ರಾಜಕೀಯವಾಗಿ ಎದುರಿಸಲಾಗದೆ ಕುತಂತ್ರ; ಮುಚ್ಚಿಸಿರುವ ಕಾರ್ಖಾನೆ ಮತ್ತೆ ತೆರೆಯುತ್ತೇನೆ: ಸರ್ಕಾರದ ವಿರುದ್ಧ ಶಾಸಕ ಯತ್ನಾಳ್ ಕಿಡಿ

By Kannadaprabha News  |  First Published Jan 27, 2024, 8:01 PM IST

ಪರಿಸರ ನಿಯಮ‌ ಉಲ್ಲಂಘನೆ ಆರೋಪ ಹಿನ್ನೆಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಧ್ಯಕ್ಷತೆಯ ಸಿದ್ದಶ್ರೀ ಸೌಹಾರ್ಧ ಸಹಕಾರಿ ಸಕ್ಕರೆ ಕಾರ್ಖಾನೆ ಮುಚ್ಚಲು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಜಾರಿ ಮಾಡಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಯತ್ನಾಳ್ ಅವರು ಕಿಡಿಕಾರಿದ್ದಾರೆ.


ಬೆಂಗಳೂರು (ಜ.27): ಪರಿಸರ ನಿಯಮ‌ ಉಲ್ಲಂಘನೆ ಆರೋಪ ಹಿನ್ನೆಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಧ್ಯಕ್ಷತೆಯ ಸಿದ್ದಶ್ರೀ ಸೌಹಾರ್ಧ ಸಹಕಾರಿ ಸಕ್ಕರೆ ಕಾರ್ಖಾನೆ ಮುಚ್ಚಲು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಜಾರಿ ಮಾಡಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಯತ್ನಾಳ್ ಅವರು ಕಿಡಿಕಾರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ (ಟ್ವಿಟರ್) ಪೋಸ್ಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರ ರಾಜಕೀಯವಾಗಿ  ಎದುರಿಸಲಾಗದೆ ನಮ್ಮ ಎಥನಾಲ್ ಕಾರ್ಖಾನೆಗೆ ನೋಟಿಸ್ ಕೊಡಿಸಿದೆ. ರೈತರಿಗೆ ನೆರವಾಗಲು ಹಾಗು ಹಿಂದುಳಿದ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿ ಮಾಡಲು ಕಾರ್ಖಾನೆ ಸ್ಥಾಪಿಸಲಾಗಿದೆ. ಕಾನೂನು  ರೀತ್ಯಾ ನ್ಯಾಯಾಲಯದಲ್ಲಿ ಇದನ್ನು ಪ್ರಶ್ನಿಸಲಾಗುತ್ತದೆ. ಈ ನೋಟಿಸ್, ಆದೇಶಗಳಿಗೆ ಹೆದರುವ ಜಾಯಮಾನ ನನ್ನದಲ್ಲ ಕಾಂಗ್ರೆಸ್ ಆಡಳಿತದ ವಿರುದ್ಧ ಹೋರಾಟ ಮಾಡಲು ಶಕ್ತಿ ಇಮ್ಮಡಿಯಾಗಿದೆ ಎಂದು ಹೇಳಿದ್ದಾರೆ.

Tap to resize

Latest Videos

ಲೋಕಸಭಾ ಚುನಾವಣೆ: ರಾಜ್ಯದ 28 ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿ ನೇಮಕ, ಕ್ಷೇತ್ರವಾರು ಉಸ್ತುವಾರಿಗಳ ಪಟ್ಟಿ ಇಲ್ಲಿದೆ!

ಕೈ'ಲಾಗದವರ ಕೊನೆಯ ಅಸ್ತ್ರವೇ ಅಪಪ್ರಚಾರ ಎಂಬುದು ಗೊತ್ತಿರುವ ವಿಷಯವೇ. ಬಡವರಿಗೆ, ದೀನ-ದಲಿತರಿಗೆ, ಪಕ್ಷದ ಕಾರ್ಯಕರ್ತರಿಗೆ ಸಹಾನೂಭೂತಿಯಿಂದ ಕಾಣುತ್ತ ಬಂದಿರುವ ನಾನು, ನನ್ನ ಮಿತಿಯಲ್ಲಿ ನನ್ನದೇ ಕಾರ್ಖಾನೆಗಳಲ್ಲಿ ನೂರಾರು ಜನರಿಗೆ ಉದ್ಯೋಗ ಸೃಷ್ಟಿಸಿದ್ದೇನೆ. ಜಿಲ್ಲೆಯ ಆರ್ಥಿಕತೆಯನ್ನು ಸುಧಾರಿಸಲು ನನ್ನ ಅಳಿಲು ಸೇವೆಯೂ ಇದೆ ಎಂದು ತಿಳಿಸಿದ್ದಾರೆ.

ಮತ್ತೊಂದು ಪೋಸ್ಟ್ ನಲ್ಲಿ ರಾಜಕೀಯ ಒತ್ತಡಕ್ಕೆ ಮಣಿದು ನನ್ನ ಕಾರ್ಖಾನೆಯನ್ನು ಮುಚ್ಚಿಸುವುದರಿಂದ ಇವರು ಏನನ್ನೂ ಕೂಡ ಸಾಧಿಸಲು ಸಾಧ್ಯವಿಲ್ಲ. ಕಾರ್ಖಾನೆ ಮತ್ತೆ ತೆರೆಯುವುದು ನಿಶ್ಚಿತ, ಈ ನಿಟ್ಟಿನಲ್ಲಿ ಕಾನೂನು ಹೋರಾಟವನ್ನು ನಾನು ಮಾಡುತ್ತೇನೆಂದು ಹೇಳಿದ್ದಾರೆ.

'ನಮ್ಮ ಪಕ್ಷದಲ್ಲಿದ್ದಾಗ ಬಿಜೆಪಿ ನಿರ್ನಾಮ ಮಾಡ್ಬೇಕು ಅಂದಿದ್ರು'; ಶೆಟ್ಟರ್ ಕಾಂಗ್ರೆಸ್ ನಿರ್ನಾಮ ಹೇಳಿಕೆಗೆ ಡಿಕೆಶಿ ತಿರುಗೇಟು!

click me!