ಹೆದ್ದಾರಿ 75ರ ದೋಣಿಗಾಲ್ ಗ್ರಾಮದಿಂದ ಮಾರನಹಳ್ಳಿ ಗ್ರಾಮದವರೆಗೆ ಗುರುವಾರ ರಾತ್ರಿ ಮತ್ತಷ್ಟು ಭೂಕುಸಿತ ಸಂಭವಿಸಿದೆ. ಇದರಿಂದಾಗಿ, ಮಂಗಳೂರು-ಬೆಂಗಳೂರು ನಡುವಿನ ಸಂಚಾರ ಬಂದ್ ಆಗಿತ್ತು. ಬಳಿಕ, ಮಣ್ಣು ತೆರವುಗೊಳಿಸಲಾಗಿದ್ದು, ಶುಕ್ರವಾರ ಮಧ್ಯಾಹ್ನದಿಂದ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.
ಸಕಲೇಶಪುರ(ಆ.03): ಪದೇ ಪದೆ ಭೂಕುಸಿತ ಸಂಭವಿಸುತ್ತಿರುವ ತಾಲೂಕಿನ ದೊಡ್ಡತಪ್ಪಲೆ ಹಾಗೂ ಇನ್ನಿತರ ಸ್ಥಳಗಳಿಗೆ ಶುಕ್ರವಾರ ಭೂಗರ್ಭ ಶಾಸ್ತ್ರಜ್ಞರ ತಂಡ ಭೇಟಿ ನೀಡಿತ್ತು. ಈ ಸಂದರ್ಭದಲ್ಲಿ ಅಲ್ಲಿನ ಮಣ್ಣು ಮತ್ತು ಕಲ್ಲಿನ ಮಾದರಿಗಳನ್ನು ಸಂಗ್ರಹಿಸಿ ಕೊಂಡೊಯ್ಯಲಾಗಿದೆ. ಅತಿಯಾದ ಮಳೆಯಿಂದಾಗಿ ಭೂಮಿಯ ಪದರಗಳ ಒಳಗೆ ನೀರು ಸೇರಿ ಕೊಂಡು ಭೂಕುಸಿತ ಆಗುತ್ತಿದೆ.
ಹಾಗೆಯೇ ರಸ್ತೆ ಅಗಲೀಕರಣಕ್ಕಾಗಿ ಅವೈಜ್ಞಾನಿಕವಾಗಿ ಗುಡ್ಡಗಳನ್ನು ಯಂತ್ರಗಳಿಂದ ಕತ್ತರಿಸುತ್ತಿರುವುದು ಭೂಕುಸಿತಕ್ಕೆ ಮೇಲ್ನೋಟದ ಕಾರಣಗಳಾಗಿವೆ ಎಂದು ತಂಡ ಅಭಿಪ್ರಾಯ ಪಟ್ಟಿದೆ.
ಶಿರೂರು ಗುಡ್ಡ ಆಯ್ತು, ಈಗ ಹಾಸನದ ಶಿರಾಡಿ ಘಾಟ್ ರಸ್ತೆ ಕುಸಿತ; ಸಾಲುಗಟ್ಟಿ ನಿಂತ ವಾಹನಗಳು
ಈ ಮಧ್ಯೆ, ತಾಲೂಕಿನಲ್ಲಿ ಜಿಟಿಜಿಟಿ ಮಳೆ ಮುಂದುವರಿದಿದ್ದು, ರಾಷ್ಟ್ರೀಯ ಹೆದ್ದಾರಿ 750 ಶಿರಾಡಿ ಘಾಟ್‌ನಲ್ಲಿ ಮತ್ತಷ್ಟು ಭೂಕುಸಿತ ಸಂಭವಿಸಿದೆ. ಹೆದ್ದಾರಿ 75ರ ದೋಣಿಗಾಲ್ ಗ್ರಾಮದಿಂದ ಮಾರನಹಳ್ಳಿ ಗ್ರಾಮದವರೆಗೆ ಗುರುವಾರ ರಾತ್ರಿ ಮತ್ತಷ್ಟು ಭೂಕುಸಿತ ಸಂಭವಿಸಿದೆ. ಇದರಿಂದಾಗಿ, ಮಂಗಳೂರು-ಬೆಂಗಳೂರು ನಡುವಿನ ಸಂಚಾರ ಬಂದ್ ಆಗಿತ್ತು. ಬಳಿಕ, ಮಣ್ಣು ತೆರವುಗೊಳಿಸಲಾಗಿದ್ದು, ಶುಕ್ರವಾರ ಮಧ್ಯಾಹ್ನದಿಂದ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.