
ಬೆಂಗಳೂರು (ಏ.19) : ಉನ್ನತ ಶಿಕ್ಷಣದ ವೇಳೆ ಹಾಸ್ಟೆಲ್ ಸೌಲಭ್ಯ ದೊರೆಯದ ಮಡಿವಾಳ ಸೇರಿ ಎಲ್ಲಾ ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳಿಗೆ ‘ವಿದ್ಯಾಸಿರಿ’ ಯೋಜನೆಯಡಿ ನೀಡುತ್ತಿರುವ ಮಾಸಿಕ 1500 ರು. ವಿದ್ಯಾರ್ಥಿವೇತನವನ್ನು 2000 ರು.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮಡಿವಾಳರು ಸೇರಿ ಹಿಂದುಳಿದ ವರ್ಗದವರ ಮಕ್ಕಳು ನಗರ ಪ್ರದೇಶಗಳಲ್ಲಿ ಸ್ವಂತ ವಸತಿ ಖರ್ಚು ಬರಿಸಿಕೊಂಡು ವಿದ್ಯಾಭ್ಯಾಸ ಮಾಡುವುದು ಕಷ್ಟ.
ಇದನ್ನೂ ಓದಿ: ಶಾಲೆ-ಕಾಲೇಜಲ್ಲಿ ಜಾತಿ ತಾರತಮ್ಯ ನಿವಾರಣೆಗೆ ಶೀಘ್ರ ವೇಮುಲ ಕಾಯ್ದೆ, ರಾಗಾ ಪತ್ರದ ಬೆನ್ನಲ್ಲೇ ಸಿಎಂ ಸಿದ್ದು ಘೋಷಣೆ!
ನಾವೆಲ್ಲ ಓದುವಾಗ ರೂಂ ಮಾಡಿಕೊಂಡು ಹೋಟೆಲ್‌ನಿಂದ ಸಾಂಬರ್ ತಂದು ಅನ್ನ ಮಾಡಿಕೊಂಡು ಊಟ ಮಾಡುತ್ತಿದ್ದುದು ಗೊತ್ತಿದೆ. ಈ ಕಾರಣಕ್ಕಾಗಿ ನಾನು ಹಾಸ್ಟೆಲ್ ಪ್ರವೇಶ ಸಿಗದ ಮಕ್ಕಳಿಗಾಗಿ ವಿದ್ಯಾಸಿರಿ ಯೋಜನೆ ರೂಪಿಸಿ ಮಾಸಿಕ ₹1500 ನೀಡಲಾಗುತ್ತಿದೆ. ಈಗ ಅದು ಸಾಲುವುದಿಲ್ಲ. ಹಾಗಾಗಿ ₹2000ಕ್ಕೆ ಹೆಚ್ಚಿಸಲಾಗುವುದು. ಇದರಿಂದ ಪ್ರತಿ ವಿದ್ಯಾರ್ಥಿಗೆ ವಾರ್ಷಿಕ ₹20,000 ಸಿಗುತ್ತದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ