
ಮೈಸೂರು(ಸೆ.27): ರಾಜ್ಯ ಸರ್ಕಾರದ ಬೇಜವಾಬ್ದಾರಿಯಿಂದಾಗಿ ಕಾವೇರಿ ಸಮಸ್ಯೆ ಉದ್ಭವವಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ನಾಯಕರು ಅವರವರ ಹೊಡೆದಾಟದಲ್ಲಿ ಮುಳುಗಿರಬೇಕು. ತಮಿಳುನಾಡನ್ನು ಓಲೈಸಿಕೊಳ್ಳಲು ಮುಂದಾಗಿರಬೇಕು, ಸರಿಯಾಗಿ ಕಾವೇರಿ ಕೊಳ್ಳದ ಸಮಸ್ಯೆ ಅಧ್ಯಯನ ಮಾಡದೇ ಇರಬಹುದು. ಈ ಕಾರಣದಿಂದಲೇ ಸರ್ಕಾರ ಪ್ರಾಧಿಕಾರಕ್ಕೆ ಸೂಕ್ತ ಮಾಹಿತಿ ನೀಡಿಲ್ಲ. ನ್ಯಾಯಾಲಯಕ್ಕೆ ಅಂಕಿ ಅಂಶ ನೀಡಿಲ್ಲ. ಇದರ ಬದಲು ಪ್ರಧಾನಿಯನ್ನು ದೂರುವ ಕೆಲಸ ಮಾಡುತ್ತಿದ್ದಾರೆ ಎಂದು ಖಂಡಿಸಿದರು.
ನಾನು ಸಿಎಂ, ಡಿಸಿಎಂ ದೆಹಲಿಗೆ ಬಂದಾಗಲೂ ಇದನ್ನೇ ಕೇಳಿದ್ದೆ. ಯಾಕೆ ನೀವು ಸರಿಯಾದ ಮಾಹಿತಿಯನ್ನು ನ್ಯಾಯಾಲಯ ಹಾಗೂ ಪ್ರಾಧಿಕಾರಕ್ಕೆ ಕೊಟ್ಟಿಲ್ಲ ಎಂದು ಕೇಳಿದ್ದೆ. ದೆಹಲಿಯಿಂದ ತಮಿಳುನಾಡು, ಕರ್ನಾಟಕಕ್ಕೆ ನಿಯೋಗ ಕಳುಹಿಸಿಲು ನಾವು ಮನವಿ ಮಾಡಿದ್ದೇವೆ. ಕೇಂದ್ರ ಜಲ ಸಂಪನ್ಮೂಲ ಸಚಿವರಿಗೆ ಮನವಿ ಮಾಡಿದ್ದೇವೆ ಎಂದರು.
ಹಣ ಪಡೆದು ಟಿಕೆಟ್ ನೀಡುವ ಸ್ಥಿತಿ ಬಿಜೆಪಿಯಲ್ಲಿಲ್ಲ: ಶೋಭಾ ಕರಂದ್ಲಾಜೆ
ನಮ್ಮ ನಂತರ ತಮಿಳುನಾಡಿಗೆ ಮಾನ್ಸೂನ್ ಸಮಸ್ಯೆ ಇರುವುದು. ನಮಗೆ ಹೀಗಾದರೆ, ಹಾಗಾದರೆ..ಎಂದು ರೇಗಳ ಮೇಲೆ ಸರ್ಕಾರ ನಿರ್ಧಾರಗಳನ್ನು ಮಾಡುತ್ತಿದೆ. ರೇಗಳನ್ನು ನಂಬಿಕೊಂಡು ನಿರ್ಧಾರ ಸಾಧ್ಯವಿಲ್ಲ ಎಂದರು.
ಒಮ್ಮೆ ತಮಿಳುನಾಡಿಗೆ ನೀರು ಹರಿಸಿದ ಮೇಲೆ ಅವರಿಗೆ ಹೆಚ್ಚಾದರೂ ವಾಪಸ್ಸು ಪಡೆಯಲು ಸಾಧ್ಯವಿಲ್ಲ. ತಮಿಳುನಾಡು ಆರಾಮಾಗಿ ನೀರನ್ನು ಬಳಸಿಕೊಳ್ಳುತ್ತಿದೆ ಎಂದು ಅವರು ಹೇಳಿದರು.
ಪ್ರಧಾನಿ ಕೇವಲ ತಮಿಳುನಾಡು ಅಥವಾ ಕರ್ನಾಟಕಕ್ಕೆ ಅಲ್ಲ. ಬೇರೆ ರಾಜ್ಯದ ಜಲ ವಿವಾದ ಸಹಾ ಪ್ರಧಾನಿ ಬಗೆಹರಿಸಬೇಕಿದೆ ಎಂದ ಅವರು, ಕೇಂದ್ರ ಸರ್ಕಾರ ಹಾಗೂ ಬಿಜೆಪಿ ರಾಜ್ಯದ ಕನ್ನಡಪರ ಸಂಘಟನೆ, ರೈತರ ಜೊತೆಗಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಆದರೆ ಆಸ್ತಿ ಪಾಸ್ತಿ ಹಾನಿ ಮಾಡಿದರೆ ನಮಗೆ ನಷ್ಟ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ