ಮಂಗನಕಾಯಿಲೆಗೆ ವರ್ಷದೊಳಗೆ ವ್ಯಾಕ್ಸಿನ್: ಸಚಿವ ದಿನೇಶ್ ಗುಂಡೂರಾವ್

By Kannadaprabha NewsFirst Published Feb 11, 2024, 5:43 AM IST
Highlights

ರಾಜ್ಯದಲ್ಲಿ ಹೆಚ್ಚುತ್ತಿರುವ ಮಂಗನ ಕಾಯಿಲೆ (ಕ್ಯಾಸನೂರ್ ಫಾರೆಸ್ಟ್ ಡಿಸಿಸ್)ಗೆ ಹೊಸ ವ್ಯಾಕ್ಸಿನ್ ತಯಾರಿಸಲು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಜೊತೆ ಚರ್ಚೆ ನಡೆಸಲಾಗಿದ್ದು, ವ್ಯಾಕ್ಸಿನ್ ತಯಾರಿಕೆಗೆ ಐಸಿಎಂಆರ್ ಒಪ್ಪಿಗೆ ಸೂಚಿಸಿದೆ. ಮುಂದಿನ ವರ್ಷಕ್ಕೆ ಮಂಗನ ಕಾಯಿಲೆಗೆ ಒಳ್ಳೆಯ ಚುಚ್ಚುಮದ್ದು ಸಿಗಬಹುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. 

ಉಡುಪಿ (ಫೆ.11): ರಾಜ್ಯದಲ್ಲಿ ಹೆಚ್ಚುತ್ತಿರುವ ಮಂಗನ ಕಾಯಿಲೆ (ಕ್ಯಾಸನೂರ್ ಫಾರೆಸ್ಟ್ ಡಿಸಿಸ್)ಗೆ ಹೊಸ ವ್ಯಾಕ್ಸಿನ್ ತಯಾರಿಸಲು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಜೊತೆ ಚರ್ಚೆ ನಡೆಸಲಾಗಿದ್ದು, ವ್ಯಾಕ್ಸಿನ್ ತಯಾರಿಕೆಗೆ ಐಸಿಎಂಆರ್ ಒಪ್ಪಿಗೆ ಸೂಚಿಸಿದೆ. ಮುಂದಿನ ವರ್ಷಕ್ಕೆ ಮಂಗನ ಕಾಯಿಲೆಗೆ ಒಳ್ಳೆಯ ಚುಚ್ಚುಮದ್ದು ಸಿಗಬಹುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಉಡುಪಿಯಲ್ಲಿ ಶನಿವಾರ ಮಂಗನ ಕಾಯಿಲೆ ನಿಯಂತ್ರಣ ಕುರಿತಂತೆ ಕೆಎಫ್‌ಡಿ ಬಾಧಿತ ಜಿಲ್ಲೆಗಳ ಮತ್ತು ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು. 

ಬಳಿಕ, ಸುದ್ದಿಗಾರರ ಜೊತೆ ಮಾತನಾಡಿ, ಈಗಿರುವ ವ್ಯಾಕ್ಸಿನ್ ಬಳಕೆ ಮಾಡದಂತೆ ಸೂಚಿಸಲಾಗಿದೆ. ಹೊಸ ವ್ಯಾಕ್ಸಿನ್‌ಗೆ ಐಸಿಎಂಆರ್ ಒಪ್ಪಿಗೆ ನೀಡಿದ್ದು, ಹೈದರಾಬಾದ್ ನ ಸಂಸ್ಥೆಯೊಂದು ಸಂಶೋಧನೆ ಮಾಡಿ ವ್ಯಾಕ್ಸಿನ್ ತಯಾರಿಸುತ್ತಿದೆ. ಮಂಗನ ಕಾಯಿಲೆಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ (ಎಬಿಎಆರ್‌ಕೆ) ಯೋಜನೆಯಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲು ಈಗಾಗಲೇ ಸೂಚಿಸಲಾಗಿದೆ. ಈ ಕಾಯಿಲೆ ಬಂದವರಿಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಹೇಳಿದರು.

ತೆರಿಗೆ ವಿಚಾರದಲ್ಲಿ ರಾಜ್ಯಕ್ಕಾದ ಅನ್ಯಾಯದ ಸತ್ಯಾಂಶವನ್ನ ಪೂಂಜಾ ಒಪ್ಪಿಕೊಳ್ಳಬೇಕು: ಸಚಿವ ದಿನೇಶ್ ಗುಂಡೂರಾವ್

ಜನಪ್ರತಿನಿಧಿಗಳು, ಅಧಿಕಾರಿಗಳೊಂದಗೆ ಸಚಿವರ ಸಭೆ: ಆರೋಗ್ಯ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಸರ್ಕ್ಯೂಟ್‌ ಹೌಸ್‌ನಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ವಿವಿಧ ಮುಖಂಡರೊಂದಿಗೆ ಸಭೆ ನಡೆಸಿದರು. ಜಿಲ್ಲೆಯಲ್ಲಿ ಈಗಾಗಲೇ ಜಾರಿಯಾಗಿರುವ ಯೋಜನೆಗಳು ಜನರಿಗೆ ತಲುಪುವ ನಿಟ್ಟಿನಲ್ಲಿ ಅಧಿಕಾರಿಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆಯಲಾಯಿತು. ಜಿಲ್ಲೆಯ ಅಭಿವೃದ್ಧಿ ನಿಟ್ಟಿನಲ್ಲಿ ಈಗಾಗಲೇ ನೀಡಿರುವ ಅನುದಾನಗಳನ್ನು ಬಳಸಿಕೊಂಡು ಕ್ರಿಯಾತ್ಮಕವಾಗಿ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆ ಸಚಿವರು ಮಾರ್ಗದರ್ಶನ ನೀಡಿದರು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿ.ಪಂ ಸಿಇಒ ಡಾ. ಆನಂದ್, ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ಶಾಸಕ ಹರೀಶ್ ಕುಮಾರ್, ಮಾಜಿ ಸಚಿವ ಅಭಯಚಂದ್ರ ಜೈನ್‌ ಮತ್ತಿತರರು ಇದ್ದರು.

click me!