
ಬೆಂಗಳೂರು(ಸೆ.16): ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಪ್ರಧಾನ ಮಂತ್ರಿ ಮತ್ತು ರಾಜ್ಯಪಾಲರು ಭಾಗವಹಿಸುವ ಕಾರ್ಯಕ್ರಮ ಹೊರತುಪಡಿಸಿ ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಎರಡು ಚರಣಗಳನ್ನು ಮಾತ್ರ ಹಾಡುವುದನ್ನು ಕಡ್ಡಾಯಗೊಳಿಸಿ 2026ರ ಸೆ.8ರಂದು ಸರ್ಕಾರ ಹೊರಡಿಸಿರುವ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ.
ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ವಕೀಲ ಗಿರೀಶ್ ಭಾರದ್ವಾಜ್ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಕೇಂದ್ರ ಗೃಹ ಇಲಾಖೆಯನ್ನು ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿಸಲಾಗಿದೆ. ಅದು ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ. ವಂದೇ ಮಾತರಂ ಸಂಪೂರ್ಣ ಗೀತೆಯನ್ನು ರಕ್ಷಿಸುವ ಸಂಸತ್‌ನ ಉದ್ದೇಶವನ್ನು ಸರ್ಕಾರದ ಆದೇಶ ಕ್ಷುಲ್ಲಕಗೊಳಿಸಿದೆ. ಹಾಗಾಗಿ, ಸರ್ಕಾರದ ಆದೇಶ ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ನಿನ್ನೆ ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗೀತೆಯನ್ನು ಅರ್ಧಕ್ಕೆ ಮೊಟಕುಗೊಳಿಸಿದರೆಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಕಾರ್ಯಕ್ರಮದಿಂದಲೇ ಹೊರನಡೆದಿದ್ದಾರೆ ಘಟನೆ ನಡೆಯಿತು. ವಂದೇ ಮಾತರಂ ಪೂರ್ಣ ಹಾಡುವ ಕಾನೂನು ಜಾರಿ ಇದ್ದರೂ ರಾಜ್ಯ ಸರ್ಕಾರ ಅರ್ಧಕ್ಕೆ ಮೊಟಕುಗೊಳಿಸುತ್ತಿದೆ ಎಂದು ಕಿಡಿಕಾರಿದರು. ವಂದೇ ಮಾತರಂ ಎರಡೇ ಚರಣ ಹಾಡಲು ರಾಜ್ಯ ಸರ್ಕಾರ ಆದೇಶ ಮಾಡಿದ ಬೆನ್ನಲ್ಲೇ ಇದೀಗ ಮತ್ತೆ ವಂದೇ ಮಾತರಂ ವಿವಾದ ಭುಗಿಲೆದ್ದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ