
ಸಿದ್ದಾಪುರ (ಮೇ.23): ಮದುವೆ ದಿಬ್ಬಣದ ಜನರನ್ನು ಕೊಂಡೊಯ್ಯುತ್ತಿದ್ದ ಮಾರುತಿ ಇಕೊ ( Maruti Eco) ಮತ್ತು ಎದುರುಗಡೆಯಿಂದ ಬಂದ ಕಾರು (Car) ಢಿಕ್ಕಿಯಾಗಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟು 8ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಸಿದ್ಧಾಪುರ ತಾಲ್ಲೂಕಿನ (Siddapur) ಶಿರೂರು (Shirur) ಬಳಿ ನಡೆದಿದೆ.
ಸಿದ್ದಾಪುರ ತಾಲೂಕಿನ ನಿಲ್ಕುಂದ ಪಂಚಾಯತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಘಟಕ ಅಧ್ಯಕ್ಷರಾಗಿದ್ದ ಮಂಜುನಾಥ ಬಿ ಗೌಡ ಕಬ್ಬಿನ್ಮನೆ (Manjunath B Gowda Kabbinmane ) ಮೃತಪಟ್ಟ ದುರ್ದೈವಿ. ಮದುವೆ ಮುಗಿಸಿ ದಿಬ್ಬಣದ ಜನರನ್ನು ಇಕೋ ವಾಹನದಲ್ಲಿ ಕರೆದುಕೊಂಡು ತೆರಳುವಾಗ ಎದುರಿನಿಂದ ಬಂದ ಕಾರಿಗೆ ಢಿಕ್ಕಿಯಾಗಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಎರಡೂ ವಾಹನದಲ್ಲಿ 8 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಕೆಲವರು ಗಂಭೀರಗೊಂಡಿದ್ದಾರೆ. ಎಲ್ಲರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ