
ವಿಜಯಪುರ (ಡಿ.24): ವಿಜಯಪುರ ಜಿಲ್ಲೆಯ ತಿಕೋಟ ತಾಲೂಕಿನ ರತ್ನಾಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಜ್ವಾಲೆಗೆ ಐದು ಎಕರೆ ಕಬ್ಬಿನ ಬೆಳೆ ಹಾಗೂ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಟ್ರೈಲರ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.
ಟ್ರಾಕ್ಟರ್ ಟ್ರೈಲರ್‌ನಿಂದ ಹಬ್ಬಿದ ಬೆಂಕಿ
ರತ್ನಾಪುರ ಗ್ರಾಮದ ರೈತ ಭೀಮು ಕೆಂಬಾವಿ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಈ ದುರ್ಘಟನೆ ನಡೆದಿದೆ. ಮೊದಲು ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಟ್ರೈಲರ್‌ಗೆ ವಿದ್ಯುತ್ ತಂತಿ ತಗುಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಕೆನ್ನಾಲಿಗೆ ಚಾಚಿದ್ದು, ಟ್ರೈಲರ್‌ನಲ್ಲಿದ್ದ ಕಬ್ಬು ಉರಿಯತೊಡಗಿತು.
ಟ್ರೈಲರ್‌ನಿಂದ ಹಬ್ಬಿದ ಬೆಂಕಿ ಪಕ್ಕದಲ್ಲೇ ಇದ್ದ ಐದು ಎಕರೆ ಕಬ್ಬಿನ ತೋಟಕ್ಕೂ ವ್ಯಾಪಿಸಿದೆ. ನೋಡನೋಡುತ್ತಿದ್ದಂತೆಯೇ ಇಡೀ ಬೆಳೆ ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆದಿದ್ದ ಬೆಳೆ ಕಣ್ಣೆದುರೇ ಸುಟ್ಟು ಬೂದಿಯಾಗಿರುವುದನ್ನು ಕಂಡು ರೈತ ಭೀಮು ಕೆಂಬಾವಿ ಕಂಗಾಲಾಗಿದ್ದಾರೆ. ಈ ಅವಘಡದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
ಘಟನಾ ಸ್ಥಳಕ್ಕೆ ಗ್ರಾಮಸ್ಥರು ಧಾವಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಅಷ್ಟರಲ್ಲೇ ಅಪಾರ ಹಾನಿ ಸಂಭವಿಸಿತ್ತು. ತಿಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ