ಬಿವೈ ವಿಜಯೇಂದ್ರರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಕೇಂದ್ರದ ಬಿಜೆಪಿ ನಾಯಕರು ಅಯ್ಕೆ ಮಾಡಿದ್ದಾರೆ. ಅತ್ಯಂತ ಸಂತೋಷದ ವಿಚಾರವಾಗಿದೆ ಎಂದು ಸಂಸದ ಬಿವೈ ರಾಘವೇಂದ್ರ ಸಂತಸ ವ್ಯಕ್ತಪಡಿಸಿದರು.
ಶಿವಮೊಗ್ಗ (ನ.10): ಬಿವೈ ವಿಜಯೇಂದ್ರರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಕೇಂದ್ರದ ಬಿಜೆಪಿ ನಾಯಕರು ಅಯ್ಕೆ ಮಾಡಿದ್ದಾರೆ. ಅತ್ಯಂತ ಸಂತೋಷದ ವಿಚಾರವಾಗಿದೆ ಎಂದು ಸಂಸದ ಬಿವೈ ರಾಘವೇಂದ್ರ ಸಂತಸ ವ್ಯಕ್ತಪಡಿಸಿದರು.
ಇಂದು ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದೊಂದು ದೊಡ್ಡ ಜವಾಬ್ದಾರಿ, ಇದೊಂದು ಯೋಗ, ಕೇಂದ್ರದಲ್ಲಿ ಮೋದಿ ಪ್ರಧಾನಮಂತ್ರಿ, ನಡ್ಡಾ ರಾಷ್ಟ್ರೀಯ ಅಧ್ಯಕ್ಷರಿದ್ದಾರೆ. ಬಿಎಸ್ ಯಡಿಯೂರಪ್ಪ ಅವರ ರಾಜಕಾರಣವನ್ನು ಹತ್ತಿರದಿಂದ ನೋಡಿ ಬೆಳೆದಿದ್ದಾನೆ. ಕಾರ್ಯಕರ್ತರ ಶಕ್ತಿ ಸಂಘಟನೆ ಲೋಕಸಭೆ, ಜಿ.ಪಂ ತಾ.ಪಂ ಚುನಾವಣೆಯಲ್ಲಿ ಹೆಚ್ಚಿನ ಶಕ್ತಿ ತುಂಬುವ ಕೆಲಸ ಮಾಡ್ತಾನೆ. ವಿಜಯೇಂದ್ರ ಕೊಟ್ಟಿರುವ ಜವಾಬ್ದಾರಿ ಸವಾಲಾಗಿ ಸ್ವೀಕರಿಸ್ತಾನೆ ಯಶಸ್ವಿಯಾಗಿ ನಿರ್ವಹಣೆ ಮಾಡ್ತಾನೆ ಎಂದು ಭರವಸೆ ವ್ಯಕ್ತಪಡಿಸಿದರು.
ಹಿಂದೆ ಕಟೀಲ್ ಸಹ ಒಳ್ಳೆಯ ಕೆಲಸ ಮಾಡಿದ್ದರು. ಈಶ್ವರಪ್ಪ, ಅನಂತಕುಮಾರ್ ಬಿ.ಬಿ.ಶಿವಪ್ಪ ಅಂತಹವರು ಪಕ್ಷ ಸಂಘಟನೆ ಮಾಡಿದ್ದಾರೆ. ಇದೀಗ ಬಿವೈ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವ ನಾಯಕರು. ರಾಜಕಾರಣ ಒಂದು ಸವಾಲು ನಮ್ಮ ಉದ್ದೇಶ ಸ್ಪಷ್ಟವಾಗಿದೆ. ಅಧಿಕಾರ ಬಂದಾಗ ಸನಿಹಕ್ಕೆ ಬರೋದು ಸಹಜ. ಅದೇ ಅಧಿಕಾರ ಇಲ್ಲದಿದ್ದಾಗ ಹಿಂದೆ ಮುಂದೆ ನೋಡೋದು ಸಹಜ. ಹಿರಿಯರ ಜೊತೆ ಪಕ್ಷ ಸಂಘಟನೆ ಯಶಸ್ವಿಯಾಗಿ ಮಾಡುತ್ತಾನೆ. ಕೊಟ್ಟಿರುವ ಜವಾಬ್ದಾರಿಯನ್ನು ವಿಜಯೇಂದ್ರ ಸವಾಲಾಗಿ ಸ್ವೀಕರಿಸಿದ್ದಾನೆ ಎಂದರು.
ಹಿಂದಿನಿಂದಲೂ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷನಾಗ್ತಾನೆ ಎಂಬ ಚರ್ಚೆ ನಡೆಯುತ್ತಿತ್ತು. ದೀಪಾವಳಿ ಸಂದರ್ಭದಲ್ಲಿ ಸಂಘಟನೆ ಶಕ್ತಿ ತುಂಬಿದೆ. ವಿಜಯೇಂದ್ರ ಮುಖಾಂತರ ನಮ್ಮ ಕುಟುಂಬಕ್ಕೆ ಮತ್ತೊಂದು ಅವಕಾಶ ಸಿಕ್ಕಿದೆ ಎಂದು ಸಂಸದ ಬಿವೈ ರಾಘವೇಂದ್ರ ಸಂತಸ ವ್ಯಕ್ತಪಡಿಸಿದರು.
Breaking: ಬಿಎಸ್‌ವೈ ಪುತ್ರನಿಗೆ ದೀಪಾವಳಿ ಗಿಫ್ಟ್, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕ!
ಶಿಕಾರಿಪುರದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ:
ಬಿವೈ ವಿಜಯೇಂದ್ರರನ್ನು ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ಹೈಕಮಾಂಡ್ ವರಿಷ್ಠರು ನೇಮಿಸುತ್ತಿದ್ದಂತೆ ಇತ್ತ ಬಿವೈ ವಿಜಯೇಂದ್ರರ ಕ್ಷೇತ್ರ ಶಿಕಾರಿಪುರದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು ಶಿಕಾರಿಪುರ ಪಟ್ಟಣದಲ್ಲಿ ಕಾರ್ಯಕರ್ತರಿಂದ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಯಡಿಯೂರಪ್ಪ, ವಿಜಯೇಂದ್ರಗೆ ಜೈಕಾರ ಹಾಕಿದ ಬಿಜೆಪಿ ಕಾರ್ಯಕರ್ತರು.