ವಿಜಯಪುರದಲ್ಲಿ ಶೀಘ್ರವೇ ಸಚಿವ ಸಂಪುಟ ಸಭೆ: ಎಂ.ಬಿ. ಪಾಟೀಲ್

Published : Apr 29, 2025, 08:39 PM ISTUpdated : Apr 29, 2025, 08:44 PM IST
ವಿಜಯಪುರದಲ್ಲಿ ಶೀಘ್ರವೇ ಸಚಿವ ಸಂಪುಟ ಸಭೆ: ಎಂ.ಬಿ. ಪಾಟೀಲ್

ಸಾರಾಂಶ

ವಿಜಯಪುರದಲ್ಲಿ ಮುಂದಿನ ಎರಡು ತಿಂಗಳಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಮಲೆ ಮಹದೇಶ್ವರದ ಸಭೆಯಲ್ಲಿ ಮುಖ್ಯಮಂತ್ರಿಗಳು ಇದಕ್ಕೆ ಸಮ್ಮತಿಸಿದ್ದಾರೆ. ಅವಳಿ ಜಿಲ್ಲೆಗಳ ಅಭಿವೃದ್ಧಿಗೆ ಇದು ಪೂರಕ ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ಮುಂದಿನ ಬಸವ ಜಯಂತಿಯನ್ನು ಬಸವನಬಾಗೇವಾಡಿಯಲ್ಲಿ ಆಚರಿಸಲು ಕ್ರಮ ಕೈಗೊಳ್ಳಲಾಗುವುದು ಎಂದೂ ಹೇಳಿದ್ದಾರೆ.

ವರದಿ: ಷಡಕ್ಷರಿ, ಏಷ್ಯಾನೆಟ್‌ ಸುವರ್ಣನ್ಯೂಸ್ , ವಿಜಯಪುರ

ವಿಜಯಪುರ (ಏ.29): ಮುಂದಿನ ದಿನಗಳಲ್ಲಿ ವಿಜಯಪುರ ನಗರದಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗುತ್ತದೆ. ಈ ಬಗ್ಗೆ ಮೊನ್ನೆ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟದಲ್ಲಿ ನಿರ್ಣಯಿಸಲಾಗಿದೆ. ಅವಳಿ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾದ ನಿರ್ಣಯವಾಗಲಿವೆ ಎಂದು ವಿಜಯಪುರ ನಗರದಲ್ಲಿ ಸಚಿವ ಎಂ ಬಿ ಪಾಟೀಲ್ ಹೇಳಿದರು.

ಫಿಸಿಯೋಥೆರಪಿ ಕೋರ್ಸ್‌ಗೆ ನೀಟ್ ಕಡ್ಡಾಯ: ಶರಣ ಪ್ರಕಾಶ್ ಪಾಟೀಲ್

ಸಂಪುಟ ಸಭೆಗೆ ಸಿಎಂ ಸಮ್ಮತಿ ಸಿಕ್ಕಿದೆ  
ಮಲೇ ಮಹದೇಶ್ವರದಲ್ಲಿ ನಡೆದ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ವಿಜಯಪುರದಲ್ಲಿ ಸಚಿವ ಸಂಪುಟ ನಡೆಯಬೇಕೆಂದು ಮನವಿ ಮಾಡಲಾಗಿದೆ. ಸಿ ಎಂ ಸಹ ಖುಷಿಯಿಂದ ಸಮ್ಮತಿ ಸೂಚಿಸಿದ್ದಾರೆ. ಮುಂದಿನ ಎರಡು ತಿಂಗಳಲ್ಲಿ ವಿಶೇಷ  ಸಚಿವ ಸಂಪುಟ ಸಭೆಯನ್ನು ವಿಜಯಪುರದಲ್ಲಿ ಮಾಡಲಾಗುತ್ತದೆ. ವಿಜಯಪುರ ಬಾಗಲಕೋಟೆ ಜಿಲ್ಲೆಗಳಿಗೆ ಪ್ರೋತ್ಸಾಹ ಸಿಗುತ್ತದೆ. ಯೋಜನೆಗಳಿಗೆ ವೇಗ ಸಿಗುತ್ತದೆ ಎಂದಿದ್ದಾರೆ.

ಎಲ್ಲ ಶಾಸಕರ ಜೊತೆಗೆ ಚರ್ಚೆ, ಪ್ರಸ್ತಾವನೆ ಸಲ್ಲಿಕೆಯಾಗಿದೆ!
ಮಲೆ ಮಹದೇಶ್ವರ ಹಾಗೂ ಕಲಬುರಗಿಯಲ್ಲಿ ನಡೆದ ಸಭೆಯಂತೆ ವಿಜಯಪುರದಲ್ಲಿಯೂ ಕ್ಯಾಬಿನೆಟ್ ಮೀಟಿಂಗ್ ಮಾಡುತ್ತೇವೆ. ಎಲ್ಲಾ ಶಾಸಕರ ಮಾತನಾಡಿದ್ದೇನೆ ಅವರು ಪ್ರಸ್ತಾವನೆಯನ್ನು ಸಲ್ಲಿಸಿ ಅಪ್ರೂವಲ್  ಪಡೆದುಕೊಳ್ಳಬೇಕು. ಎಲ್ಲ ಇಲಾಖೆಗಳಿಂದ ಪ್ರಸ್ತಾವನೆ ಮಾಡಿಕೊಳ್ಳುತ್ತೇವೆ. ಜಿಲ್ಲೆಯ ಎಲ್ಲ ಬೇಡಿಕೆಗಳ ಈಡೇರಿಕೆಗೆ ಅನುಕೂಲವಾಗಲಿದೆ. ಮುಂದಿನ ದಿನಗಳಲ್ಲಿ ಬಸವ ಜನ್ಮ ಭೂಮಿಯಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ ಎಂದರು. 

ಕಲಬುರಗಿಯಲ್ಲಿ ಸ್ಥಾಪಿತವಾಗುತ್ತಿರುವ ವಚನ ಮಂಟಪ ಬಸವ ತತ್ವದ ಹೆಗ್ಗುರುತಾಗಲಿದೆ: ಸಚಿವ ಪ್ರಿಯಾಂಕ್ ಖರ್ಗೆ

ಮುಂದಿನ ವರ್ಷ ಬಸವ ಜಯಂತಿ ವಿಜಯಪುರದಲ್ಲಿ ಆಚರಣೆ!
ಬಸವ ಜಯಂತಿಯನ್ನು ಬಸವಣ್ಣನವರ ಜನ್ಮ ಭೂಮಿ  ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಪಟ್ಟಣದಲ್ಲಿ ನಡೆಸಬೇಕೆಂಬ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಮುಂದಿನ ಬಾರಿ ಬಸವ ಜಯಂತಿ ಮಾಡಲು ಕ್ರಮ ತೆಗೆದುಕೊಳ್ಳಲಾಗುತ್ತದೆ. ಬಸವಣ್ಣನವರನ್ನ ಸಾಂಸ್ಕೃತಿಕ ನಾಯಕ ಎಂದು ಮಾಡಿದ್ದಕ್ಕೆ ಕೂಡಲಸಂಗಮದಲ್ಲಿ  ಏಪ್ರಿಲ್ 30ರಂದು ರಾಜ್ಯಮಟ್ಟದ ಕಾರ್ಯಕ್ರಮ ಮಾಡಲಾಗುತ್ತಿದೆ. ಬಸವ ಸಮಿತಿ ರಾಜ್ಯ ಮಟ್ಟದಲ್ಲಿ ಬಸವ ಜಯಂತಿ ಮಾಡಲಾಗುತ್ತಿದ್ದಾರೆ. ಸಿಎಂ ಬಸವಣ್ಣನವರ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಕೆ ಮಾಡಲಿದ್ದಾರೆ. ಮುಂದಿನ ವರ್ಷ ಬಸವನಬಾಗೇವಾಡಿಯಲ್ಲಿ ಬಸವ ಜಯಂತಿ ಕಾರ್ಯಕ್ರಮ ಮಾಡುತ್ತೇವೆ ಜೊತೆಗೆ ಬಸವ ಕಲ್ಯಾಣದಲ್ಲೂ ಬಸವ ಜಯಂತಿ‌ ಆಚರಣೆ ಮಾಡಲಾಗುತ್ತದೆ ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!