ಉತ್ತರ ಕರ್ನಾಟಕದಲ್ಲಿ ಮುಂದುವರಿದ ಮಳೆ ಅಬ್ಬರ, ಜನಜೀವನ ಅಸ್ತವ್ಯಸ್ತ

Kannadaprabha News, Ravi Janekal |   | Kannada Prabha
Published : Sep 13, 2025, 06:12 AM IST
Uttara karnataka rain update

ಸಾರಾಂಶ

ಧಾರವಾಡ, ಗದಗ, ಕಲಬುರಗಿ, ಯಾದಗಿರಿ ಸೇರಿ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಿದೆ. ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ರಸ್ತೆಗಳು ಜಲಾವೃತಗೊಂಡಿವೆ. ಹಲವು ಜಿಲ್ಲೆಗಳಲ್ಲಿ ಬೆಳೆಗಳು ಹಾನಿಗೊಳಗಾಗಿವೆ.

ಹುಬ್ಬಳ್ಳಿ/ಬೆಂಗಳೂರು (ಸೆ.13): ಧಾರವಾಡ, ಗದಗ, ಕಲಬುರಗಿ, ಯಾದಗಿರಿ ಸೇರಿ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ.

ಭಾರೀ ಮಳೆಗೆ ಹುಬ್ಬಳ್ಳಿ ನಗರ ಸಂಪೂರ್ಣ ಜಲಾವೃತ:

ಕಳೆದ ಒಂದು ವಾರದಿಂದ ಬಿಡುವು ನೀಡಿದ್ದ ವರುಣ ಶುಕ್ರವಾರ ಮತ್ತೆ ಅರ್ಭಟಿಸಿದ್ದು, ಸುಮಾರು ಆರೇಳು ಗಂಟೆ ಸುರಿದ ಮಳೆಗೆ ಧಾರವಾಡ-ಹುಬ್ಬಳ್ಳಿ ಅವಳಿ ನಗರಗಳು ನಲಗುವಂತಾಯಿತು. ಹುಬ್ಬಳ್ಳಿ-ಧಾರವಾಡದ ರಸ್ತೆಗಳು, ತಗ್ಗು ಪ್ರದೇಶಗಳಲ್ಲಿ ನಿಂತ ನೀರು ಜನರನ್ನು ಪರದಾಡುವಂತೆ ಮಾಡಿತು. ನಗರದ ವಿವಿಧ ಕಡೆಗಳಲ್ಲಿ ರಸ್ತೆಯಲ್ಲಿ ಮೊಣಕಾಲವರೆಗೆ ಮಳೆ ನೀರು ನಿಂತಿತ್ತು.

ಉತ್ತರ ಕರ್ನಾಟಕ ಮಳೆ: ಬೆಳೆ ನಾಶ:

ಇದೇ ವೇಳೆ, ಗದಗ ಜಿಲ್ಲೆಯ ಲಕ್ಷ್ಮೇಶ್ವರ ಹಾಗೂ ಮುಂಡರಗಿ ತಾಲೂಕಿನಲ್ಲಿಯೂ ಮಳೆಯಾಗಿದ್ದು, ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಕಲಬುರಗಿ ಜಿಲ್ಲೆಯಾದ್ಯಂತ ಸುರಿದ ಮಳೆಗೆ ಭೀಮಾ, ಭೋರಿ ಸೇರಿ ಹಲವು ನದಿಗಳಲ್ಲಿ ಪ್ರವಾಹ ಬಂದಿದೆ. ಜಿಲ್ಲೆಯ ಹಲವು ಗ್ರಾಮಗಳಲ್ಲಿ ಹೊಲ ಗದ್ದೆಗಳಲ್ಲಿ ನೀರು ನಿಂತು ಮುಂಗಾರು ಹಂಗಾಮಿನ ತೊಗರಿ, ಸೂರ್ಯಕಾಂತಿ, ಹತ್ತಿ, ಹೆಸರು, ಉದ್ದು ಬೆಳೆಗಳು ಸಂಪೂರ್ಣ ಹಾಳಾಗಿವೆ.

ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ:

ಜಲಾವೃತಗೊಂಡ ಮನೆಗಳ ಜನರನ್ನು ಬೇರೆಡೆ ಸ್ಥಳಾಂತರಿಸಿ, ಆಸರೆ ಕೇಂದ್ರ ತೆರೆಯಲಾಗುತ್ತಿದೆ. ನದಿಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ನಿವಾಸಿಗಳಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಯಾದಗಿರಿ ಜಿಲ್ಲೆಯ ಹಲವೆಡೆಯೂ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಮಧ್ಯಾಹ್ನದ ವೇಳೆಗೆ ದಿಢೀರ್ ಆರಂಭವಾದ ಮಳೆ ಬಿಟ್ಟೂ ಬಿಡದೇ ರಾತ್ರಿವರೆಗೆ ಸುರಿಯಿತು. ಹುಬ್ಬಳ್ಳಿಯ ದಾಜೀಬಾನ್‌ಪೇಟ್, ಶಾ ಬಜಾರ, ದುರ್ಗದಬೈಲ್, ಸ್ಟೇಶನ್ ರಸ್ತೆ, ಗೋಕುಲ ರಸ್ತೆ, ಚೆನ್ನಮ್ಮ ಸರ್ಕಲ್ ಹಾಗೂ ಹಳೆಯ ಕೋರ್ಟ್ ಸರ್ಕಲ್, ಉಣಕಲ್‌, ತುಳಜಾಭವಾನಿ ಸರ್ಕಲ್, ಶ್ರೀನಗರ, ಲ್ಯಾಮಿಂಗ್ಟನ್ ಸರ್ಕಲ್, ಕೇಶ್ವಾಪುರ ಸೇರಿದಂತೆ

ಇದರಿಂದ ವಾಹನ ಸವಾರರು ಮತ್ತು ಪಾದಚಾರಿಗಳು ಓಡಾಡಲು ತೀವ್ರ ಕಷ್ಟ ಅನುಭವಿಸುವಂತಾಯಿತು. ಕೆಲವೆಡೆ ಮಳೆ ರಸ್ತೆಯಲ್ಲಿ ಮಳೆ ನೀರು ನಿಂತಿದ್ದರಿಂದ ತಗ್ಗು-ಗುಂಡಿಗಳು ಕಾಣದೇ ವಾಹನ ಸವಾರರು ಭಯದಿಂದಲೇ ಸಂಚರಿಸುವಂತಾಯಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಯಚೂರು: ರಸ್ತೆಯಲ್ಲಿ ಹೋಗುತ್ತಿದ್ದ ಹಾವು ಹಿಡಿದು ಬೈಕ್ ಸವಾರ ಹುಚ್ಚಾಟ, ವಿಡಿಯೋ ವೈರಲ್
ರೈತನಿಗೆ ಪರಿಹಾರ ನೀಡದ ಶಿವಮೊಗ್ಗ ಡಿಸಿ ಕಚೇರಿ, ಕಾರು ಜಪ್ತಿಗೆ ಕೋರ್ಟ್ ಆದೇಶ! ಏನಿದು ಪ್ರಕರಣ?