ವಿಧಾನಭೆಯ ಉಪ ಸಭಾಪತಿ ಆನಂದ್ ಮಾಮನಿ ಇನ್ನಿಲ್ಲ

By Girish GoudarFirst Published Oct 23, 2022, 1:56 AM IST
Highlights

ವಿಧಾನಭೆಯ ಉಪ ಸಭಾಪತಿ ಆನಂದ್ ಮಾಮನಿ ನಿಧನ

ಬೆಂಗಳೂರು(ಅ.23):  ವಿಧಾನಭೆಯ ಉಪ ಸಭಾಪತಿ ಆನಂದ್ ಮಾಮನಿ(56) ಇಂದು ರಾತ್ರಿ12 ಗಂಟೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಆನಂದ್ ಮಾಮನಿ ಅವರನ್ನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ. 

ಆನಂದ ಮಾಮನಿ ಅವರು ಈ ಮೊದಲು ಚೆನ್ನೈ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆನಂದ್ ಮಾಮನಿ ಅವರ ಪಾರ್ಥಿವ ಶರೀರವನ್ನ ಬೆಳಗಾವಿ ಜಿಲ್ಲೆಯ ಸವದತ್ತಿಗೆ ಆಂಬುಲೆನ್ಸ್‌ ಮೂಲಕ ರವಾನೆ ಮಾಡಲಾಗುತ್ತಿದೆ. ಇಂದು ಮಧ್ಯಾಹ್ನ ಸವದತ್ತಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಅಂತ ತಿಳಿದು ಬಂದಿದೆ. 

Latest Videos

 

ನಮ್ಮ ಪಕ್ಷದ ಶಾಸಕರು, ರಾಜ್ಯ ವಿಧಾ‌ನಸಭೆಯ ಮಾನ್ಯ ಉಪ ಸಭಾಧ್ಯಕ್ಷರಾದ ಆತ್ಮೀಯ ಶ್ರೀ ಆನಂದ ಚಂದ್ರಶೇಖರ ಮಾಮನಿ ಅವರು ನಿಧನರಾದ ವಿಷಯ ತಿಳಿದು ಅತೀವ ದುಃಖವಾಗಿದೆ‌.

ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಿ, ಈ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ‌. ಓಂ ಶಾಂತಿಃ pic.twitter.com/PQq96zMKPI

— Basavaraj S Bommai (@BSBommai)

ಆನಂದ್ ಮಾಮನಿ ನಿಧನಕ್ಕೆ ಸಿಎಂ ಬೊಮ್ಮಾಯಿ ಸಂತಾಪ

ಆನಂದ್ ಮಾಮನಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪ ಸೂಚಿಸಿದ್ದಾರೆ. ಸಿಎಂ ಅವರು ತಮ್ಮ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ನಮ್ಮ ಪಕ್ಷದ ಶಾಸಕರು, ರಾಜ್ಯ ವಿಧಾ‌ನಸಭೆಯ ಮಾನ್ಯ ಉಪ ಸಭಾಧ್ಯಕ್ಷರಾದ ಆತ್ಮೀಯ ಶ್ರೀ ಆನಂದ ಚಂದ್ರಶೇಖರ ಮಾಮನಿ ಅವರು ನಿಧನರಾದ ವಿಷಯ ತಿಳಿದು ಅತೀವ ದುಃಖವಾಗಿದೆ‌. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಿ, ಈ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ‌. ಓಂ ಶಾಂತಿಃ ಅಂತ ಸಂತಾಪ ಸೂಚಿಸಿದ್ದಾರೆ. 

ನಿವೃತ್ತ ಯೋಧನಿಗೆ ಔಷಧಿ ಪೂರೈಸಿ‌ ಮಾನವೀಯತೆ ಮೆರೆದ ಡೆಪ್ಯೂಟಿ ಸ್ಪೀಕರ್ ಆನಂದ ಮಾಮನಿ

ಆನಂದ್ ಮಾಮನಿ ವಿಡಿಯೋ ಹೇಳಿಕೆ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕರಾಗಿರುವ ಆನಂದ್ ಮಾಮನಿ ಅವರು ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದರು. ಮನುಷ್ಯನಿಗೆ ಜೀವನದಲ್ಲಿ ಸ್ವಾಭಾವಿಕವಾಗಿ ಆರೋಗ್ಯದಲ್ಲಿ ಏರಿಳಿತ ಸಹಜ. ಕೆಲವು ವರ್ಷಗಳಿಂದ ನನಗೆ ಮಧುಮೇಹ ಖಾಯಿಲೆ ಇದೆ. ಅದರ ಜೊತೆಗೆ ಬೇರೆ ಬೇರೆ ಕಾರಣ ಹೇಳಿ ಸುಳ್ಳು ವದಂತಿ ಕೆಲ ಮಾಧ್ಯಮಗಳಲ್ಲಿ ಬರ್ತಿದೆ. ಮನೆ ದೇವರಾದ ಜಾಲಿಕಟ್ಟಿ ಬಸವಣ್ಣ, ತಂದೆ-ತಾಯಿ, ರಾಜ್ಯದ ಜನರ ಆಶೀರ್ವಾದ ಇದೆ. ಸುಳ್ಳು ವಂದತಿಗೆ ನಮ್ಮ  ಕಾರ್ಯಕರ್ತರು ಕಿವಿಗೊಡಬೇಡಿ ಎಂದು ಮನವಿ ಮಾಡಿದ್ದರು.

ನನ್ನ ಕುಟುಂಬ ಸದಸ್ಯರು ನನ್ನ ಬೆನ್ನಿಗೆ ನಿಂತಿದ್ದರು. ನಿಮ್ಮೆಲ್ಲರ ಆಶೀರ್ವಾದ, ಮಾಧ್ಯಮ ಸ್ನೇಹಿತರ ಸಹಕಾರ ಇದೆ. ಸಿಎಂ ಬಸವರಾಜ ಬೊಮ್ಮಾಯಿ ದೂರವಾಣಿ ಮೂಲಕ ಆರೋಗ್ಯ ವಿಚಾರಿಸಿದ್ದರು. ಯಾವುದೇ ಕಾರಣಕ್ಕೂ ಧೈರ್ಯಗೆಡುವ ಪ್ರಶ್ನೆಯೇ ಇಲ್ಲ. ನಾವೆಲ್ಲರೂ ನಿಮ್ಮ ಬೆನ್ನಿಗಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಿಎಸ್‌ವೈ ಸೇರಿದಂತೆ ಅನೇಕ ಶಾಸಕರು ನನಗೆ ಸಲಹೆ ಕೊಟ್ಟಿದ್ದಾರೆ. ಆ ನಿಟ್ಟಿನಲ್ಲಿ ನಾನು ಧೈರ್ಯವಾಗಿ ಬಂದು ತಮ್ಮೆಲ್ಲರ ಸೇವೆಗೆ ಮತ್ತೆ ಅಣಿಯಾಗುತ್ತೇನೆಂದು ಆತ್ಮವಿಶ್ವಾಸ ನೀಡುತೇನೆ ಅಂತ ಹೇಳಿದ್ದರು. ಆದರೆ, ದುರಾದೃಷ್ಟವಷಾತ್‌ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ.  
 

click me!