ಬೆಂಗಳೂರು (ಆ.10): ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 9 ಮತ್ತು 10 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಪೋಷಕರು ಈವರೆಗೆ ಕೋವಿಡ್ ಲಸಿಕೆ ಪಡೆಯದಿದ್ದರೆ ಅವರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.
ಮಕ್ಕಳ ಪೋಷಕರಿಗೆ ಈ ಬಗ್ಗೆ ಮಾಹಿತಿ ನೀಡಿ, ಲಸಿಕೆ ಪಡೆಯದವರ ಪಟ್ಟಿತಯಾರಿಸಿ ಆರೋಗ್ಯ ಇಲಾಖೆಗೆ ನೀಡುವಂತೆ ಶಾಲೆಯ ಮುಖ್ಯಸ್ಥರಿಗೆ ಸೂಚಿಸುವಂತೆ ಶಿಕ್ಷಣ ಇಲಾಖೆಯನ್ನು ಆರೋಗ್ಯ ಇಲಾಖೆ ಕೋರಿದೆ.
ಕರ್ನಾಟಕದಲ್ಲಿ ಹೊಸದಾಗಿ 1,186 ಕೊರೋನಾ ಕೇಸ್, 24 ಮಂದಿ ಸಾವು
ಹಾಗೆಯೇ ಶಿಕ್ಷಕರು, ಭೋಧಕೇತರ ಸಿಬ್ಬಂದಿಗಳು ಇನ್ನೂ ಲಸಿಕೆ ಪಡೆಯದಿದ್ದಲ್ಲಿ ಅವರಿಗೆ ಆದ್ಯತೆಯ ಮೇರೆಗೆ ಲಸಿಕೆ ನೀಡಬೇಕು ಎಂದು ಆರೋಗ್ಯ ಇಲಾಖೆ ಪುನರುಚ್ಚರಿಸಿದೆ. ಆಗಸ್ಟ್ 23 ರಿಂದ ಹೈಸ್ಕೂಲ್ ತರಗತಿ ತೆರೆಯಲು ಸರ್ಕಾರ ಮುಂದಾಗಿರುವ ಹಿನ್ನೆಲೆಯಲ್ಲಿ ಲಸಿಕಾಕರಣಕ್ಕೆ ಒತ್ತು ನೀಡಿದೆ.