ವಾಲ್ಮೀಕಿ ಹಗರಣ ಕೇಸ್‌: 18 ನಕಲಿ ಖಾತೆ ರೂವಾರಿ ಹೈದ್ರಾಬಾದ್‌ನಲ್ಲಿ ಬಂಧನ

By Kannadaprabha News  |  First Published Jun 12, 2024, 5:49 AM IST

ನಿಗಮದ ಹಣ ಅಕ್ರಮವಾಗಿ ವರ್ಗಾವಣೆಯಾಗಿರುವ 18 ಫೇಕ್‌ ಅಕೌಂಟ್‌ ತೆರೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಹೈದರಾಬಾದ್‌ ಮೂಲದ ಸತ್ಯನಾರಾಯಣ ವರ್ಮಾ ಎಂಬಾತನನ್ನು ಎಸ್ಐಟಿ ಅಧಿಕಾರಿಗಳ ತಂಡ ವಶಕ್ಕೆ ಪಡೆದಿದೆ. 


ಬೆಂಗಳೂರು (ಜೂ.12): ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಸಂಬಂಧ ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳು ಹೈದರಾಬಾದ್‌ನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಿಗಮದ ಹಣ ಅಕ್ರಮವಾಗಿ ವರ್ಗಾವಣೆಯಾಗಿರುವ 18 ಫೇಕ್‌ ಅಕೌಂಟ್‌ ತೆರೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಹೈದರಾಬಾದ್‌ ಮೂಲದ ಸತ್ಯನಾರಾಯಣ ವರ್ಮಾ ಎಂಬಾತನನ್ನು ಎಸ್ಐಟಿ ಅಧಿಕಾರಿಗಳ ತಂಡ ವಶಕ್ಕೆ ಪಡೆದಿದೆ. 

ಈತನ ಬಳಿ ಮೂರು ಸೂಟ್‌ ಕೇಸ್‌ ತುಂಬಿದ್ದ ಭಾರೀ ಪ್ರಮಾಣದ ಹಣ ಪತ್ತೆಯಾಗಿದೆ. ಈ ಸತ್ಯನಾರಾಯಣ ವರ್ಮಾನನ್ನು ಎಸ್‌ಐಟಿ ಅಧಿಕಾರಿಗಳು ಬುಧವಾರ ಬೆಂಗಳೂರಿಗೆ ಕರೆತಂದು ವಿಚಾರಣೆಗೆ ಒಳಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ.ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ನಿಯಮಿತದ ಎಂ.ಜಿ.ರಸ್ತೆಯ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ಖಾತೆಯಿಂದ 18 ಖಾತೆಗಳಿಗೆ ಬರೋಬ್ಬರಿ 94.73 ಕೋಟಿ ರು. ಅಕ್ರಮವಾಗಿ ವರ್ಗಾವಣೆಯಾಗಿತ್ತು. ಈ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿತ್ತು.

Tap to resize

Latest Videos

ಬಿಜೆಪಿ ಅವಧಿಯಲ್ಲೂ ವಾಲ್ಮೀಕಿ ನಿಗಮದಲ್ಲಿ ಅಕ್ರಮ: ಸಚಿವ ರಾಮಲಿಂಗಾರೆಡ್ಡಿ

ಈ ಅಕ್ರಮ ಹಣ ವರ್ಗಾವಣೆ ಸಂಬಂಧ ಈಗಾಗಲೇ ತನಿಖೆಗೆ ಇಳಿದಿರುವ ಎಸ್‌ಐಟಿ, ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್‌, ಮಾಜಿ ಸಚಿವ ಬಿ.ನಾಗೇಂದ್ರ ಅವರ ಅಪ್ತ ಎನ್ನಲಾದ ನಾಗರಾಜ್‌ ನೆಕ್ಕುಂಟಿ, ನಾಗೇಶ್ವರ್‌ ರಾವ್‌ ಎಂಬುವವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದೆ. ಶಿವಮೊಗ್ಗದಲ್ಲಿ ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆಯಿಂದ ಬೆಳಕಿಗೆ ಬಂದಿದ್ದ ಹಗರಣದಲ್ಲಿ, ನಿಗಮದ 94.7 ಕೋಟಿ ರು.ಗಳನ್ನು 18 ನಕಲಿ ಖಾತೆಗಳಿಗೆ ಅಧಿಕಾರಿಗಳು ವರ್ಗಾಯಿಸಿದ್ದ ಪ್ರಕರಣ ಎಸ್ಐಟಿ, ಸಿಬಿಐನಿಂದ ತನಿಖೆ ನಡೆದಿದ್ದು, ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ನೀಡಿದ್ದರು. ಈಗ ಆಂಧ್ರದಲ್ಲಿ ನಕಲಿ ಬ್ಯಾಂಕ್‌ ಖಾತೆಗಳನ್ನು ತೆರೆಯಲು ಸಹಕರಿಸಿದ್ದ ಸತ್ಯನಾರಾಯಣರನ್ನು ವಶಕ್ಕೆ ಪಡೆಯಲಾಗಿದೆ.

ಸಿಬಿಐಗೆ ವಹಿಸಲು ಒತ್ತಾಯ: ರಾಜ್ಯ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಹೈದರಾಬಾದ್ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಂಘದ ವಿಭಾಗೀಯ ಕಾರ್ಯದರ್ಶಿ ಎನ್.ರಘುವೀರ ನಾಯಕ ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2008ರಲ್ಲಿ ರಾಜ್ಯದ ವಾಲ್ಮೀಕಿ ಸಮುದಾಯದ ಅಭಿವೃದ್ಧಿಗಾಗಿ ಸ್ಥಾಪನೆಯಾದ ನಿಗಮದಲ್ಲಿ ಒಂದಲ್ಲ ಒಂದು ಸಮಸ್ಯೆಗಳ ಎದುರಾಗುತ್ತಿದ್ದು, ಇದೀಗ ಬರೋಬ್ಬರಿ ₹187ಕೋಟಿ ಸಮುದಾಯದ ಅಭಿವೃದ್ಧಿಗೆ ಹಣ ಅವ್ಯವಹಾರದ ಆರೋಪ ಅತ್ಯಂತ ಗಂಭೀರವಾಗಿದೆ. 

ವಾಲ್ಮೀಕಿ ನಿಗಮ ಹಗರಣದಲ್ಲಿ ನನ್ನ ಪಾತ್ರವಿಲ್ಲ: ಶಾಸಕ ಬಸನಗೌಡ ದದ್ದಲ್‌

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಪ್ರಕರಣವನ್ನು ಎಸ್‌ಐಟಿಗೆ ವಹಿಸಿದೆ. ಆದರೂ ಪ್ರಕರಣ ಸಮರ್ಪಕವಾಗಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಿ ವಿಚಾರಣೆ ನಡೆಸುವುದೇ ಎಂಬ ಸಂಶಯವಿದೆ ಎಂದು ಅನುಮಾನ ವ್ಯಕ್ತಪಡಿಸಿದರು. ಈ ಹಿನ್ನೆಲೆ ಪ್ರಕರಣ ಸಿಬಿಐ ತನಿಖೆಗೊಳಪಡಿಸಿದರೆ, ಅದರಲ್ಲಿ ಭಾಗಿಯಾದ ಎಷ್ಟೆ ಪ್ರಭಾವಿಗಳಿದ್ದರೂ ಶಿಕ್ಷೆಯಾಗುತ್ತದೆ. ಸುಮಾರು ವರ್ಷಕ್ಕೆ ₹600 ಕೋಟಿಯವರೆಗೆ ಅನುದಾನ ಲಭ್ಯ ಆಗುತ್ತಿದ್ದು, ಸಮುದಾಯದ ಫಲಾನುಭವಿಗಳಿಗೆ ತಲುಪಬೇಕಿದ್ದ ಹಣ ಸರ್ಕಾರದ ಪ್ರತಿನಿಧಿಗಳು ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ದೂರಿದರು.

click me!