
ಎಂಎಸ್ ಬಿಲ್ಡಿಂಗ್‌ನಲ್ಲಿನ ಅಧಿಕಾರಿ, ನೌಕರರಿಗೂ ರಜೆ । ಭದ್ರತೆ ದೃಷ್ಟಿಯಿಂದ ಈ ಕ್ರಮ
ಬೆಂಗಳೂರು (ಜೂ.3): ರಾಜ್ಯ ಸರ್ಕಾರ(Karnataka government)ದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್(DK Shivakumar) ಅವರು ಲೋಕಭವನ(Lokbhavan)ದಲ್ಲಿ ಪದಗ್ರಹಣ(Oath) ಮಾಡುತ್ತಿರುವ ಹಿನ್ನೆಲೆಯಲ್ಲಿ ಸುರಕ್ಷತೆ ಮತ್ತು ಭದ್ರತೆ ದೃಷ್ಟಿಯಿಂದ ವಿಧಾನಸೌಧ(Vidhan soudha), ವಿಕಾಸಸೌಧ(Vikas soudha) ಮತ್ತು ಬಹುಮಹಡಿಗಳ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳು ಹಾಗೂ ನೌಕರರಿಗೆ ಬುಧವಾರ ಮಧ್ಯಾಹ್ನ ರಜೆ ಘೋಷಿಸಲಾಗಿದೆ.
ಲೋಕಭವನದ ಗಾಜಿನ ಮನೆಯಲ್ಲಿ ಸಂಜೆ 4.05ಕ್ಕೆ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಇದರಿಂದ ಲೋಕಭವನ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಜನದಟ್ಟಣೆ ಹಾಗೂ ವಾಹನ ಸಂಚಾರ ದಟ್ಟಣೆ ಉಂಟಾಗುವ ಸಂಭವವಿದೆ.
ಹೀಗಾಗಿ ಭದ್ರತೆ ಮತ್ತು ಸುರಕ್ಷತೆ ದೃಷ್ಟಿಯಿಂದ ರಾಜ್ಯಪಾಲರ ಆದೇಶಾನುಸಾರ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳು ಹಾಗೂ ನೌಕರರಿಗೆ ಮಧ್ಯಾಹ್ನ ರಜೆ ಘೋಷಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ