
ಚಿಕ್ಕಮಗಳೂರು (ಜು.5): ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್‌ಗೆ ಕಾಫಿನಾಡು ಪ್ರವೇಶಿಸದಂತೆ ಒಂದು ತಿಂಗಳ ಕಾಲ ಸಂಪೂರ್ಣ ನಿರ್ಬಂಧ ಹೇರಿದೆ. ದಿನಾಂಕ 06-07-2025 ರಿಂದ 04-08-2025 ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.
ಶರಣ್ ಪಂಪ್‌ವೆಲ್ ಮೇಲೆ 22ಕ್ಕೂ ಹೆಚ್ಚು ಕಾನೂನು ಪ್ರಕರಣಗಳು ದಾಖಲಾಗಿದ್ದು, ಚಿಕ್ಕಮಗಳೂರು, ಮೂಡಿಗೆರೆ, ಮತ್ತು ಆಲ್ದೂರಿನಲ್ಲಿ ಸಭೆ-ಸಮಾರಂಭಗಳನ್ನು ಆಯೋಜಿಸಿದ್ದಾರೆ. ಬಲಪಂಥೀಯ ನಿಲುವಿನಿಂದ ಪ್ರಭಾವಿತರಾಗಿರುವ ಪಂಪ್‌ವೆಲ್, ಕೋಮುದ್ವೇಷ ಹರಡುವ ಮತ್ತು ಪ್ರಚೋದನಾಕಾರಿ ಭಾಷಣಗಳಿಂದ ಗಲಾಟೆ ಹಾಗೂ ಗುಂಪು ಘರ್ಷಣೆಗಳಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ: ಶಿವಮೊಗ್ಗ: ಗಣಪತಿ ವಾಸುಕಿ ವಿಗ್ರಹ ಒದ್ದು ಅವಮಾನಿಸಿದ ಅನ್ಯಕೋಮಿನ ಯುವಕರು; ಸ್ಥಳಕ್ಕೆ ಎಸ್‌ಪಿ ಮಿಥುನ್ ಕುಮಾರ್ ಭೇಟಿ!
ಚಿಕ್ಕಮಗಳೂರು ಸೇರಿದಂತೆ ಕೆಲವು ಪಟ್ಟಣಗಳು ಮತೀಯ ಸೂಕ್ಷ್ಮ ಪ್ರದೇಶಗಳಾಗಿದ್ದು, ಸಣ್ಣ ಘಟನೆಗಳೂ ಕಾನೂನು ಸುವ್ಯವಸ್ಥೆಗೆ ಭಂಗ ತರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ, ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತವು ಈ ಕ್ರಮ ಕೈಗೊಂಡಿದೆ.
ಇದನ್ನೂ ಓದಿ: ರಾಗಿಗುಡ್ಡದಲ್ಲಿ ಗಣಪತಿ ವಿಗ್ರಹ ಧ್ವಂಸ ಪ್ರಕರಣ: ಸ್ಥಳಕ್ಕೆ ಭೇಟಿ ನೀಡಿ, ಪೊಲೀಸ್ ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತರಾಟೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ