ಭದ್ರಾ ಮೇಲ್ದಂಡೆ ಯೋಜನೆಗೆ ಘೋ ಷಣೆ ಮಾಡಿದ್ದ ಹಣವನ್ನು ಕಡಿತಗೊಳಿಸಲಾಗುವುದು ಎನ್ನುವ ಸುದ್ದಿಯಿದೆ. ಇದರ ಬಗ್ಗೆ ಇನ್ನೂ ಸ್ಪಷ್ಟವಾದ ಮಾಹಿತಿ ಇಲ್ಲ. ಅನುದಾನ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ. ಯೋಜನೆಯ ವಿವರಗಳನ್ನು ಕಳುಹಿ ಸಲಾಗಿದ್ದು, ಇದರ ಬಗ್ಗೆ ಹೆಚ್ಚಿನ ಗಮನ ಹರಿಸಲಾಗಿದೆ: ಡಿಸಿಎಂ ಡಿ.ಕೆ.ಶಿವಕುಮಾರ್
ನವದೆಹಲಿ(ಜ.08): ಭದ್ರಾ ಮೇಲ್ದಂಡೆ ಯೋಜನೆಗೆ ಈ ಹಿಂದೆ ಘೋಷಣೆ ಮಾಡಿದ್ದ ₹5,300 ಕೋಟಿ ಅನುದಾನ ಬಿಡುಗಡೆ ಸೇರಿ ಕರ್ನಾಟಕದ ನೀರಾವರಿ ಯೋಜನೆಗಳು ಹಾಗೂ ಪೆನ್ಸಾರ್‌ನದಿಯ ಉಪನದಿ ಮಾರ್ಕಂ ಡೇಯ ನದಿಗೆ ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಎತ್ತಿರುವ ತಕರಾರಿನ ಕುರಿತು ಕೇಂದ್ರ ಸಚಿವ ವಿ.ಸೋಮಣ್ಣ ಅವರ ಜತೆ ಚರ್ಚೆ ನಡೆಸಲಾಯಿತು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
ಕೇಂದ್ರ ಜಲಶಕ್ತಿ ಹಾಗೂ ರೈಲ್ವೆಖಾತೆಗಳ ರಾಜ್ಯ ಸಚಿವ ವಿ.ಸೋಮಣ್ಣ ಅವರ ಭೇಟಿ ಬಳಿಕ ದೆಹಲಿಯಲ್ಲಿ ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್ ಅವರು, ಭದ್ರಾ ಮೇಲ್ದಂಡೆ ಯೋಜನೆಗೆ ಘೋ ಷಣೆ ಮಾಡಿದ್ದ ಹಣವನ್ನು ಕಡಿತಗೊಳಿಸಲಾಗುವುದು ಎನ್ನುವ ಸುದ್ದಿಯಿದೆ. ಇದರ ಬಗ್ಗೆ ಇನ್ನೂ ಸ್ಪಷ್ಟವಾದ ಮಾಹಿತಿ ಇಲ್ಲ. ಅನುದಾನ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ. ಯೋಜನೆಯ ವಿವರಗಳನ್ನು ಕಳುಹಿ ಸಲಾಗಿದ್ದು, ಇದರ ಬಗ್ಗೆ ಹೆಚ್ಚಿನ ಗಮನ ಹರಿಸಲಾಗಿದೆ ಎಂದು ಹೇಳಿದರು.
ಡಿಕೆಶಿ ನೇತೃತ್ವದಲ್ಲಿ ಭದ್ರಾ ಮೇಲ್ದಂಡೆ ಪರಿಶೀಲನೆ: ಸಚಿವ ಡಿ.ಸುಧಾಕರ್
ತಮಿಳುನಾಡಿನವರು ಪೆನ್ನಾರ್ ನದಿ ನೀರಿನ ವಿಚಾರವಾಗಿ ಕಳೆದ ಜ.2ರಂದು ಅಫಿಡವಿಟ್ ಸಲ್ಲಿಸಿದ್ದಾರೆ. 3 ವಾರದಲ್ಲಿ ತೀರ್ಮಾನ ಮಾಡಬೇಕಿರುವ ಕಾರಣಕ್ಕೆ ಅಫಿಡವಿಟ್ ಸಲ್ಲಿಕೆ ಮಾಡಲು ತಿಳಿಸಿದ್ದರು. ವಿಧಾನಸಭೆ ಚಳಿಗಾಲದ ಅಧಿವೇಶನವಿದ್ದ ಕಾರಣಕ್ಕೆ ನಮ್ಮಿಂದ ವಿಳಂಬವಾಯಿತು. ನಾವು ದಿನಾಂಕ ವಿಸ್ತರಣೆ ಮಾಡಿ ಎಂದು ಮನವಿ ಮಾಡಿದ್ದೇವೆ ಎಂದರು.
ಎರಡು ರಾಜ್ಯಗಳ ಪ್ರತಿನಿಧಿಗಳನ್ನು ಸೇರಿಸಿ ಮಾತುಕತೆ ನಡೆಸಬೇಕಿರುವ ಕಾರಣಕ್ಕೆ ಶೀಘ್ರದಲ್ಲೇ ಸಭೆಗೆ ಒಂದು ದಿನಾಂಕವನ್ನು ಅಂತಿಮಗೊಳಿಸುವುದಾಗಿ ಹೇಳಿದ್ದಾರೆ. ಪೆನ್ನಾರ್ ನದಿ ನೀರಿನ ವಿಚಾರವಾಗಿ ನಿಮ್ಮಲ್ಲೇ ಚರ್ಚೆ ನಡೆಸಿ ಬಗೆಹರಿಸಿಕೊಳ್ಳಿ ಎನ್ನುವ ಸುಪ್ರೀಂ ಕೋರ್ಟ್ ನಿರ್ದೇಶನವಿದೆ ಎಂದರು.
ಭದ್ರಾ ಮೇಲ್ದಂಡೆ ಬಗ್ಗೆ ಡಿಕೆಶಿ ತಪ್ಪು ಗ್ರಹಿಕೆ: ಗೋವಿಂದ ಕಾರಜೋಳ
ಈ ನದಿ ನೀರಿನ ವಿಚಾರದಲ್ಲಿ ತಮಿಳುನಾಡಿಗೆ ಯಾವುದೇ ತೊಂದರೆಯಾಗುವುದಿಲ್ಲ. ಅಲ್ಲದೇ ಕೋಲಾರದ ನೀರಿನ ಸಮಸ್ಯೆ ಬಗ್ಗೆ ಎಲ್ಲರಿಗೂ ಅರಿವಿದೆ. ಕೋಲಾರದ ಕೆರೆಗಳಿಗೆ ವೃಷಭಾವತಿ ಸೇರಿ ಕೆ.ಸಿ ವ್ಯಾಲಿ ಯೋಜನೆಯಿಂದ ಬಳಕೆ ಯಾದ ನೀರನ್ನು ಶುದ್ದಿಕರಿಸಿ ತುಂಬಿಸಲಾಗುತ್ತಿದೆ. ಈ ಯೋಜನೆಯ ಬಗ್ಗೆ ಈ ಹಿಂದೆ ಕೇಂದ್ರ ಸರ್ಕಾರವೂ ಮೆಚ್ಚುಗೆ ವ್ಯಕ್ತಪಡಿಸಿತ್ತು ಎಂದರು.
ಪೆನ್ನಾರ್ ನದಿ ನೀರಿನ ವಿವಾದ ಕುರಿತು ಟ್ರಿಬ್ಯೂನಲ್ ಮೂಲಕ ಹೋದರೆ ತಡವಾಗುತ್ತದೆ ಹಾಗೂ ಕೋರ್ಟ್ ಮತ್ತು ವಕೀಲರ ವೆಚ್ಚ ದುಬಾರಿಯಾಗುತ್ತದೆ. ಆದ ಕಾರಣಕ್ಕೆ ಸರ್ಕಾರದ ಮಟ್ಟದಲ್ಲೇ ಬಗೆಹರಿಸಿಕೊಳ್ಳಲು ನಾವು ನೋಡುತ್ತಿದ್ದೇವೆ. ಈಗಾಗಲೇ ಅರಣ್ಯ ಇಲಾಖೆಯವರು ಅನುಮತಿ ನೀಡುತ್ತೇವೆ ಎಂದು ಹೇಳಿದ್ದಾರೆ. ಈ ವಿಚಾರವಾಗಿ ಮಾತನಾಡಲು ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಬೇಕಿತ್ತು. ಅವರು ಲಭ್ಯವಿಲ್ಲ. ಇದರ ನಡುವೆ ಇತರೇ ಸಚಿವರನ್ನು ಇನ್ನೊಮ್ಮೆ ಭೇಟಿಯಾಗುವೆ ಎಂದರು.