ಜಾತಿ ಗಣತಿ ಹಿನ್ನೆಲೆ : ಹುಬ್ಬಳ್ಳಿಯಲ್ಲಿ ಏಕತಾ ಸಮಾವೇಶ ಇಂದು

Kannadaprabha News   | Kannada Prabha
Published : Sep 19, 2025, 05:41 AM IST
Separate Lingayat Religion

ಸಾರಾಂಶ

ರಾಜ್ಯದಲ್ಲಿ ಸೆ.22ರಿಂದ ನಡೆಯಲಿರುವ ಜಾತಿ ಗಣತಿ ಹಿನ್ನೆಲೆಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಹುಬ್ಬಳ್ಳಿಯಲ್ಲಿ ಸೆ.19ರಂದು ‘ವೀರಶೈವ ಲಿಂಗಾಯತ ಏಕತಾ ಸಮಾವೇಶ’ ಆಯೋಜಿಸಲಾಗಿದ್ದು, ಸಾವಿರಾರು ಸ್ವಾಮೀಜಿಗಳು ವೀರಶೈವ-ಲಿಂಗಾಯತ ಬೇರೆ ಅಲ್ಲ ಎರಡೂ ಒಂದೇ ಎಂಬ ಸಂದೇಶ ಸಾರಲಿದ್ದಾರೆ.

ಹುಬ್ಬಳ್ಳಿ : ರಾಜ್ಯದಲ್ಲಿ ಸೆ.22ರಿಂದ ನಡೆಯಲಿರುವ ಜಾತಿ ಗಣತಿ ಹಿನ್ನೆಲೆಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಹುಬ್ಬಳ್ಳಿಯಲ್ಲಿ ಸೆ.19ರಂದು ‘ವೀರಶೈವ ಲಿಂಗಾಯತ ಏಕತಾ ಸಮಾವೇಶ’ ಆಯೋಜಿಸಲಾಗಿದ್ದು, ಸಾವಿರಾರು ಸ್ವಾಮೀಜಿಗಳು ವೀರಶೈವ-ಲಿಂಗಾಯತ ಬೇರೆ ಅಲ್ಲ ಎರಡೂ ಒಂದೇ ಎಂಬ ಸಂದೇಶ ಸಾರಲಿದ್ದಾರೆ.

ನಗರದ ನೆಹರೂ ಮೈದಾನ ಸಮಾವೇಶಕ್ಕೆ ಸಜ್ಜುಗೊಂಡಿದ್ದು, ಕಾರ್ಯಕ್ರಮದಲ್ಲಿ 1000ಕ್ಕೂ ಅಧಿಕ ಮಠಾಧೀಶರು ಹಾಗೂ 1 ಲಕ್ಷಕ್ಕೂ ಅಧಿಕ ಜನರು ಭಾಗಿಯಾಗಲಿದ್ದಾರೆ. ಜಾತಿ ಗಣತಿಯಲ್ಲಿ ಏನೆಂದು ನಮೂದಿಸಬೇಕು ಎಂಬುದರ ಕುರಿತು ಸಮುದಾಯದ ವಿವಿಧ ಪಂಗಡದವರಿಗೆ ಮನವರಿಕೆ ಮಾಡಿಕೊಡುವ ಉದ್ದೇಶದಿಂದ ಸಮಾವೇಶ ಹಮ್ಮಿಕೊಂಡಿದ್ದು, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌.ಯಡಿಯೂರಪ್ಪ, ಜಗದೀಶ ಶೆಟ್ಟರ್‌, ಸಚಿವರಾದ ಈಶ್ವರ ಖಂಡ್ರೆ, ಶಿವಾನಂದ ಪಾಟೀಲ, ವಿವಿಧ ಪಕ್ಷಗಳ ಮಾಜಿ ಸಚಿವರು, ಶಾಸಕರು, ಸಂಸದರು, ಮುಖಂಡರು ಪಾಲ್ಗೊಳ್ಳಲಿದ್ದಾರೆ.

ಮಹರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ತಮಿಳನಾಡು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸುವ ಅನೇಕ ಮಠಾಧೀಶರು ಮೂರುಸಾವಿರ ಮಠದಿಂದ ಪಾದಯಾತ್ರೆ ಮೂಲಕ ನೆಹರೂ ಮೈದಾನಕ್ಕೆ ಆಗಮಿಸುವರು. ಧಾರವಾಡ, ಬಾಗಲಕೋಟೆ, ಗದಗ, ಹಾವೇರಿ, ಬೆಳಗಾವಿ, ವಿಜಯಪುರ, ದಾವಣಗೆರೆ ಸೇರಿದಂತೆ ರಾಜ್ಯದ ನಾನಾ ಜಿಲ್ಲೆಗಳಿಂದ ಅಪಾರ ಸಂಖ್ಯೆಯಲ್ಲಿ ಜನರು ಬರುವ ನಿರೀಕ್ಷೆ ಇದೆ. ಆಯೋಜಕರೊಂದಿಗೆ ಹು-ಧಾ ಪೊಲೀಸ್‌ ಕಮಿಷನರೇಟ್‌ನ ಡಿಸಿಪಿ ಮಹಾನಿಂಗ ನಂದಗಾವಿ ಸಭೆ ನಡೆಸಿದ್ದು, ವಾಹನಗಳ ಸಂಚಾರ, ಪಾರ್ಕಿಂಗ್‌ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.

ಸಮಾವೇಶದಲ್ಲಿ ಯಾವುದೇ ಗೊಂದಲ ಉಂಟಾಗದಂತೆ ಮುಂಜಾಗ್ರತಾ ಕ್ರಮವಹಿಸಲು ಮತ್ತು ವೇದಿಕೆ ನಿರ್ಹವಣೆ, ಊಟ, ಮೇಲ್ವಿಚಾರಣೆ ಹಿತದೃಷ್ಟಿಯಿಂದ 200 ಸ್ವಯಂ ಸೇವಕರನ್ನು ನೇಮಿಸಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
ರಾಯಚೂರು: ರಸ್ತೆಯಲ್ಲಿ ಹೋಗುತ್ತಿದ್ದ ಹಾವು ಹಿಡಿದು ಬೈಕ್ ಸವಾರ ಹುಚ್ಚಾಟ, ವಿಡಿಯೋ ವೈರಲ್