
ಬೆಂಗಳೂರು (ಅ.12): ಹಿರಿಯ ನಟ ಎಂ.ಎಸ್. ಉಮೇಶ್ ಅವರಿಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಇತ್ತೀಚೆಗೆ ಉಮೇಶ್ ಅವರು ಬಚ್ಚಲು ಮನೆಯಲ್ಲಿ ಕಾಲು ಜಾರಿ ಬಿದ್ದು, ಅವರ ಕಾಲು ಹಾಗೂ ಭುಜದ ಭಾಗಗಳ ಮೂಳೆಗೆ ಪೆಟ್ಟಾಗಿದ್ದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ವೈದ್ಯರು ಎಂಆರ್‌ಐ ಹಾಗೂ ಸಿಟಿ ಸ್ಕ್ಯಾನ್ ಮಾಡಿದಾಗ ಕ್ಯಾನ್ಸರ್ ಇರುವುದು ತಿಳಿದುಬಂದಿದೆ.
ನಾಲ್ಕನೇ ಹಂತದಲ್ಲಿರುವ ಲಿವರ್ ಕ್ಯಾನ್ಸರ್ ಬೇರೆ ಅಂಗಗಳಿಗೆ ಹರಡಿರುವುದು ಪತ್ತೆಯಾಗಿದೆ. ಕಾಯಿಲೆ ಬೇರೆ ಭಾಗಗಳಿಗೆ ಎಷ್ಟು ಹರಡಿದೆ ಎಂದು ತಿಳಿಯಲು ವೈದ್ಯರು ಇನ್ನಷ್ಟು ಟೆಸ್ಟ್‌ಗಳನ್ನು ಮಾಡಿಸುತ್ತಿದ್ದಾರೆ ಎನ್ನಲಾಗಿದೆ. ಮುಂದಿನ ದಿನಗಳಲ್ಲಿ ಕೀಮೋ ಥೆರಪಿ, ಇಮ್ಯುನೋ ಥೆರಪಿ ಮಾಡುವ ತಯಾರಿಯಲ್ಲಿದ್ದಾರೆ.
ಇದನ್ನೂ ಓದಿ: ಸ್ಯಾಂಡಲ್‌ವುಡ್ ಹಿರಿಯ ನಟ ಉಮೇಶ್ ಸ್ಥಿತಿ ಗಂಭೀರ!
80 ವರ್ಷ ವಯಸ್ಸಿನ ಉಮೇಶ್ ಈವರೆಗೆ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ಪೋಷಕ ನಟನಾಗಿ ಮಿಂಚಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ