ರಾಯಚೂರು: ರಸ್ತೆಯಲ್ಲಿ ಹೋಗುತ್ತಿದ್ದ ಹಾವು ಹಿಡಿದು ಬೈಕ್ ಸವಾರ ಹುಚ್ಚಾಟ, ವಿಡಿಯೋ ವೈರಲ್

Published : Dec 05, 2025, 03:22 PM IST
Viral Video Biker Dangerous Stunt Dragging 6 Foot Snake in Sindhanur Raichur

ಸಾರಾಂಶ

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ, ಭೀಮೇಶ್ ಎಂಬ ಬೈಕ್ ಸವಾರನೊಬ್ಬ ರಸ್ತೆಯಲ್ಲಿ ಕಂಡ 6 ಅಡಿ ಉದ್ದದ ಹಾವನ್ನು ಹಿಡಿದು ಹುಚ್ಚಾಟ ಮೆರೆದಿದ್ದಾನೆ. ಈ ಅಪಾಯಕಾರಿ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸವಾರನ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ರಾಯಚೂರು (ಡಿ.5): ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ವಿಚಿತ್ರ ಹಾಗೂ ಆಘಾತಕಾರಿ ಘಟನೆಯೊಂದು ನಡೆದಿದ್ದು, ರಸ್ತೆಯ ಪಕ್ಕದಲ್ಲಿ ಸರಿದುಹೋಗುತ್ತಿದ್ದ ಹಾವು ಹಿಡಿದು ಬೈಕ್ ಸವಾರನೋರ್ವ ಎಳೆದಾಡಿ ಹುಚ್ಚಾಟ ನಡೆಸಿದ ವಿಡಿಯೋ ವೈರಲ್ ಆಗಿದೆ.

ಹಾವು ಹಿಡಿದು ಹೈಡ್ರಾಮಾ:

ಭೀಮೇಶ್ ಎಂಬ ಹೆಸರಿನ ಬೈಕ್ ಸವಾರನೇ 6 ಅಡಿ ಉದ್ದದ ಹಾವು ಹಿಡಿದು ಹೈಡ್ರಾಮಾ ಮಾಡಿದ್ದಾನೆ. ಸಿಂಧನೂರು ನಗರದ ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಹಾವು ಹಾದುಹೋಗಿದೆ ಈ ವೇಳೆ ಹಾವನ್ನು ಹಿಡಿದಿದ್ದಾನೆ. ಗಾಡಿಯ ಮೇಲೆ ಕುಳಿತುಕೊಂಡೇ ಹಾವಿನ ಹೆಡೆ ಹಿಡಿದು ಎಳೆದಾಡಿದ್ದು, ಈ ಹುಚ್ಚಾಟವನ್ನು ಕಂಡ ಸ್ಥಳೀಯರು ಶಾಕ್‌ ಆಗಿದ್ದಾರೆ. ಮತ್ತೋರ್ವ ವ್ಯಕ್ತಿ ಈ ಘಟನೆಯ ಸಂಪೂರ್ಣ ವಿಡಿಯೋವನ್ನು ತನ್ನ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾನೆ.

ವಿಡಿಯೋ ವೈರಲ್

ಬೈಕ್ ಸವಾರನು ಯಾವುದೇ ಭಯವಿಲ್ಲದೆ ಹಾವು ಹಿಡಿದಿರುವ ದೃಶ್ಯ ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣಬಹುದಾಗಿದೆ. ಹಾವಿನೊಂದಿಗೆ ಹೈಡ್ರಾಮಾ ಮಾಡಿದ ನಂತರ, ಭೀಮೇಶ್ ಆ ಹಾವನ್ನು ಮತ್ತೆ ಬೇರೆಡೆಗೆ ಎಸೆದು ಹೋಗಿದ್ದಾನೆ. ಇದೀಗ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇಂತಹ ಅಪಾಯಕಾರಿ ವರ್ತನೆಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತನಿಗೆ ಪರಿಹಾರ ನೀಡದ ಶಿವಮೊಗ್ಗ ಡಿಸಿ ಕಚೇರಿ, ಕಾರು ಜಪ್ತಿಗೆ ಕೋರ್ಟ್ ಆದೇಶ! ಏನಿದು ಪ್ರಕರಣ?
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!