
ಬೆಂಗಳೂರು (ನ.4) ಆಪಲ್ ಏರ್ ಪಾಡ್ ಉತ್ವಾದನಾ ಘಟಕ ಸ್ಥಳಾಂತರ ವಿಚಾರವಾಗಿ ಕರ್ನಾಟಕ-ತೆಲಂಗಾಣ ರಾಜ್ಯಗಳ ನಡುವೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಉತ್ಪಾದನಾ ಘಟಕ ಹೈದ್ರಾಬಾದ್ ನಿಂದ ಬೆಂಗಳೂರಿಗೆ ಸ್ಥಳಾಂತರ ಗೊಳಿಸುವಂತೆ ಡಿಸಿಎಂ ಡಿಕೆ ಶಿವಕುಮಾರ ಬರೆದಿದ್ದಾರೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಹಿನ್ನೆಲೆ ಇದೀಗ ಸ್ವತಃ ಡಿಕೆ ಶಿವಕುಮಾರ ಆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಆಪಲ್ ಏರ್ ಪಾಡ್ ಉತ್ಪಾದನಾ ಘಟಕವನ್ನು ಸ್ಥಳಾಂತರಕ್ಕೆ ನಾನು ಫಾಕ್ಸ್ ಕಾನ್ ಸಂಸ್ಥೆಗೆ ಪತ್ರ ಬರೆದಿಲ್ಲ. ಇದೊಂದು ನಕಲಿ ಪತ್ರವಾಗಿದ್ದು ಈ ಸಂಬಂಧ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ದಾಖಲಿಸಲಾಗಿದೆ ಎಂದು ಡಿಕೆ ಶಿವಕುಮಾರ ಟ್ವೀಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ.
ಎಚ್‌ಡಿಕೆ ಸಪೋರ್ಟ್ ಮಾಡೋ ವಿಚಾರ; ನೋಡಪ್ಪ ಮಾಡೋ ಕಾಲದಲ್ಲೇ ಮಾಡಿಲ್ಲ, ಈಗೇನು ಮಾಡೋದು: ಡಿಕೆಶಿ ತಿರುಗೇಟು
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಹೆಸರಿನಲ್ಲಿ ನಕಲಿ ಲೆಟರ್ ಹೆಡ್ ವೈರಲ್ ಪತ್ರದ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಗೆ ರಾಜೇಂದ್ರ ಎಂಎನ್ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು. ಪತ್ರದಲ್ಲಿ ಕರ್ನಾಟಕ ಸರ್ಕಾರ ಲೆಟರ್ ಹೆಡ್ ಮತ್ತು ಡಿಸಿಎಂ ಅವರ ಸಹಿಯನ್ನ ನಕಲು ಮಾಡಲಾಗಿದೆ. ನಕಲಿ ಪತ್ರ ಸೃಷ್ಟಿ ಮಾಡಿದವರ ವಿರುದ್ಧ ಕ್ರಮಕ್ಕೆ ಮುಂದಾದ ಪೊಲೀಸರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ