
ವಿಜಯಪುರ:(ಸೆ.8): ವಿಜಯಪುರದಲ್ಲಿ ಈದ್ ಮಿಲಾದ್ ಆಚರಣೆಯ ನಿಮಿತ್ತ ಸ್ಥಳೀಯ ಮುಸ್ಲಿಂ ಸಂಘಟನೆಯೊಂದು ಆಯೋಜಿಸಿದ್ದ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್ ರಾಷ್ಟ್ರಧ್ವಜವನ್ನು ಪ್ರದರ್ಶಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ನಗರದ ವಿವಿಧ ಭಾಗಗಳಿಂದ ಗಾಂಧಿ ಚೌಕ್ ಕಡೆಗೆ ಸಾಗಿದ ಈ ಮೆರವಣಿಗೆಯ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಆದರೆ, ಈ ಘಟನೆಗೆ ಸಂಬಂಧಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದು ಇತ್ತೀಚಿನದಾ ಅಥವಾ ಹಳೆಯ ವಿಡಿಯೋನಾ ಎಂಬ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ.
ಈ ಆರೋಪದ ಕುರಿತು ವಿಜಯಪುರ ಪೊಲೀಸರು ತನಿಖೆ ಆರಂಭಿಸಿದ್ದಾರೆ. ವೈರಲ್ ಆಗಿರುವ ವಿಡಿಯೋದ ಸತ್ಯಾಸತ್ಯತೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ವಿಜಯಪುರ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ, 'ಪ್ಯಾಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿರುವುದು ನಿಜವೆಂದು ದೃಢಪಟ್ಟರೆ, ಕಾನೂನಿನ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು' ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಮಂಡ್ಯ: ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಕಲ್ಲು ತೂರಾಟ; ಕೆಲವೊತ್ತು ಉದ್ವಿಗ್ನ ಪರಿಸ್ಥಿತಿ
ಈ ಘಟನೆಯಿಂದಾಗಿ ನಗರದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಸ್ಥಳೀಯರು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆ ನಡೆಯುತ್ತಿದೆ. ಕೆಲವರು ಇದನ್ನು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಕೃತ್ಯ ಎಂದು ಖಂಡಿಸಿದರೆ, ಇನ್ನು ಕೆಲವರು ಇದು ತಪ್ಪು ತಿಳಿವಳಿಕೆಯಿಂದ ಕೂಡಿದೆ ಎಂದು ವಾದಿಸುತ್ತಿದ್ದಾರೆ. ಪೊಲೀಸರು ಶಾಂತಿ ಕಾಪಾಡಲು ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡಿದ್ದಾರೆ. ತನಿಖೆಯ ಫಲಿತಾಂಶದಿಂದ ಈ ವಿವಾದಕ್ಕೆ ಸ್ಪಷ್ಟತೆ ದೊರಕುವ ನಿರೀಕ್ಷೆಯಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ