Uttara Kannada: ಪದಕ ಗೆದ್ದ ಶಿರೂರು ಗುಡ್ಡ ಕುಸಿತದಲ್ಲಿ ತನ್ನವರ ಕಳೆದುಕೊಂಡ ಶ್ವಾನ!

Published : Mar 10, 2025, 12:08 AM ISTUpdated : Mar 10, 2025, 05:31 AM IST
Uttara Kannada: ಪದಕ ಗೆದ್ದ ಶಿರೂರು ಗುಡ್ಡ ಕುಸಿತದಲ್ಲಿ ತನ್ನವರ ಕಳೆದುಕೊಂಡ ಶ್ವಾನ!

ಸಾರಾಂಶ

ಜಿಲ್ಲೆಯ ಶಿರೂರಿನ ಗುಡ್ಡ ಕುಸಿತ ಪ್ರಕರಣ ಇಡೀ ರಾಜ್ಯದಲ್ಲಿಯೇ ಸದ್ದು ಮಾಡಿತ್ತು. ಕಳೆದ 2024ರ ಜುಲೈ 16 ರಂದು ಧಾರಾಕಾರವಾಗಿ ಸುರಿದ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತವಾಗಿ 11 ಜನ ಮೃತಪಟ್ಟಿದ್ದರು. 

ಉತ್ತರ ಕನ್ನಡ (ಮಾ.09): ಜಿಲ್ಲೆಯ ಶಿರೂರಿನ ಗುಡ್ಡ ಕುಸಿತ ಪ್ರಕರಣ ಇಡೀ ರಾಜ್ಯದಲ್ಲಿಯೇ ಸದ್ದು ಮಾಡಿತ್ತು. ಕಳೆದ 2024ರ ಜುಲೈ 16 ರಂದು ಧಾರಾಕಾರವಾಗಿ ಸುರಿದ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತವಾಗಿ 11 ಜನ ಮೃತಪಟ್ಟಿದ್ದರು. ಹೆದ್ದಾರಿ ಪಕ್ಕದಲ್ಲಿದ್ದ ಲಕ್ಷ್ಮಣ್ ನಾಯ್ಕ ಎಂಬವರ ಹೋಟೆಲ್ ಮೇಲೆ ಗುಡ್ಡ ಕುಸಿದು, ಅವರು, ಅವರ ಪತ್ನಿ ಹಾಗೂ ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದರು. ದುರ್ಘಟನೆ ಬಳಿಕ ಈ ಕುಟುಂಬ ಪ್ರೀತಿಯಿಂದ ಸಾಕಿದ್ದ ಶ್ವಾನವೊಂದು ಅನಾಥವಾಗಿತ್ತು. 

ಕಾರ್ಯಚರಣೆ ನಡೆಯುವ ದಿನಗಳಲ್ಲಿ ಮಾಲಕನ ಬರುವಿಕೆಗಾಗಿ ಸ್ಥಳದಲ್ಲಿ ಬಂದು ಶ್ವಾನ ಕಾಯುತ್ತಾ ಕುಳಿತಿದ್ದದ್ದು ಸಾಕಷ್ಟು ಗಮನ ಸೆಳೆದಿತ್ತು. ಉತ್ತರಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ನಾರಾಯಣ್ ಇದನ್ನು ಗಮನಿಸಿ ಶ್ವಾನವನ್ನು ತಂದು ತನ್ನ ಮನೆಯಲ್ಲಿ ಸಾಕಲು ಮುಂದಾಗಿದ್ದರು. ಜಿಲ್ಲಾ ಪೊಲೀಸ್ ಶ್ವಾನದಳದಲ್ಲಿ ಇದೇ ಶ್ವಾನಕ್ಕೆ ತರಬೇತಿ ನೀಡಿದ್ದು, ಸದ್ಯ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಈ ಶ್ವಾನ ಎಲ್ಲರ ಗಮನ ಸೆಳೆದಿದೆ. 

ಭಾನುವಾರ ಪೊಲೀಸ್ ಇಲಾಖೆಯಿಂದ ನಡೆದ ಮಾದಕ ದ್ರವ್ಯ  ಹಾಗೂ ಸೈಬರ್ ಅಪರಾಧ ಮುಕ್ತ ಕರ್ನಾಟಕ ಜಾಗೃತಿ ಮೂಡಿಸಲು ನಡೆದ ಮ್ಯಾರಾಥಾನ್ ನಲ್ಲಿ ಈ ಶ್ವಾನ 5 ಕಿಲೋ ಮೀಟರ್ ಸಂಚರಿಸಿ ಪದಕವನ್ನು ಪಡೆದಿದೆ. ಈ ಶ್ವಾನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ನಾರಾಯಣ್ ತನ್ನ ಮನೆಯಲ್ಲಿಯೇ ಇಟ್ಟುಕೊಂಡು ತರಬೇತಿ ನೀಡಿದ್ದು, ಬೇರೆ ಶ್ವಾನಗಳಂತೆ ಈ ಶ್ವಾನ ಸಹ ಸಾಕಷ್ಟು ಚುರುಕಿನಿಂದ ಕೆಲಸ ಮಾಡುತ್ತಿದೆ. 

ರಾಷ್ಟ್ರಮಟ್ಟದ ಆಲ್ ಇಂಡಿಯಾ ಪೊಲೀಸ್ ಡ್ಯೂಟಿ ಮೀಟ್‌ನಲ್ಲಿ ಬೆಳ್ಳಿಪದಕ ಪಡೆದ ಶ್ವಾನ ಕಾಪರ್!

ಅಲ್ಲದೇ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೆಚ್ಚಿನ ಶ್ವಾನವಾಗಿದ್ದು, ಪ್ರತಿನಿತ್ಯ ಬೆಳಿಗ್ಗೆ ಕೆಲಸಕ್ಕೆ ಹೋಗಬೇಕಾದರೆ ಸಲ್ಯೂಟ್ ಮಾಡಿಯೇ ಕಳಿಸುತ್ತದೆ. ಇನ್ನು ಮನೆಗೆ ವಾಪಾಸ್ ಬರುವ ವೇಳೆಯಲ್ಲಿ ಗೇಟ್ ಬಳಿಯೇ ಕಾಯುತ್ತಾ ಕುಳಿತಿರುತ್ತದೆ. ಬೆಂಗಳೂರಿನಲ್ಲಿ ಮೀಟಿಂಗ್ ಇನ್ನಿತರ ಕಾರಣಕ್ಕೆ ಮೂರ್ನಾಲ್ಕು ದಿನ ಎಸ್ಪಿ ನಾರಾಯಣ್ ತೆರಳಿದರೆ ಈ ಶ್ವಾನ ಮಂಕಾಗಿ ಇರುತ್ತದೆ. ಈ ಹಿನ್ನೆಲೆಯಲ್ಲಿ ಶ್ವಾನ ತನ್ನ ಮನೆಯ ಸದಸ್ಯನಂತಾಗಿದೆ ಅಂತಾರೆ ಎಸ್ಪಿ ಎಂ. ನಾರಾಯಣ್.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌