ಮಹಿಳೆಯ ಘನತೆಗೆ ಚ್ಯುತಿ ತಂದ ಪ್ರಕರಣದ ಆರೋಪಿಯನ್ನು ದೋಷಿಯಾಗಿ ತೀರ್ಮಾನಿಸಿ ಎರಡು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ್ದ ವಿಚಾರಣಾಧೀನ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.
ಬೆಂಗಳೂರು (ಜು.15): ಮಹಿಳೆಯ ಘನತೆಗೆ ಚ್ಯುತಿ ತಂದ ಪ್ರಕರಣದ ಆರೋಪಿಯನ್ನು ದೋಷಿಯಾಗಿ ತೀರ್ಮಾನಿಸಿ ಎರಡು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ್ದ ವಿಚಾರಣಾಧೀನ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಶಿಕ್ಷೆಗೆ ಗುರಿಯಾಗಿರುವ ಬೆಂಗಳೂರು ನಿವಾಸಿ ಎ.ಹರೀಶ್ ಕುಮಾರ್ ಎಂಬಾತ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರ ಪೀಠ ಈ ಆದೇಶ ಮಾಡಿದೆ.
ಪ್ರಕರಣದ ತುರ್ತು ವಿಚಾರಣೆ ಕಡ್ಡಾಯವಾಗಿದ್ದರೂ ಪ್ರಾಸಿಕ್ಯೂಷನ್ (ತನಿಖಾಧಿಕಾರಿ ಒದಗಿಸಿದ) ಸಾಕ್ಷಿಗಳನ್ನು ಪಾಟೀ ಸವಾಲಿಗೆ ಒಳಪಡಿಸಲು ಅವಕಾಶ ನೀಡದೇ ಆರೋಪಿಯನ್ನು ದೋಷಿಯೆಂದು ವಿಚಾರಣಾಧೀನ ನ್ಯಾಯಾಲಯ ತೀರ್ಪು ನೀಡಿದೆ. ಇದು ನ್ಯಾಯಸಮ್ಮತವಲ್ಲ. ಸಾಕ್ಷಿಗಳನ್ನು ಪಾಟೀ ಸವಾಲಿಗೆ ಒಳಪಡಿಸಲು ಅವಕಾಶ ಕಲ್ಪಿಸುವುದು ಮತ್ತು ಆರೋಪಿಗೆ ತನ್ನದೇ ವಕೀಲರ ನೇಮಕಕ್ಕೆ ಅವಕಾಶ ನೀಡುವುದು ನ್ಯಾಯಾಲಯದ ಆದ್ಯ ಕರ್ತವ್ಯ ಎಂದು ಹೈಕೋರ್ಟ್ ಆದೇಶದಲ್ಲಿ ಅಭಿಪ್ರಾಯಪಟ್ಟಿದೆ.
ಡಿಕೆಶಿ ಮೇಲಿನ ಖಾಸಗಿ ದೂರು ವಜಾಗೊಳಿಸಿದ ಹೈಕೋರ್ಟ್
ಅಲ್ಲದೆ, ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಹರೀಶ್ ಕುಮಾರ್‌ಗೆ ಜಾಮೀನು ನೀಡಿರುವ ಹೈಕೋರ್ಟ್, ಪ್ರಕರಣವನ್ನು ವಿಚಾರಣಾಧೀನ ನ್ಯಾಯಾಲಯಕ್ಕೆ ಹಿಂದಿರುಗಿಸಿದೆ. ಪ್ರಕರಣವನ್ನು ಹೊಸದಾಗಿ ವಿಚಾರಣೆ ನಡೆಸಬೇಕು. ಆರೋಪಿಗೆ ತನ್ನ ಪರವಾಗಿ ವಕೀಲರನ್ನು ನೇಮಿಸಿಕೊಳ್ಳಲು ಅನುಮತಿಸಬೇಕು. ತನ್ನ ವಕೀಲರ ಮೂಲಕ ಸಾಕ್ಷಿಗಳನ್ನು ಪಾಟೀ ಸವಾಲಿಗೆ ಒಳಪಡಿಸಲು ಅವಕಾಶ ನೀಡಬೇಕು ಎಂದು ನಿರ್ದೇಶಿಸಿದೆ.
ಪ್ರಕರಣವೇನು?: ಆರೋಪಿ ಹರೀಶ್ ಕುಮಾರ್ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಅಪ್ರಾಪ್ತ ಸಂತ್ರಸ್ತೆಯ ಕೈ ಹಿಡಿದು ಎಳೆದುಕೊಂಡು ಆಕೆಯ ಖಾಸಗಿ ಅಂಗಾಂಗಳನ್ನು ಸ್ಪರ್ಶಿಸಿ ಪರಾರಿಯಾಗಲು ಪ್ರಯತ್ನಿಸಿದ್ದ. ಸಂತ್ರಸ್ತೆ ಯೇ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆ ಮತ್ತು ಮಹಿಳೆಗೆ ಘನತೆಗೆ ಚ್ಯುತಿ ತಂದ ಅಪರಾಧ ಪ್ರಕರಣ ಸಂಬಂಧ ಪೊಲೀಸರು ದೂರು ದಾಖಲಿಸಿದ್ದರು. ತನಿಖೆ ಪೂರ್ಣಗೊಳಿಸಿ ವಿಚಾ ರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಸಲ್ಲಿಸಿ, ಆರೋಪಿ ವಿರುದ್ಧ ಸಾಕ್ಷಿಗಳನ್ನು ಒದಗಿಸಿದ್ದರು.
ರೇವಣ್ಣ ಸರಿಯಾಗಿ ನಿಂಬೆಹಣ್ಣು ಮಂತ್ರಿಸಿಲ್ಲ: ಕಾಲೆಳೆದ ಅಶೋಕ್
ವಿಚಾರಣಾ ನ್ಯಾಯಾಲಯವು ಆರೋಪಿ ವಿರುದ್ಧದ ಆರೋಪ ಸಾಬೀತುಪಡಿಸಲು ಪ್ರಾಸಿಕ್ಯೂಷನ್‌ನ ಹತ್ತು ಸಾಕ್ಷಿಗಳನ್ನು ಪರಿಶೀಲಿಸಿತ್ತು. ಆದರೆ, ಹರೀಶ್ ಕುಮಾರ್ ಅವರ ವಕೀಲರು ಗೈರಾಗಿ, ಸಾಕ್ಷಿಗಳನ್ನು ಪಾಟೀ ಸವಾಲಿಗೆ ಒಳಪಡಿಸಿರಲಿಲ್ಲ. ಆದರೂ ಆರೋಪಿಯನ್ನು ದೋಷಿಯಾಗಿ ತೀರ್ಮಾನಿಸಿದ್ದ ವಿಚಾರಣಾ ನ್ಯಾಯಾಲಯ, ಎರಡು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿತ್ತು. ಆ ತೀರ್ಪು ಪ್ರಶ್ನಿಸಿ ಹರೀಶ್ ಕುಮಾರ್ ಹೈಕೋರ್ಟ್‌ಗೆ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದ.