
ಮಂಡ್ಯ, (ನ.9): ಕರ್ನಾಟಕದ ಧಾರ್ಮಿಕ ನೆಲೆಯಾದ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮೇಲುಕೋಟೆಗೆ ಇಂದು ಉಪರಾಷ್ಟ್ರಪತಿ ಜಗ್ದೀಶ್ ರಾಧಕೃಷ್ಣನ್ ಆಗಮಿಸುತ್ತಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಹೆಲಿಕಾಪ್ಟರ್ ಮೂಲಕ ಆಗಮಿಸಿ, ಚಲುವನಾರಾಯಣಸ್ವಾಮಿ ದೇವಸ್ಥಾನದಲ್ಲಿ ದರ್ಶನ ಪಡೆಯಲಿದ್ದಾರೆ.
ಉಪರಾಷ್ಟ್ರಪತಿಗಳ ಭೇಟಿ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ಆಡಳಿತ ಸಂಪೂರ್ಣ ಸಿದ್ಧತೆ ನಡೆಸಿದ್ದು, ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ.
ಉಪರಾಷ್ಟ್ರಪತಿಗಳು ಆಗಮಿಸಲಿರುವ ಹಿನ್ನೆಲೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ, ಡ್ರೋನ್ ಹಾರಾಟಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ. ಉಪರಾಷ್ಟ್ರಪತಿಗಳ ಆಗಮಿಸಿ ದೇವಸ್ಥಾನ ದರ್ಶನದ ಪಡೆಯಲಿರುವುದರಿಂದ ಸಾರ್ವಜನಿಕರಿಗೆ ತಾತ್ಕಾಲಿಕ ನಿರ್ಬಂಧ ಜಾರಿಯಲ್ಲಿದ್ದು, ಅವರು ವಾಪಸಾಗುವವರೆಗೂ ದೇಗುಲದೊಳಗೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿದೆ.
ಉಪರಾಷ್ಟ್ರಪತಿ ರಾಧಕೃಷ್ಣನ್ ಅವರ ಈ ಭೇಟಿಯು ಮೇಲುಕೋಟೆಯ ಚಲುವನಾರಾಯಣಸ್ವಾಮಿ ರಾಷ್ಟ್ರಮಟ್ಟದಲ್ಲಿ ಪ್ರಚಾರ ಪಡೆಯಲಿದೆ. ಇದರಿಂದ ಪ್ರವಾಸಿಗರು, ಭಕ್ತರ ಸಂಖ್ಯೆ ಹಚ್ಚಳವಾಗಲಿದೆ ಎಂದು ಸ್ಥಳೀಯ ಆರಾಧಕರಲ್ಲಿ ಉತ್ಸಾಹದ ವಾತಾವರಣ ಸೃಷ್ಟಿಸಿದೆ.
ಕರ್ನಾಟಕದ ಧಾರ್ಮಿಕ ನೆಲೆಯಾದ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮೇಲುಕೋಟೆಗೆ ಇಂದು ಉಪರಾಷ್ಟ್ರಪತಿ ಜಗ್ದೀಶ್ ರಾಧಕೃಷ್ಣನ್ ಆಗಮಿಸುತ್ತಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಹೆಲಿಕಾಪ್ಟರ್ ಮೂಲಕ ಆಗಮಿಸಿ, ಚಲುವನಾರಾಯಣಸ್ವಾಮಿ ದೇವಸ್ಥಾನದಲ್ಲಿ ದರ್ಶನ ಪಡೆಯಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ