ರಾಜ್ಯದಲ್ಲಿ ಉತ್ಪಾದನೆ, ಬಿಕರಿ ಆಗುವ ಉತ್ಪನ್ನಗಳಲ್ಲಿ 'ಕನ್ನಡ' ಬಳಕೆ ಕಡ್ಡಾಯ: ಸರ್ಕಾರ ಆದೇಶ

Published : Mar 01, 2025, 05:16 AM ISTUpdated : Mar 01, 2025, 08:18 AM IST
ರಾಜ್ಯದಲ್ಲಿ ಉತ್ಪಾದನೆ, ಬಿಕರಿ ಆಗುವ ಉತ್ಪನ್ನಗಳಲ್ಲಿ 'ಕನ್ನಡ' ಬಳಕೆ ಕಡ್ಡಾಯ: ಸರ್ಕಾರ ಆದೇಶ

ಸಾರಾಂಶ

ಕನ್ನಡಪರ ಸಂಘಟನೆಗಳ ಹೋರಾಟದ ಫಲವಾಗಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಅಳವಡಿಕೆ ಅನುಷ್ಠಾನದ ಬೆನ್ನಲ್ಲೇ ಇದೀಗ ರಾಜ್ಯದೊಳಗೆ ಉತ್ಪಾದನೆಯಾಗುವ ಹಾಗೂ ಮಾರಾಟವಾಗುವ ಉತ್ಪನ್ನಗಳ ಮೇಲೆ ಕನ್ನಡದಲ್ಲಿ ಹೆಸರು ಮುದ್ರಿಸುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. 

ಬೆಂಗಳೂರು (ಮಾ.01): ಕನ್ನಡಪರ ಸಂಘಟನೆಗಳ ಹೋರಾಟದ ಫಲವಾಗಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಅಳವಡಿಕೆ ಅನುಷ್ಠಾನದ ಬೆನ್ನಲ್ಲೇ ಇದೀಗ ರಾಜ್ಯದೊಳಗೆ ಉತ್ಪಾದನೆಯಾಗುವ ಹಾಗೂ ಮಾರಾಟವಾಗುವ ಉತ್ಪನ್ನಗಳ ಮೇಲೆ ಕನ್ನಡದಲ್ಲಿ ಹೆಸರು ಮುದ್ರಿಸುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ರಾಜ್ಯದೊಳಗೆ ಕನ್ನಡಕ್ಕೆ ಮೊದಲ ಆದ್ಯತೆ ಸಿಗಬೇಕು ಎಂಬ ಉದ್ದೇಶವನ್ನಿಟ್ಟುಕೊಂಡು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಸೇರಿದಂತೆ ಇನ್ನಿತರ ಕನ್ನಡಪರ ಸಂಘಟನೆಗಳು ತೀವ್ರ ಹೋರಾಟ ನಡೆಸಿದ್ದವು. 

ಅದರಲ್ಲೂ ವಾಣಿಜ್ಯ ಉದ್ಯಮಗಳ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಪದ ಬಳಕೆ, ರಾಜ್ಯದಲ್ಲಿ ಮಾರಾಟವಾಗುವ ಯಾವುದೇ ಉತ್ಪನ್ನಗಳ ಹೆಸರು ಮತ್ತು ಉತ್ಪನ್ನದ ಕುರಿತ ನಿರ್ದೇಶನವನ್ನು ಕನ್ನಡದಲ್ಲೂ ಮುದ್ರಿಸುವ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದವು. ಈ ಹೋರಾಟದ ನಂತರ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2020 ಕಟ್ಟುನಿಟ್ಟಿನ ಜಾರಿಗೆ ಮುಂದಾದ ರಾಜ್ಯ ಸರ್ಕಾರ, ವಾಣಿಜ್ಯ ಉದ್ಯಮಗಳ ನಾಮಫಲಕದಲ್ಲಿ ಶೇ. 60ರಷ್ಟು ಕನ್ನಡ ಪದ ಬಳಕೆಯನ್ನು ಕಡ್ಡಾಯಗೊಳಿಸಿ ಆದೇಶಿಸಿತು. ಒಂದು ವೇಳೆ ಕನ್ನಡ ಬಳಕೆಯನ್ನು ಮಾಡದಿದ್ದರೆ ಅಂತಹ ಉದ್ಯಮಗಳ ಮೇಲೆ ಕ್ರಮ ಕೈಗೊಳ್ಳುವುದಾಗಿಯೂ ಸೂಚಿಸಿತ್ತು.

ಅದರ ಬೆನ್ನಲ್ಲೇ ಇದೀಗ ಕರವೇ ಹೋರಾಟದ ಫಲವಾಗಿ ರಾಜ್ಯದೊಳಗೆ ಉತ್ಪಾದನೆಯಾಗುವ ಉತ್ಪನ್ನಗಳ ಮೇಲೆ ಕನ್ನಡದಲ್ಲಿ ಹೆಸರು ಮುದ್ರಿಸುವುದನ್ನು ಕಡ್ಡಾಯಗೊಳಿಸಿ ಆದೇಶಿಸಲಾಗಿದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2020ರ ಕಲಂ 17 (7)ರಲ್ಲಿ ರಾಜ್ಯದೊಳಗೆ ತಯಾರಿಸಿದ ಮತ್ತು ಮಾರಾಟವಾಗುವ ಎಲ್ಲ ಕೈಗಾರಿಕಾ ಮತ್ತು ಇತರ ಗ್ರಾಹಕ ಉತ್ಪನ್ನಗಳ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳು ಇತರ ಭಾಷೆಯ ಜತೆಗೆ ಕನ್ನಡದಲ್ಲಿಯೂ ಇರಬೇಕು ಎಂಬ ಅಂಶವಿದೆ. ಅದನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕು.

ಸಚಿವ ರಾಜಣ್ಣಗೆ ಹೈಕಮಾಂಡ್ ಇಂಜೆಕ್ಷನ್ ಕೊಡುತ್ತೆ: ಶಾಸಕ ಎಚ್.ಸಿ.ಬಾಲಕೃಷ್ಣ

ಅದರಂತೆ ರಾಜ್ಯದಲ್ಲಿ ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ತಯಾರಾಗುವ ಎಲ್ಲ ಕೈಗಾರಿಕೆ ಮತ್ತು ಗ್ರಾಹಕ ಉತ್ಪನ್ನಗಳ ಮೇಲೆ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳನ್ನು ಇತರ ಭಾಷೆಗಳ ಜತೆಗೆ ಕನ್ನಡದಲ್ಲೂ ಮುದ್ರಿಸಬೇಕು ಎಂದು ಉದ್ಯಮಗಳಿಗೆ ಆದೇಶಿಸಿದೆ. ಹಾಗೆಯೇ, ಕೈಗಾರಿಕಾ ಮತ್ತು ಗ್ರಾಹಕ ವಸ್ತುಗಳ ಉತ್ಪನ್ನದಾರರು ಕನ್ನಡ ಬಳಕೆ ಆದೇಶ ಪಾಲಿಸುತ್ತಿದ್ದಾರೆಯೇ ಎಂಬ ಬಗ್ಗೆ ನಿಗದಿತ ಪ್ರಾಧಿಕಾರಿಗಳು ಮೇಲ್ವಿಚಾರಣೆ ಮಾಡುವಂತೆಯೂ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆದೇಶಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!