
ಬೆಂಗಳೂರು (ಏ.23): ಅಮೆರಿಕ-ಭಾರತ ವ್ಯಾಪಾರ ಒಪ್ಪಂದದ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾರತ ರೈತರ ಪರಿಶ್ರಮ ಹಾಗೂ ಬೆವರನ್ನು ಮಾರಾಟ ಮಾಡಿದ್ದಾರೆ. ಈ ಒಪ್ಪಂದ ನಮ್ಮ ರೈತರ ಪಾಲಿಗೆ ಮರಣ ಶಾಸನ ಎಂದು ವಿಧಾನಪರಿಷತ್‌ನ ಸರ್ಕಾರದ ಮುಖ್ಯಸಚೇತಕ ಸಲೀಂ ಅಹ್ಮದ್ ಕಿಡಿ ಕಾರಿದ್ದಾರೆ.
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ವತಿಯಿಂದ ಭಾರತ-ಅಮೇರಿಕಾ ವ್ಯಾಪಾರ ಒಪ್ಪಂದ ವಿರೋಧಿಸಿ ಬುಧವಾರ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಹಮ್ಮಿಕೊಂಡಿದ್ದ ‘ಕಿಸಾನ್ ನ್ಯಾಯ ಸತ್ಯಾಗ್ರಹ’ ಹೋರಾಟದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಅಮೆರಿಕ ಒತ್ತಡದಿಂದ ಭಯಭೀತರಾಗಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದೆ. ಆ ಮೂಲಕ147 ಕೋಟಿ ಜನರಿಗೆ ಮಹಾ ದ್ರೋಹ ಮಾಡಿದೆ. ಅಮೆರಿಕದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರನ್ನು ತಲೆಮೇಲೆ ಕೂರಿಸಿ ಮೆರೆದಾಡುತ್ತಿರುವ ಮೋದಿ ಅವರು ಈಗ ಅದೇ ಟ್ರಂಪ್ ಅವರ ಆಜ್ಞಾಪಾಲಕರಾಗುವ ಸ‍್ಥಿತಿಗೆ ಬಂದಿದ್ದು ವಿಷಾದನೀಯ. ಈ ಒಪ್ಪಂದದಿಂದಾಗಿ ನಮ್ಮ ದೇಶದ ರೈತರು ದುರ್ಬಲರಾಗುತ್ತಾರೆ ಎಂದು ಸಲೀಂ ಅಹ್ಮದ್ ಹೇಳಿದರು.
ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಮಂಜುನಾಥ್ ಗೌಡ, ಮಾಜಿ ಮೇಯರ್ ಹುಚ್ಚಪ್ಪ, ಮುಖಂಡರಾದ ಕೇಶವಮೂರ್ತಿ, ಮೋಹನ್ ಕುಮಾರ್, ಶಿವಕುಮಾರ್, ಎಸ್.ಡಿ ಮಕಂದರ್, ಶೋಯೆಬ್ ಸೇರಿದಂತೆ ಹಲವರು ಹಾಜರಿದ್ದರು.
ಪ್ರದೇಶ ಯುವ ಕಾಂಗ್ರೆಸ್ ವತಿಯಿಂದ ಭಾರತ-ಅಮೆರಿಕಾ ವ್ಯಾಪಾರ ಒಪ್ಪಂದ ವಿರೋಧಿಸಿ ಬುಧವಾರ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಹಮ್ಮಿಕೊಂಡಿದ್ದ ಕಿಸಾನ್ ನ್ಯಾಯ ಸತ್ಯಾಗ್ರಹ ಹೋರಾಟದಲ್ಲಿ ವಿಧಾನಪರಿಷತ್‌ನ ಸರ್ಕಾರದ ಮುಖ್ಯಸಚೇತಕ ಸಲೀಂ ಅಹ್ಮದ್ ಮಾತನಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ