'ವೆಂಟಿಲೇಟರ್‌ ಕೊರತೆ ಸಾವು ಹೆಚ್ಚಳಕ್ಕೆ ಕಾರಣವಲ್ಲ'

By Kannadaprabha NewsFirst Published Oct 6, 2020, 8:09 AM IST
Highlights

ಆಕ್ಸಿಜನ್‌ ಬೆಡ್‌ಗಳ ಕೊರತೆಯಿಂದಾಗಿ ಕೊರೋನಾ ಸಾವು ಹೆಚ್ಚಾಗುತ್ತಿದೆ . ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 33 ಸಾವಿರ ಆಕ್ಸಿಜನ್‌ ಬೆಡ್‌ಗಳ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಲಾಗಿದೆ  ಎಂದು ಸಚಿವ ಸುಧಾಕರ್ ಹೇಳಿದ್ದಾರೆ.

ಮೈಸೂರು (ಅ.06):  ವೆಂಟಿಲೇಟರ್‌ ಇಲ್ಲದ ಕಾರಣ ಕೊರೋನಾ ಸಾವಿನ ಪ್ರಮಾಣ ಹೆಚ್ಚಳವಾಗಿಲ್ಲ, ಬದಲಾಗಿ ಆಕ್ಸಿಜನ್‌ ಬೆಡ್‌ಗಳ ಕೊರತೆಯಿಂದಾಗಿ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 33 ಸಾವಿರ ಆಕ್ಸಿಜನ್‌ ಬೆಡ್‌ಗಳ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಕ್ಸಿಜನ್‌ ಬೆಡ್‌ಗಳ ಕೊರತೆಯಿಂದಾಗಿ ಸಾವಿನ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಆಕ್ಸಿಜನ್‌ ಬೆಡ್‌ಗಳ ಕೊರತೆ ನೀಗಿಸಲಾಗುತ್ತಿದೆ. ಮುಂದೆ ರಾಜ್ಯದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಆಕ್ಸಿಜನ್‌ ಬೆಡ್‌ ಲಭ್ಯವಾಗಲಿದೆ ಎಂದರು.

ಬಿಎಸ್‌ವೈ ಸಂಪುಟದ ಮತ್ತೋರ್ವ ಸಚಿವರೊಬ್ಬರಿಗೆ ಕೊರೋನಾ..! .

ಇದೇ ವೇಳೆ 65 ವರ್ಷ ಮೇಲ್ಪಟ್ಟವರು ಸ್ವಯಂ ಕೊರೋನಾ ಟೆಸ್ವ್‌ ಮಾಡಿಸಿಕೊಳ್ಳುವ ಅಗತ್ಯವಿರುವುದರಿಂದ 65 ವರ್ಷ ಮೇಲ್ಪಟ್ಟವರ ಸರ್ವೇ ಮಾಡಿಸಲು ಸೂಚಿಸಲಾಗಿದೆ. ದಿನೇ ದಿನೇ ಕೊರೋನಾ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ದೇಶದಲ್ಲೇ ಕೊರೋನಾ ಹೆಚ್ಚಳವಾಗುತ್ತಿರುವ ರಾಜ್ಯಗಳಲ್ಲಿ ನಾವು ಎರಡನೇ ಸ್ಥಾನದಲ್ಲಿದ್ದೇವೆ ಎಂದು ಹೇಳಿದರು.

click me!