ವಾಲ್ಮೀಕಿ ನಿಗಮದ ಬಹುಕೋಟಿ ಹಣ ಗುಳುಂ ಆರೋಪ; ಅಮಿತ್ ಶಾಗೆ ಪತ್ರ ಬರೆದ ಯತ್ನಾಳ್!

By Ravi Janekal  |  First Published Jun 1, 2024, 2:31 PM IST

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆಯಿಂದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದಿದ್ದಾರೆ.


ವಿಜಯಪುರ (ಜೂ.1): ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆಯಿಂದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದಿದ್ದಾರೆ.

ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ ನೀಡಿರುವ ದೂರು ಪರಿಗಣಿಸಿ ಸಿಬಿಐ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಅಲ್ಲದೇ ಈ ಹಿಂದೆ ನಡೆದ ಆತ್ಮಹತ್ಯೆ ಪ್ರಕ ಪತ್ರದಲ್ಲಿ ಈ ಹಿಂದೆ  ನಡೆದ ಆತ್ಮಹತ್ಯೆ ಘಟನೆಗಳ ಬಗ್ಗೆ ಉಲ್ಲೇಖಿಸಿದ್ದಾರೆ 2016 ರಲ್ಲಿ ಮಡಿಕೇರಿಯಲ್ಲಿ ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣ, 2019 ರಲ್ಲಿ ಬೆಂಗಳೂರು ವಿಶ್ವ ವಿದ್ಯಾಲಯ ಆವರಣದಲ್ಲಿ ಜಿ.ಪರಮೇಶ್ವರ ಆಪ್ತ ಸಹಾಯಕ ಆತ್ಮಹತ್ಯೆ ಪ್ರಕರಣ, ದಾವಣಗೆರೆಯಲ್ಲಿ ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ ನಡೆದಾಗ ಇದೇ ರೀತಿಯ ಆರೋಪ ಕೇಳಿಬಂದಿತ್ತು. ಇದೀಗ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಡೆತ್‌ನೋಟ್‌ನಲ್ಲಿ ಸ್ಪಷ್ಟವಾಗಿ ಬರೆದಿಟ್ಟು ಇದರಲ್ಲಿ ನನ್ನದೇನು ತಪ್ಪಿಲ್ಲ. ಅಧಿಕಾರಿಗಳು, ಸರ್ಕಾರದ ಒತ್ತಡದ ಬಗ್ಗೆ ತಿಳಿಸಿದ್ದಾರೆ. ಹೀಗಾಗಿ ಈ ಪ್ರಕರಣದ ತನಿಖೆ ಸಿಬಿಐನಿಂದಲೇ ನಡೆಸಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

Tap to resize

Latest Videos

undefined

ವಾಲ್ಮೀಕಿ ನಿಗಮ ಅಕ್ರಮ ಪ್ರಕರಣ: ಯಾವ್ಯಾವ ಕಂಪನಿಗೆ ಎಷ್ಟೆಷ್ಟು ಹಣ ವರ್ಗಾವಣೆ ಆಗಿದೆ ಗೊತ್ತಾ..?

ವಾಲ್ಮೀಕಿ ನಿಗಮದ ಅಕ್ರಮ ಹಣ ಇದೀಗ ತೀವ್ರ ಸ್ವರೂಪ ಪಡೆದಿದ್ದು ರಾಜ್ಯಾದ್ಯಂತ ಬಿಜೆಪಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದೆ. ಈಗಾಗಲೇ ಸಿಎಂ ಡಿಸಿಎಂ ಸಹ ಈ ಘಟನೆ ಬಳಿಕ ಅಲರ್ಟ್ ಆಗಿದ್ದಾರೆ. ಮುಜುಗರ ತಪ್ಪಿಸಿಕೊಳ್ಳಲು ಸಚಿವರ ರಾಜೀನಾಮೆ ಪಡೆಯುವ ಸಾಧ್ಯತೆಯೂ ಇದೆ. ಯೂನಿಬ್ಯಾಂಕ್ ಸಹ ದೂರು ನೀಡಿರುವುದರಿಂದ ಬೆಂಗಳೂರಿನ ಸಿಬಿಐ ಅಧಿಕಾರಿಗಳು ಕೇಂದ್ರ ಅಧಿಕಾರಿಗಳ ಗಮನಕ್ಕೂ ತಂದಿದ್ದಾರೆ ಈ ಹಿನ್ನೆಲೆ ಸಿಬಿಐ ವಿಚಾರಣೆ ನಡೆಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

click me!