ಕ್ರಿಮಿನಲ್‌ಗಳಿಗೆ ಕರ್ನಾಟಕ ಸ್ವರ್ಗವಾಗುತ್ತಿದೆ, ರಾಜ್ಯ ಸರ್ಕಾರದ ವಿರುದ್ಧ ರಾಜೀವ್‌ ಚಂದ್ರಶೇಖರ್‌ ಆಕ್ರೋಶ!

Published : Jul 12, 2023, 08:49 PM IST
ಕ್ರಿಮಿನಲ್‌ಗಳಿಗೆ ಕರ್ನಾಟಕ ಸ್ವರ್ಗವಾಗುತ್ತಿದೆ, ರಾಜ್ಯ ಸರ್ಕಾರದ ವಿರುದ್ಧ ರಾಜೀವ್‌ ಚಂದ್ರಶೇಖರ್‌ ಆಕ್ರೋಶ!

ಸಾರಾಂಶ

ಜೈನಮುನಿ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಪದೇ ಪದೇ ಪ್ರತಿಭಟನೆ ಮಾಡಿದ ಬಳಿಕವೇ ರಾಜ್ಯ ಪೊಲೀಸರು ಈ ವಿಷಯದಲ್ಲಿ ಕ್ರಮಕೈಗೊಂಡಿದ್ದಾರೆ ಎಂದು ಕರ್ನಾಟಕದ ರಾಜ್ಯಸಭಾ ಸಂಸದರೂ ಆಗಿರುವ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಹೇಳಿದ್ದಾರೆ.  

ನವದೆಹಲಿ (ಜು.12): ಬೆಳಗಾವಿಯಲ್ಲಿ ನಡೆದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜ ಅವರ ಭೀಕರ ಹಾಗೂ ಅಮಾನವೀಯ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕವು ಕೋಮುವಾದಿಗಳು ಮತ್ತು ಕ್ರಿಮಿನಲ್‌ಗಳಿಗೆ 'ಸುರಕ್ಷಿತ ಸ್ವರ್ಗ' ಆಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿ ವಿಡಿಯೋ ಶೇರ್ ಮಾಡಿದ್ದಾರೆ. ಈ ವಿಚಾರದಲ್ಲಿ ಬಿಜೆಪಿಯು ಸದನದ ಒಳಗೆ ಹಾಗೂ ಸದನದ ಹೊರಗೆ ಪ್ರತಿಭಟನೆ ಮಾಡಿದ ಬಳಿಕವಷ್ಟೇ ರಾಜ್ಯದ ಪೊಲೀಸರು ಈ ಪ್ರಕರಣದಲ್ಲಿ ಕ್ರಮ ತೆಗೆದುಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ರಾಹುಲ್‌ ಗಾಂಧಿ ಅವರ ಕಾಂಗ್ರೆಸ್‌ ಸರ್ಕಾರದ ಅಡಿಯಲ್ಲಿ ಕರ್ನಾಕಟಕವು ಕೆಲವೇ ತಿಂಗಳಲ್ಲಿ ಕೋಮುವಾದಿ ಮತ್ತು ಅಪರಾಧಿಗಳಿಗೆ ಸುರಕ್ಷಿತ ತಾಣವಾಗಿ ಬದಲಾಗಿದೆ ಎಂದ ಅವರು, ಜೈನ ಮುನಿಯ ಬರ್ಬರ ಹತ್ಯೆ ಆಘಾತಕಾರಿಯಾದದ್ದು ಎಂದಿದ್ದಾರೆ. ಭಾರತೀಯ ಜನತಾ ಪಾರ್ಟಿ ನಡೆಸಿದ ಸಾಕಷ್ಟು ನಿರಂತರ ಪ್ರತಿಭಟನೆಗಳ ಬಳಿಕವೇ ರಾಜ್ಯ ಪೊಲೀಸರು ಈ ಕುರಿತಾಗಿ ಕ್ರಮ ಕೈಗೊಂಡಿದ್ದಾರೆ. ಈ ಹಿಂದಿನ ಬಿಜೆಪಿ ಸರ್ಕಾರ ಮರಳಿ ಸ್ಥಾಪನೆ ಮಾಡಿದ್ದ ಕಾನೂನು ಸುವ್ಯವಸ್ಥೆ ಈಗ ಏನಾಯ್ತು ಎನ್ನುವ ಪ್ರಶ್ನೆಯನ್ನು ಸರ್ಕಾರಕ್ಕೆ ಕೇಳಬೇಕಿದೆ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ಹಲವಾರು ಅಪರಾಧ ಘಟನೆಗಳನ್ನು ಉಲ್ಲೇಖಿಸಿದ ರಾಜೀವ್‌ ಚಂದ್ರಶೇಖರ್, ಇದು ಪಟ್ಟಭದ್ರ ಹಿತಾಸಕ್ತಿಗಳ ಕೃತ್ಯವಾಗಿದೆ ಎಂದು ಹೇಳಿದರು.  ಏಕೆಂದರೆ ನಿರ್ದಿಷ್ಟ ಧರ್ಮ ಅಥವಾ ನಂಬಿಕೆಯೊಂದಿಗೆ ಸಂಬಂಧ ಹೊಂದಿರುವ ಜನರು ಗುರಿಯಾಗುವವರೆಗೆ ಕರ್ನಾಟಕ ಸುರಕ್ಷಿತ ಸ್ವರ್ಗ ಎಂದು ಅವರು ಭಾವಿಸುತ್ತಿರಬೇಕು ಎಂದಿದ್ದಾರೆ. ರಾಜ್ಯವು ಇಂತಹ ಕ್ರೂರ ಮತ್ತು ಹಿಂಸಾತ್ಮಕ ಅಪರಾಧಗಳ ಕೇಂದ್ರವಾಗುತ್ತಿರುವುದನ್ನು ನೋಡಿದರೆ ಬೇಸರವಾಗುತ್ತದೆ ಎಂದು ಆರೋಪಿಸಿದರು.

ಕಾಣೆಯಾಗಿದ್ದ ಜೈನ ಮುನಿ ಬರ್ಬರ ಹತ್ಯೆ: ಇಬ್ಬರ ಬಂಧನ, ಸಿಗದ ಮೃತದೇಹ

ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯಲ್ಲಿ ಮಠದ  ಜೈನ ಸನ್ಯಾಸಿ ಆಚಾರ್ಯ ಶ್ರೀ ಕಾಮಕುಮಾರ ನಂದಿ ಮಹಾರಾಜರನ್ನು ತುಂಡು ತುಂಡಾಗಿ ಕತ್ತರಿಸಿ, ಛಿದ್ರಗೊಂಡ ದೇಹದ ಭಾಗಗಳನ್ನು ನಿಷ್ಕ್ರಿಯಗೊಂಡ ಬೋರ್‌ವೆಲ್‌ಗೆ ಎಸೆಯಲಾಗಿತ್ತು. ಪ್ರಕರಣದಲ್ಲಿ ನಾರಾಯಣ ಬಸಪ್ಪ ಮಡಿ ಮತ್ತು ಹಾಸನದ ದಲಾಯತ್ ಎಂಬಿಬ್ಬರನ್ನು ಬಂಧಿಸಲಾಗಿದೆ. ಕೊಲೆಯ ಹಿಂದೆ ಹಣದ ಸಂಬಂಧವಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಬೆಳಗಾವಿ ಜೈನಮುನಿಗೆ ಕರೆಂಟ್‌ ಶಾಕ್‌ ಕೊಟ್ಟು ಕೊಲೆ: ದೇಹ ತುಂಡರಿಸಿ ಗದ್ದೆಗೆ ಬೀಸಾಡಿದರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!