಚ್ಚರಿಕೆಯಿಂದ ಇರಿ ಎಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ. ಯುವಕನಿಗೆ ಥಳಿಸಿರುವ ಹಿನ್ನೆಲೆ ಮನೆಗೆ ಕರೆಸಿಕೊಂಡು ಇನ್ಸ್‌ಪೆಕ್ಟರ್‌ಗೆ ಎನ್‌ಸಿ ಕಾಡದೇವರಮಠ ಅವರಿಗೆ ತರಾಟೆಗೆ ತೆಗೆದುಕೊಂಡರು.
ಸತೀಶ್ ಜಾರಕಿಹೊಳಿ ಭಿನ್ನಮತಕ್ಕೆ ಸಿಎಂ ಸಿದ್ದರಾಮಯ್ಯರ ಕುಮ್ಮಕ್ಕು ಇದೆ: ಪ್ರಲ್ಹಾದ್ ಜೋಶಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ