
ಬೆಂಗಳೂರು, (ಆ.20): ವಿಧಾನಪರಿಷತ್ ಸಚಿವಾಲಯದ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಲಾಗಿದ್ದು, 30 ಅಧಿಕಾರಿಗಳನ್ನು ವರ್ಗಾವಣೆಗೊಳಿಸಲಾಗಿದೆ.
ಕಳೆದ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕರ್ನಾಟಕ ವಿಧಾನ ಪರಿಷತ್ನ 30 ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಆದೇಶಿಸಿದ್ದಾರೆ. ಈ ಮೂಲಕ ಸಚಿವಾಲಯದ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಯತ್ನಕ್ಕೆ ಮುಂದಾಗಿದ್ದಾರೆ.
ಹಾರ-ತುರಾಯಿ, ಪೊಲೀಸ್ ಗೌರವ ವಂದನೆಗೆ ಬ್ರೇಕ್ ಬೆನ್ನಲ್ಲೇ ಸಿಎಂ ಮತ್ತೊಂದು ಮಹತ್ವದ ನಿರ್ಧಾರ
14 ಎ , ಬಿ ಅಧಿಕಾರಿಗಳು ಮತ್ತು 16 ಸಿ ದರ್ಜೆ ನೌಕರರನ್ನು ವರ್ಗಾವಣೆ ಮಾಡಲಾಗಿದ್ದು, ಸಭಾಪತಿ ಬಸವರಾಜ ಹೊರಟ್ಟಿ ಅವರ ನಿರ್ದೇಶನದ ಮೇರೆಗೆ ವಿಧಾನ ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ ಅವರು ಆದೇಶ ಹೊರಡಿಸಿದ್ದಾರೆ.
ಸಹಾಯಕರನ್ನೊಳಗೊಂಡ 30 ಜನರನ್ನು ಬೇರೆ ಬೇರೆ ವಿಭಾಗಗಳಿಗೆ ವರ್ಗಾಯಿಸಲಾಗಿದೆ. ಸಿಬ್ಬಂದಿಯ ವರ್ಗಾವಣೆ ಕುರಿತು ವಿಧಾನಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮೀ ಅಧಿಕೃತ ಆದೇಶ ಪ್ರಕಟಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ