Bengaluru: ಇಂದು ಬಿಸಿಯೂಟ ನೌಕರರಿಂದ ವಿಧಾನಸೌಧ ಮುತ್ತಿಗೆ

By Kannadaprabha News  |  First Published Feb 15, 2023, 5:02 AM IST

ಬಿಸಿಯೂಟ ನೌಕರರ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಫ್ರೀಡಂ ಪಾರ್ಕ್ನಲ್ಲಿ ಫೆ.13ರಿಂದ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿದ್ದರೂ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಾರದೇ ಇರುವುದರಿಂದ ಬುಧವಾರ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಕಾರ್ಯಕರ್ತೆಯರು ನಿರ್ಧರಿಸಿದ್ದಾರೆ.


ಬೆಂಗಳೂರು (ಫೆ.15) : ಬಿಸಿಯೂಟ ನೌಕರರ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಫ್ರೀಡಂ ಪಾರ್ಕ್ನಲ್ಲಿ ಫೆ.13ರಿಂದ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿದ್ದರೂ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಾರದೇ ಇರುವುದರಿಂದ ಬುಧವಾರ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಕಾರ್ಯಕರ್ತೆಯರು ನಿರ್ಧರಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಕರ್ನಾಟಕ ರಾಜ್ಯ ಅಕ್ಷರ ದಾಸೋಹ(Karnataka rajya akshara dasoha) ನೌಕರರ ಸಂಘದ ಗೌರವ ಅಧ್ಯಕ್ಷೆ ಎಸ್‌.ವರಲಕ್ಷ್ಮಿ, ಎರಡು ದಿನದಿಂದ ಪ್ರತಿಭಟನೆ ನಡೆಸುತ್ತಿದ್ದರೂ ಬೇಡಿಕೆಗಳ ಬಗ್ಗೆ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದ್ದರಿಂದ ಫೆ.15ರಂದು ಮಧ್ಯಾಹ್ನ 12.30ಕ್ಕೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Tap to resize

Latest Videos

ಬಿಸಿಯೂಟ ತಯಾರಕರ ಕೆಲಸ ಕಾಯಂ ಮಾಡಿ: ಕಾಂತರಾಜು

ನಿವೃತ್ತಿ ಹೊಂದುವ ಅಕ್ಷರ ದಾಸೋಹದ ನೌಕರರಿಗೆ .1 ಲಕ್ಷ ಇಡುಗಂಟು ನೀಡಬೇಕು. ಬೇಸಿಗೆ ಮತ್ತು ದಸರಾ ರಜೆಗಳ ವೇತನವನ್ನು ಕಡ್ಡಾಯವಾಗಿ ನೀಡಬೇಕು. ಅಡುಗೆ ಸಿಬ್ಬಂದಿ ಅಪಘಾತದಲ್ಲಿ ಮರಣ ಹೊಂದಿದರೆ ಕುಟುಂಬದವರಿಗೇ ಉದ್ಯೋಗ ನೀಡಬೇಕು ಎಂಬುದು ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್‌ನಿಂದ ಬೇಡಿಕೆ ಈಡೇರಿಕೆ

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎನ್‌ಎಚ್‌ಎಂ-ಒಳ ಗುತ್ತಿಗೆ ನೌಕರರ ಸಂಘದ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷ ನಲಪಾಡ್‌ ಹ್ಯಾರಿಸ್‌ ಭರವಸೆ ನೀಡಿದರು.

ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸಂಘದಿಂದ ಫ್ರೀಡಂ ಪಾರ್ಕ್ನಲ್ಲಿ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ ಅವರು, ನಿಮ್ಮ ಬೇಡಿಕೆಗಳನ್ನು ಕಾಂಗ್ರೆಸ್‌ನ ಚುನಾವಣಾ ಪ್ರಣಾಳಿಕೆಯಲ್ಲಿ ಸೇರ್ಪಡೆ ಮಾಡಲಾಗುವುದು. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ನಿಮ್ಮ ಕೆಲಸ ಕಾಯಂ ಮಾಡುವುದು ಸೇರಿದಂತೆ ಇನ್ನುಳಿದ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳಿದರು.

ಮಕ್ಕಳ ಅನ್ನಕ್ಕೂ ಕುತ್ತು: ಅಕ್ರಮ ಅಕ್ಕಿಯೇ ಮಕ್ಕಳಿಗೆ ಬಿಸಿಯೂಟ ಆಹಾರ!

ಗ್ರಾಪಂ ನೌಕರರಿಂದ ಪ್ರತಿಭಟನೆ

ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯ ನಿರ್ವಹಿಸುವ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸಿ ಕನಿಷ್ಠ .25 ಸಾವಿರ ವೇತನ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ಮಂಗಳವಾರ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲಾಯಿತು. ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯ ನಿರ್ವಹಿಸುವ ಕರ ವಸೂಲಿಗಾರ, ಕ್ಲರ್ಕ್, ಡಾಟಾ ಎಂಟ್ರಿ ಆಪರೇಟರ್‌, ನೀರಗಂಟಿ, ಜವಾನ, ಸ್ವಚ್ಛತಾಗಾರರನ್ನು ಸರ್ಕಾರಿ ನೌಕರರೆಂದು ಘೋಷಿಸಬೇಕು. ಕನಿಷ್ಠ ವೇತನ .25 ಸಾವಿರ ನಿಗದಿ ಮಾಡಬೇಕು. ಪ್ರತಿಯೊಂದು ಗ್ರಾಮ ಪಂಚಾಯಿತಿಗೆ ಲೆಕ್ಕ ಸಹಾಯಕ ಹುದ್ದೆಯನ್ನು ಸೃಜಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

click me!