ವಾಲ್ಮೀಕಿ ಸಮುದಾಯ ಅವಹೇಳನ: ರಮೇಶ್ ಕತ್ತಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

Kannadaprabha News, Ravi Janekal |   | Kannada Prabha
Published : Oct 21, 2025, 11:30 AM IST
Valmiki community protest in Gokak

ಸಾರಾಂಶ

ಮಾಜಿ ಸಂಸದ ರಮೇಶ ಕತ್ತಿ ಅವರು ವಾಲ್ಮೀಕಿ ಸಮುದಾಯದ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದನ್ನು ಖಂಡಿಸಿ ಗೋಕಾಕದಲ್ಲಿ ವಾಲ್ಮೀಕಿ ಸಮುದಾಯ ಮತ್ತು ದಲಿತಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದವು. ರಸ್ತೆ ತಡೆ ನಡೆಸಿ. ಕತ್ತಿ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿದರು.

ಗೋಕಾಕ (ಅ.21): ವಾಲ್ಮೀಕಿ ಸಮುದಾಯದ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿರುವ ಮಾಜಿ ಸಂಸದ ರಮೇಶ ಕತ್ತಿ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಇಲ್ಲಿಯ ವಾಲ್ಮೀಕಿ ಸಮುದಾಯದವರು ತಹಸೀಲ್ದಾರ್‌ ಮುಖಾಂತರ ಪೊಲೀಸ್ ಮಹಾನಿರ್ದೇಶಕರಿಗೆ ಸೋಮವಾರ ಮನವಿ ಸಲ್ಲಿಸಿದರು.

ರಮೇಶ್ ಕತ್ತಿ ಪ್ರತಿಕೃತಿ ದಹನ:

ನಗರದ ಬಸವೇಶ್ವರ ವೃತ್ತದಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿದ ವಾಲ್ಮೀಕಿ ಸಮುದಾಯದವರು, ಕರ್ನಾಟಕ ಭೀಮ ರಕ್ಷಕ ಸಂಘಟನೆ ಹಾಗೂ ದಲಿತ ಪರ ಸಂಘಟನೆಗಳ ಮುಖಂಡರು ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿ, ಧರಣಿ ನಡೆಸಿದರು. ಮಾಜಿ ಸಂಸದ ರಮೇಶ ಕತ್ತಿ ಪ್ರತಿಕೃತಿ ದಹಿಸಿ, ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ವಾಲ್ಮೀಕಿ ಸಮಾಜದ ಮುಖಂಡರಿಗೆ ಇತರೆ ಸಮುದಾಯದ ಮುಖಂಡರು ಸಾಥ್ ನೀಡಿ ಬೀದಿಗಿಳಿದು ಕತ್ತಿ ಬಂಧನಕ್ಕೆ ಆಗ್ರಹಿಸಿದರು.

ವಾಲ್ಮೀಕಿ ಸಮುದಾ ಅವಹೇಳನ ಕ್ರೂರ ಮನಸ್ಥಿತಿ:

ಇದೇ ವೇಳೆ ಮಾತನಾಡಿದ ಮುಖಂಡರು, ಬೆಳಗಾವಿಯಲ್ಲಿ ಡಿಸಿಸಿ ಬ್ಯಾಂಕ್‌ ಚುನಾವಣೆ ವೇಳೆ ಬಿ.ಕೆ.ಮಾಡಲ್ ಸ್ಕೂಲ್ ಆವರಣದಲ್ಲಿ ಮಾಜಿ ಸಂಸದ ರಮೇಶ ಕತ್ತಿ ಅವರು ವಾಲ್ಮೀಕಿ ಸಮುದಾಯ ವಿರುದ್ಧ ಜಾತಿ ಬಗ್ಗೆ ಬೇಡರ ಕುರಿತು ಅವಾಚ್ಯ ಪದಗಳಿಂದ ಬೈದು ಅವಮಾನಿಸಿದ್ದಾರೆ. ಮಾಜಿ ಸಂಸದರು ಪದೇ ಪದೇ ದಲಿತರ ಮೇಲೆ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡುತ್ತಲೆ ಬಂದಿದ್ದಾರೆ. ದಲಿತರ ಮೇಲಿನ ನಿಂದನೆ ಅವರ ಕ್ರೂರ ಮನಸ್ಥಿತಿ ತೋರುತ್ತದೆ. ಸೋಲಿನ ಹತಾಶೆಯಿಂದ ನಿಂದನೆ ಮಾಡುವ ಇಂತವರಿಗೆ ತಕ್ಕ ಶಾಸ್ತಿಯಾಗಬೇಕಿದೆ. ಈ ನಿಂದನೆಯಿಂದ ಜಿಲ್ಲೆಯ ಹಾಗೂ ರಾಜ್ಯದ 60 ಲಕ್ಷ ವಾಲ್ಮೀಕಿ ಸಮುದಾಯದ ಜನರ ಮನಸಿಗೆ ಹಾಗೂ ದಲಿತಪರ ಸಂಘಟನೆಗಳಿಗೆ ತೀವ್ರಘಾಸಿ ಉಂಟು ಮಾಡಿದೆ. ಇದು ಘೋರ ಅಪರಾಧವಾಗಿದ್ದು ಇವರ ಮೇಲೆ ಸೂಕ್ತ ಕಠಿಣ ಕ್ರಮಕೈಗೊಳ್ಳುವಂತೆ ವಿನಂತಿಸಿದ್ದಾರೆ.

ಪ್ರತಿಭಟನೆಯಲ್ಲಿ ಸುರೇಶ ಸನದಿ, ಕೆಂಪಣ್ಣ ಮೈಲನ್ನವರ, ಹನಮಂತ ದುರ್ಗನ್ನವರ, ಭೀಮಶಿ ಭರಮನ್ನವರ, ಬಸವರಾಜ ಸಾಯನ್ನವರ, ಈಶ್ವರ ಗುಡಜ, ದೀಪಕ ಕೋಟಬಾಗಿ, ಅಶೋಕ ಕುಮಾರನಾಯ್ಕ, ಬೋರಪ್ಪ ಬಂಗೆನ್ನವರ, ಗುರುಪಾದ ತವಗೇರಿ, ಸುರೇಶ ಕಾಮೇವಾಡಿ, ಪ್ರಕಾಶ ಕರನಿಂಗ, ವಿನೋದ ಕರನಿಂಗ, ಧನ್ಯಕುಮಾರ ಮೇಗೆರಿ, ಬಸವರಾಜ ಬೇಡರಟ್ಟಿ, ಫಕೀರವ್ವ ನವನಿ, ಮಹಾನಿಂಗ ಬುರಾಣಿ, ರಾಜು ಪಾತ್ರೂಟ, ಮೂದಲಿಂಗ ಗೋರಬಾಳ, ಬಾಳೇಶ ಹುಳಿಸಂಗಟಿ, ಸುನೀಲ ಗಡ್ಡಿಹೊಳಿ, ಗೋವಿಂಗ ಕಳ್ಳಿಮನಿ, ಬೀರಪ್ಪ ಮೈಲನ್ನವರ, ಸಿದ್ದಪ್ಪ ದೇಸಾಯಿ, ಸುನೀತಾ ಕೊಳವಿ, ಸುನೀತಾ ಕೊಣ್ಣೂರ, ರೂಪಾ ಶಾಬಂದರೆ ಸೇರಿದಂತೆ ಅನೇಕರು ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌