
ಬೆಂಗಳೂರು(ಅ.29): ರೈಲ್ವೆ ಮಾರ್ಗ ಕಾಮಗಾರಿ ಹಿನ್ನೆಲೆಯಲ್ಲಿ ಭಾನುವಾರ (ಅ.30) ಜನಶತಾಬ್ದಿ ರೈಲು ಸೇರಿದಂತೆ ಬೆಂಗಳೂರು - ಹುಬ್ಬಳ್ಳಿ ಮಾರ್ಗದ ರೈಲುಗಳ ಓಡಾಟ ಭಾಗಶಃ ವ್ಯತ್ಯಯ ಉಂಟಾಗಲಿದೆ.
ದೇವರಗುಡ್ಡ - ಬ್ಯಾಡಗಿ ಮಾರ್ಗದಲ್ಲಿ ಲೈನ್ ಬ್ಲಾಕ್ ನಿರ್ವಹಣಾ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ಕೆಎಸ್‌ಆರ್ ಬೆಂಗಳೂರು - ಹುಬ್ಬಳ್ಳಿ ಜನಶತಾಬ್ದಿ ರೈಲನ್ನು ಹರಿಹರದಿಂದ ಹುಬ್ಬಳ್ಳಿವರೆಗೂ ಸ್ಥಗಿತಗೊಳಿಸಲಾಗಿದ್ದು, ಬೆಂಗಳೂರಿನಿಂದ ಹರಿಹರವರೆಗೂ ಮಾತ್ರ ಸಂಚರಿಸಲಿದೆ. ಈ ರೈಲು ಹರಿಹರದಿಂದ ಬೆಂಗಳೂರಿಗೆ ಹಿಂದಿರುಗಲಿದೆ. ಬೆಳಗಾವಿ ಮೈಸೂರು ವಿಶ್ವಮಾನವ ಎಕ್ಸ್‌ಪ್ರೆಸ್ ಬೆಳಗಾವಿಯಿಂದ ರಾಣೆಬೆನ್ನೂರು ನಿಲ್ದಾಣವರೆಗೆ ಸಂಚಾರ ಸ್ಥಗಿತಗೊಳಿಸಲಾಗಿದೆ. ಅರಸಿಕೆರೆ ಹುಬ್ಬಳ್ಳಿ ಎಕ್ಸ್‌ಪ್ರೆಸ್ ರೈಲು ಅರಸಿಕೆರೆ - ಹಾವೇರಿ ನಿಲ್ದಾಣದ ನಡುವೆ ಸ್ಥಗಿತಗೊಳಿಸಲಾಗಿದೆ. ಈ ಎಲ್ಲಾ ರೈಲುಗಳ ಸಂಚರಿಸುವ ನಿಲ್ದಾಣಗಳ ವೇಳಾಪಟ್ಟಿಯಲ್ಲಿ ಯಾವುದೇ ವ್ಯತ್ಯಯವಿಲ್ಲ. ಹುಬ್ಬಳ್ಳಿ ಚಿತ್ರದುರ್ಗ ಎಕ್ಸ್‌ಪ್ರೆಸ್ ಓಡಾಟ ಪೂರ್ಣಪ್ರಮಾಣದಲ್ಲಿ ರದ್ದಾಗಿದೆ ಎಂದು ನೈಋುತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.
ನಿಮ್ಮ ಸೇವೆಯಲ್ಲಿ ಭಾರತೀಯ ರೈಲ್ವೆ.. ಪ್ರಯಾಣಿಕರಿಗೆ ಉಚಿತ ಸ್ನಾನ..!
ಬೆಂಗಳೂರು-ಮೈಸೂರು ರೈಲುಗಳ ವೇಗ ಹೆಚ್ಚಳ
ಬೆಂಗಳೂರು ಮತ್ತು ಮೈಸೂರು ನಡುವೆ ಸಂಚರಿಸುವ ಎಂಟು ರೈಲುಗಳನ್ನು ಸೂಪರ್ ಫಾಸ್ಟ್ ರೈಲುಗಳಾಗಿ ಮರು ವಿನ್ಯಾಸಗೊಳಸಲಾಗಿದೆ. ಜತೆಗೆ ಈ ಮಾರ್ಗದ ಹಲವು ರೈಲುಗಳ ವೇಗವನ್ನು ಕೂಡಾ ಹೆಚ್ಚಿಸಲಾಗಿದೆ.
ಬೆಂಗಳೂರು-ಮೈಸೂರು ಮಾರ್ಗದಲ್ಲಿ ಪ್ರತಿನಿತ್ಯ ಲಕ್ಷಾಂತರ ಪ್ರಯಾಣಿಕರು ಸಂಚರಿಸುತ್ತಾರೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ನೈಋುತ್ಯ ರೈಲ್ವೆ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು-ಮೈಸೂರು ರಾಜ್ಯ ರಾಣಿ ಎಕ್ಸಪ್ರೆಸ್, ಮಾಲ್ಗುಡಿ ಎಕ್ಸ್‌ಪ್ರೆಸ್, ಮೈಸೂರು-ಮೈಲಾಡುತುರೈ ಎಕ್ಸ್‌ಪ್ರೆಸ್, ಮೈಸೂರು ಸಾಯಿ ನಗರ ಶಿರಡಿ ಎಕ್ಸ್‌ಪ್ರೆಸ್ ಸೇರಿ ಎಂಟು ಎಕ್ಸ್‌ಪ್ರೆಸ್ ರೈಲುಗಳನ್ನು ಸೂಪರ್ ಫಾಸ್ಟ್ ರೈಲುಗಳಾಗಿ ಮರು ವಿನ್ಯಾಸಗೊಸಲಾಗಿದೆ.
ಜತೆಗೆ ಹೌರಾ-ಮೈಸೂರು ಸಾಪ್ತಾಹಿಕ ಸೂಪರ್‌ಫಾಸ್ವ್ ಎಕ್ಸ್‌ಪ್ರೆಸ್, ಎಂಜಿಆರ್ ಚೆನ್ನೈ ಸೆಂಟ್ರಲ್-ಮೈಸೂರು ಸೂಪರ್‌ಫಾಸ್ವ್ ಎಕ್ಸ್‌ಪ್ರೆಸ್, ಹುಬ್ಬಳ್ಳಿ-ಮೈಸೂರು ಎಕ್ಸ್‌ಪ್ರೆಸ್, ಕೊಚುವೇಲಿ-ಮೈಸೂರು ಎಕ್ಸ್‌ಪ್ರೆಸ್, ಅಜ್ಮಿರ್ -ಮೈಸೂರು ಪಾಕ್ಷಿಕ ಎಕ್ಸ್‌ಪ್ರೆಸ್, ಬೆಂಗಳೂರು-ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್, ಚಾಮರಾಜ ನಗರ-ತುಮಕೂರು ದೈನಂದಿನ ಪ್ಯಾಸೆಂಜರ್, ಮೈಸೂರು ಯಶವಂತಪುರ ಎಕ್ಸ್‌ಪ್ರೆಸ್‌ಗಳ ವೇಗ ಹೆಚ್ಚಸಲಾಗಿದೆ ಎಂದು ನೈಋುತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ