Latest Videos

ವಾಹನ ಸವಾರರಿಗೆ ಮತ್ತೆ ಗುಡ್‌ನ್ಯೂಸ್, ಸಂಚಾರ ನಿಯಮ ಉಲ್ಲಂಘನೆಗೆ ದಂಡ ಕಟ್ಟಲು ಶೇ.50 ರಿಯಾಯಿತಿ

By Gowthami KFirst Published Jul 5, 2023, 2:34 PM IST
Highlights

ಸಂಚಾರ ನಿಯಮ ಉಲ್ಲಂಘನೆಗಾಗಿ ವಾಹನ ಸವಾರರಿಗೆ ವಿಧಿಸಲಾಗಿದ್ದ ಶೇ.50 ದಂಡವನ್ನು ಕಟ್ಟಲು ಕಾಲಾವಕಾಶ ನೀಡಿ ಸಾರಿಗೆ ಇಲಾಖೆಯಿಂದ ಅಧಿಕೃತ ಆದೇಶ ಹೊರಬಿದ್ದಿದೆ.

ಬೆಂಗಳೂರು (ಜು.5) : ಸಂಚಾರ ನಿಯಮ ಉಲ್ಲಂಘನೆಗಾಗಿ ವಾಹನ ಸವಾರರಿಗೆ ವಿಧಿಸಲಾಗಿದ್ದ ದಂಡ ಮೊತ್ತದಲ್ಲಿ ಶೇ.50 ರಿಯಾಯಿತಿ ಘೋಷಣೆ ಮಾಡಲಾಗಿತ್ತು. ಚುನಾವಣೆ ಸಂದರ್ಭ ಈ ರಿಯಾಯಿತಿಯನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ  ಮತ್ತೆ ಶೇ.50 ರಿಯಾಯಿತಿ ಘೋಷಿಸಿ ಅವಕಾಶ ನೀಡಲಾಗಿದೆ. ಈ ಬಗ್ಗೆ  ಸಾರಿಗೆ ಇಲಾಖೆಯಿಂದ ಅಧಿಕೃತ ಆದೇಶ ಹೊರಬಿದ್ದಿದೆ.  ಸೆಪ್ಟೆಂಬರ್ 9 ರವರೆಗೆ ಈ ಆದೇಶ  ಜಾರಿಯಲ್ಲಿರಲಿದೆ ಎಂದು ಪ್ರಾಧಿಕಾರದ ಅಧ್ಯಕ್ಷ ನರೇಂದ್ರ ಮಾಹಿತಿ ನೀಡಿದ್ದಾರೆ.

ಈ ಹಿಂದೆ 25 ದಿನಗಳ ಕಾಲ ರಿಯಾಯಿತಿ ನೀಡಿ ಆದೇಶ ಹೊರಡಿಸಲಾಗಿತ್ತು. ಇದೀಗ ಮತ್ತೆ ಅವಕಾಶ ನೀಡಿದ್ದು, ಸೆಪ್ಟೆಂಬರ್ 9 ರವರೆಗೆ ಅವಕಾಶ ನಿಡಲಾಗಿದೆ. ಸಂಚಾರಿ ಪೊಲೀಸ್ ಇಲಾಖೆಯ ಇ-ಚಲನ್‌ನಲ್ಲಿ ಫೆಬ್ರವರಿ 11, 2023ರ ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಈ ಅವಕಾಶ ನೀಡಲಾಗಿದೆ. 

 

click me!