ಕಮಲಾ ಹಂಪನಾ ಅವರು ಬೆಂಗಳೂರಿನ ಕಾಲೇಜುಗಳಲ್ಲಿ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದರು. ವಿಮರ್ಶೆ, ಸಂಶೋಧನೆಗಳಲ್ಲಿ ಹೆಸರಾಗಿದ್ದ ಕಮಲಾ ಹಂಪನಾ, ಮೂಡುಬಿದಿರೆಯಲ್ಲಿ ನಡೆದಿದ್ದ 71ನೇ ಕನ್ನಡ ಸಾಹಿತ್ಯ ಸಮ್ಮೇಳದ ಅಧ್ಯಕ್ಷರಾಗಿದ್ದರು.
ಬೆಂಗಳೂರು(ಜೂ.22): ಹಿರಿಯ ಲೇಖಕಿ ಕಮಲಾ ಹಂಪನಾ(89) ಹೃದಯಾಘಾತದಿಂದ ನಿಧನರಾಗಿದ್ದಾರೆ. ನಿನ್ನೆ(ಶುಕ್ರವಾರ) ರಾತ್ರಿ ನಿದ್ದೆಯಲ್ಲೇ ಹೃದಯಾಘಾತದಿಂದ ಕಮಲಾ ಹಂಪನಾ ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿದು ಬಂದಿದೆ.
ಕಮಲಾ ಹಂಪನಾ ಅವರು ಬೆಂಗಳೂರಿನ ಕಾಲೇಜುಗಳಲ್ಲಿ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದರು. ವಿಮರ್ಶೆ, ಸಂಶೋಧನೆಗಳಲ್ಲಿ ಹೆಸರಾಗಿದ್ದ ಕಮಲಾ ಹಂಪನಾ, ಮೂಡುಬಿದಿರೆಯಲ್ಲಿ ನಡೆದಿದ್ದ 71ನೇ ಕನ್ನಡ ಸಾಹಿತ್ಯ ಸಮ್ಮೇಳದ ಅಧ್ಯಕ್ಷರಾಗಿದ್ದರು.
undefined
ಪಂ.ರಾಜೀವ್ ತಾರಾನಾಥ್ ಅಸ್ತಂಗತ: ರಾಗದಿಂದ ಸರೋದ್ ವಾದನದೆಡೆಗೆ ಸಾಗಿದ ಹಾದಿಯೇ ಅಚ್ಚರಿ..!
ಕಮಲಾ ಹಂಪನಾ ಅವರ ಪತಿ ಹಿರಿಯ ಲೇಖಕ ಹಂ.ಪ. ನಾಗರಾಜಯ್ಯ. ರಾಜಾಜಿನಗರದ ಮನೆಯಲ್ಲೇ ಕಮಲಾ ಹಂಪನಾ ಅವರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಕಮಲಾ ಹಂಪನಾ ಅವರ ದೇಹದಾನಕ್ಕೆ ಕುಟುಂಬಸ್ಥರು ನಿರ್ಧರಿಸಿದ್ದಾರೆ. ರಾಮಯ್ಯ ಮೆಡಿಕಲ್ ಕಾಲೇಜಿಗೆ ಕಮಲಾ ದೇಹದಾನ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.
ಹಿರಿಯ ಲೇಖಕಿ ಕಮಲಾ ಹಂಪನಾ ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.