ಬಡವರಿಗೆ ಮನೆ ಇಲ್ಲ, ರೈತರಿಗೆ ಪರಿಹಾರವಿಲ್ಲ, ರಾಜ್ಯ ಸರ್ಕಾರ ದಿವಾಳಿ ಹಂಚಿನಲ್ಲಿದೆ: ಸಂಸದ ಕಾಗೇರಿ ವಾಗ್ದಾಳಿ

Kannadaprabha News, Ravi Janekal |   | Kannada Prabha
Published : Nov 05, 2025, 02:05 PM IST
Vishweshwar Hegde Kageri on Congress

ಸಾರಾಂಶ

ಬನವಾಸಿಯಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ರಾಜ್ಯ ಕಾಂಗ್ರೆಸ್ ಸರ್ಕಾರ ದಿವಾಳಿಯಂಚಿನಲ್ಲಿದೆ ಎಂದು ಆರೋಪಿಸಿದರು. ಬಡವರಿಗೆ ಮನೆ, ಅತಿವೃಷ್ಟಿ ಪರಿಹಾರ ನೀಡದೆ, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ખುರ್ಚಿಗಾಗಿ ಕಚ್ಚಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಶಿರಸಿ (ನ.5): ಬಡವರಿಗೆ ಆಶ್ರಯ ಮನೆ ಇಲ್ಲ. ಅತಿವೃಷ್ಟಿ ಹಾನಿಗೆ ಪರಿಹಾರವಿಲ್ಲ. ರಾಜ್ಯ ಸರ್ಕಾರದ ದಿವಾಳಿ ಅಂಚಿನಲ್ಲಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು. ತಾಲೂಕಿನ ಬನವಾಸಿಯ ನಾಮದೇವ ಸಭಾಭವನದಲ್ಲಿ ನೂತನ ಬನವಾಸಿ ಮಂಡಲ ಹಾಗೂ ಅಧ್ಯಕ್ಷರ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಕಾಂಗ್ರೆಸ್ ಸರ್ಕಾರ ಪ್ರತಿ ಯೋಜನೆಗೆ ಅಡ್ಡಗಾಲು:

ಕೇಂದ್ರ ಸರ್ಕಾರವು ಪ್ರತಿ ಯೋಜನೆಗಳನ್ನು ರಾಜ್ಯ ಸರ್ಕಾರದ ಮೂಲಕ ಅನುಷ್ಠಾನಗೊಳಿಸುತ್ತದೆ. ಆದರೆ ಕಾಂಗ್ರೆಸ್ ಸರ್ಕಾರ ಪ್ರತಿ ಯೋಜನೆಗೂ ಅಡ್ಡಗಾಲು ಹಾಕುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಖುರ್ಚಿಗಾಗಿ ಕಚ್ಚಾಟ ನಡೆಸಿ, ಕಾಲಹರಣ ಮಾಡುತ್ತಿದ್ದಾರೆ. ಆಡಳಿತ ಯಂತ್ರ ಹಳಿ ತಪ್ಪಿದೆ. ಅಭಿವೃದ್ಧಿ ಶೂನ್ಯವಾಗಿದೆ ಎಂದು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಜೆಪಿ ಜಗತ್ತಿನ ಅತಿದೊಡ್ಡ ಪಕ್ಷ:

ಬನವಾಸಿ ಮಂಡಲ ರಚಿಸಿರುವುದು ಬಿಜೆಪಿ ಇತಿಹಾಸದಲ್ಲಿ ಸುವರ್ಣಾಕ್ಷದಲ್ಲಿ ಬರೆದಿಡುವ ದಿನವಾಗಿದ್ದು, ಪಕ್ಷ ಸಂಘಟನೆ ಹಿತದೃಷ್ಟಿಯಿಂದ ಜಿಲ್ಲೆಯಲ್ಲಿ ಮಂಕಿ, ಗೋಕರ್ಣ ಹಾಗೂ ಬನವಾಸಿ ನೂತನ ಮಂಡಲ ರಚಿಸಲಾಗಿದೆ. ಕಾರ್ಯಕರ್ತರನ್ನು ಸಂಪರ್ಕಿಸಲು ಮಂಡಲದಿಂದ ಅನುಕೂಲವಾಗುತ್ತದೆ. ಜನಪರ ಹೋರಾಟದ ಮೂಲಕ ನೂತನ ಮಂಡಳ ಆರಂಭವಾವಿದೆ.‌ ಜನರ ಕಷ್ಟಸುಖಗಳಿಗೆ ಸ್ಪಂದಿಸಬೇಕಿದೆ. ಜನಸಂಘದಿಂದ ಪ್ರಾರಂಭವಾದ ಬಿಜೆಪಿ ಇಂದು ಜಗತ್ತಿನದ ಅತಿದೊಡ್ಡ ಪಕ್ಷವಾಗಿ ಬೆಳೆದಿದೆ ಎಂದರು.

ಶಿರಸಿ ಗ್ರಾಮೀಣ ಮಂಡಲಾಧ್ಯಕ್ಷೆ ಉಷಾ ಹೆಗಡೆ ಮಾತನಾಡಿ, ಶಿರಸಿ ಗ್ರಾಮೀಣ ಮಂಡಳ ವಿಸ್ತಾರವಾಗಿದೆ. ಸಂಘಟನೆಯ ಹಿತದೃಷ್ಟಿಯಿಂದ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಿಜೆಪಿಗೆ ಸೇರ್ಪಡೆಗೊಳಿಸಿ ಸಂಘಟನೆಯ ದೃಷ್ಟಿಯಿಂದ ಬನವಾಸಿ ಪ್ರತ್ಯೇಕ ಮಂಡಳ ರಚಿಸಲಾಗಿದೆ ಎಂದರು.ಬನವಾಸಿ ನೂತನ ಮಂಡಳ ಅಧ್ಯಕ್ಷ ರಮೇಶ ನಾಯ್ಕ ಕುಪ್ಪಳ್ಳಿ ಮಾತನಾಡಿದರು.

ಹವಾಮಾನ ಆಧಾರಿತ ಬೆಳೆ ವಿಮೆ ಜಿಲ್ಲೆಯ ರೈತರಿಗೆ ಮಂಜೂರಿ ಮಾಡಿಸುವಲ್ಲಿ ವಿಶೇಷ ಪಾತ್ರ ನಿರ್ವಹಿಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಸನ್ಮಾನಿಸಲಾಯಿತು. ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರೇಮಕುಮಾರ ನಾಯ್ಕ, ಪ್ರಮುಖರಾದ ಮುತ್ತಣ್ಣ ದಾವಣಗೆರೆ, ರವಿಂದ ಶೆಟ್ಟಿ, ಶಂಕರ ಗೌಡ, ಶ್ರೀರಾಮ ನಾಯ್ಕ, ಮಂಜುನಾಥ ಪಾಟೀಲ, ಗಣೇಶ ಕತ್ತಿ ಮತ್ತಿತರರು ಉಪಸ್ಥಿತರಿದ್ದರು. ಜಿಪಂ ಮಾಜಿ ಸದಸ್ಯ ಹಾಲಪ್ಪ ಜಕಲಣ್ಣನವರ ಪ್ರಾಸ್ತಾವಿಕ ಮಾತನಾಡಿದರು. ವಿಶ್ವನಾಥ ಹಾದಿಮನೆ ನಿರೂಪಿಸಿದರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಜ್ಯದಲ್ಲಿ ಮತ್ತೆ ಮಳೆ ಚುರುಕು: ಬೆಂಗಳೂರಲ್ಲಿ ಮಳೆ ಎಚ್ಚರಿಕೆ, 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
Karnataka News Live 17 September 2026: ಪಾತ್ರಗಳು ಬದಲಾದವು, ತಲೆಮಾರುಗಳು ಬದಲಾದವು - ಆದರೆ ಅನಂತ್ ನಾಗ್ ಯಾಕೆ ಬದಲಾಗಲಿಲ್ಲ?