ಗಮನಿಸಿ, ಮೇ 9 ಮತ್ತು ಮೇ 10 ರಂದು ಕೆಎಸ್‌ಆರ್‌ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ

Published : May 06, 2023, 05:33 PM IST
ಗಮನಿಸಿ, ಮೇ 9 ಮತ್ತು ಮೇ 10 ರಂದು ಕೆಎಸ್‌ಆರ್‌ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ

ಸಾರಾಂಶ

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 9 ಮತ್ತು ಮೇ 10 ರಂದು ಕೆಎಸ್‌ಆರ್‌ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಮತ್ತು ಆ ದಿನ ಸಾರ್ವಜನಿಕರ ಪ್ರಯಾಣಕ್ಕೆ ಬಸ್‌ಗಳ ಸಂಖ್ಯೆ ಕೂಡ ಕಡಿಮೆ ಇರಲಿದೆ.

ಬೆಂಗಳೂರು (ಮೇ.6): ಕರ್ನಾಟಕ ವಿಧಾನ ಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಲಿದೆ. ಮೇ.10 ರಂದು ಚುನಾವಣೆ ಮತದಾನ ನಡೆಯಲಿದ್ದು, ಮೇ 9 ಮತ್ತು ಮೇ 10 ರಂದು ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬಸ್ ಒದಗಿಸಿದ ಕಾರಣದಿಂದಾಗಿ  ಸಾರ್ವಜನಿಕರ ಪ್ರಯಾಣಕ್ಕೆ ಬಸ್‌ಗಳ ಸಂಖ್ಯೆ ಕೂಡ ಕಡಿಮೆ ಇರಲಿದೆ.  ಪ್ರಯಾಣಿಕರು ಸಹಕರಿಸುವಂತೆ ರಾಜ್ಯ ಸಾರಿಗೆ ಇಲಾಖೆ ಮನವಿ ಮಾಡಿಕೊಂಡಿದೆ.

ಮತದಾನ ದಿನಕ್ಕೂ ಮುನ್ನ ಎಲ್ಲ ಬೂತ್‌ಗಳಿಗೆ ಚುನಾವಣಾ ಸಿಬ್ಬಂದಿ, ಪೊಲೀಸರು ಸೇರಿದಂತೆ ಇವಿಎಂ ಮಷಿನ್ ಮತ್ತು ವಿವಿ ಪ್ಯಾಟ್‌ಗಳನ್ನು ತಲುಪಿಸಲು ಎಂದಿನಂತೆ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಬಳಸಿಕೊಳ್ಳಲಾಗಿದೆ.  ಮೇ 10ರಂದು ರಾಜ್ಯದ 224 ಕ್ಷೇತ್ರಗಳಲ್ಲಿ ಮತದಾನ ನಡೆಯುವ ಹಿನ್ನೆಲೆ ಮೇ 9, 10ರಂದು ಕರ್ನಾಟಕ ಸಾರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ.

ಬೆಂಗಳೂರು-ಮೈಸೂರಿನಲ್ಲಿ ಫೈನಾನ್ಸಿಯರ್‌ಗಳ ಮೇಲೆ ಐಟಿ ದಾಳಿ, ಅಭ್ಯರ್ಥಿಗಳಿಗಾಗಿ

ರಾಜ್ಯದಲ್ಲಿ ಒಟ್ಟು 8,100 ಕೆಎಸ್​ಆರ್​ಟಿಸಿ ಬಸ್​ಗಳಿದ್ದು, ಈ ಪೈಕಿ 3,700 ಬಸ್​​ಗಳು ಕರ್ನಾಟಕ ವಿಧಾನಸಭೆ ಚುನಾವಣಾ ಕರ್ತವ್ಯಕ್ಕೆ ಬಳಸಿಕೊಳ್ಳಲಾಗುತ್ತಿದೆ. ಈ ಕಾರಣಕ್ಕೆ ಮೇ 9 ಮತ್ತು 10ರಂದು 4,400 ಕೆಎಸ್​ಆರ್​ಟಿಸಿ ಬಸ್​ಗಳು ಮಾತ್ರ ಕಾರ್ಯ ನಿರ್ವಹಿಸಲಿದೆ. ಈ ಹಿನ್ನೆಲೆಯಲ್ಲಿ ಮತದಾನ ಮಾಡಲು ಒಂದು ಊರಿನಿಂದ ಮತ್ತೊಂದು ಊರಿಗೆ ಅಥವಾ  ಬೆಂಗಳೂರಿನಂತಹ ನಗರ ಪ್ರದೇಶಗಳಲ್ಲಿ ಉದ್ಯೋಗ ನಿರ್ವಹಿಸುತ್ತಿರುವವರು ತಮ್ಮ  ಗ್ರಾಮಗಳಿಗೆ ಹೋಗಲು ಈ ಎರಡು ದಿನಗಳ ಕಾಲ ಕೆಎಸ್​ಆರ್​ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಹಾಗಾಗಿ ಕೆಸ್‌ಆರ್‌ಟಿಸಿ ಬಸ್ ಸಿಗದವರು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬಹುದು.

Modi Bengaluru RoadShow: ಮೋದಿಯನ್ನು ಕಣ್ತುಂಬಿಕೊಂಡು ಪುಳಕಿತರಾ

ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಮೇ 10 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ