
ವಿಜಯಪುರ: ವಿಜಯಪುರದಲ್ಲಿ ಏಪ್ರಿಲ್ 14ರಂದು ನಡೆದಿದ್ದ ಗ್ರಾ.ಪಂ ಮಾಜಿ ಸದಸ್ಯನ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನ ಆರೋಪಿಗಳನ್ನು ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಜಯಪುರದ ಅಲಿಯಾಬಾದ್ ಇಂಡಸ್ಟ್ರಿಯಲ್ ಏರಿಯಾದಲ್ಲಿ ಏಪ್ರಿಲ್ 14ರಂದು ಗ್ರಾಮ ಪಂಚಾಯತ್ ಮಾಜಿ ಸದಸ್ಯ ರಾಜು ಖರೆ ಅವರ ಭೀಕರ ಹತ್ಯೆ ನಡೆದಿತ್ತು. ಹಂತಕರು ಟಿಪ್ಪರ್ ಡಿಕ್ಕಿ ಹೊಡೆದು, ಫೈರಿಂಗ್ ನಡೆಸಿ ಅವರನ್ನು ಭೀಕರವಾಗಿ ಕೊಲೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ವಿಜಯಪುರ ಪೊಲೀಸರು ಆರು ಜನ ಹಂತಕರನ್ನು ಬಂಧಿಸಿದ್ದಾರೆ.
ಸಂಬಂಧಿಕರೇ ಈ ಕೃತ್ಯ ನಡೆಸಿದ್ದಾರೆ ಎಂಬುದು ಈಗ ತನಿಖೆಯಿಂದ ತಿಳಿದು ಬಂದಿದೆ. ಬಂಧಿತರನ್ನು ಅಬುಶ್ಯಾ ಕೊಡ್ಲೇಕರ್, ಅಬಾಶ್ಯಾ ಮಾನೆ, ವಾಗೀಶ್ ಪೋಳ್, ಜಾಲಿಂದರ್ ಮಲ್ಲಾರಿ, ಖಂಡೋಬಾ ತಾಂಬೆ, ಮುರುಗು ಹಕ್ಕೆ ಎಂದು ಗುರುತಿಸಲಾಗಿದೆ. ಮೊದಲೇ ಪ್ಲಾನ್ ಮಾಡಿ ಆರೋಪಿಗಳು ರಾಜು ಖರೆ ಅವರನ್ನು ಕೊಲೆ ಮಾಡಿದ್ದರು. ಮೊದಲು ಟಿಪ್ಪರ್ ಮೂಲಕ ಥಾರ್ ಕಾರಿಗೆ ಡಿಕ್ಕಿ ಹೊಡೆದು, ಬಳಿಕ ರಾಜು ಮೇಲೆ 6 ಸುತ್ತು ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು. ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಈ ಕೊಲೆ ನಡೆದದೆ ಎಂಬುದು ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ.
ಬಂಧಿತರಿಂದ 2 ಕಂಟ್ರಿ ಪಿಸ್ತೂಲು, 7 ಮೊಬೈಲ್, ಕೃತ್ಯಕ್ಕೆ ಬಳಸಿದ್ದ 2 ಬೈಕ್, 1 ಟಿಪ್ಪರ್, 1 ಕಾರ್ ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಎಸ್ಪಿ ಲಕ್ಷಣ ನಿಂಬರಗಿ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ತಮಿಳುನಾಡಲ್ಲಿ ತ್ರಿಕೋನ ಸಮರ: ದಾಖಲೆಯ ಶೇ.85ರಷ್ಟು ಮತದಾನ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ