
ಬೆಂಗಳೂರು (ಆ.12): ಕನ್ನಡ ಚಿತ್ರರಂಗದ ದಿಗ್ಗಜ, ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಸ್ಮಾರಕ ಧ್ವಂಸಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಅಭಿಮಾನಿಗಳ ಆಕ್ರೋಶ ತಾರಕಕ್ಕೇರಿದೆ. ಈ ಘಟನೆಯ ಬಗ್ಗೆ ನಟ ಉಪೇಂದ್ರ ಅವರ ಟ್ವೀಟ್ ಈಗ ವಿವಾದದ ಕೇಂದ್ರಬಿಂದುವಾಗಿದ್ದು, ವಿಷ್ಣು ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.
ಉಪೇಂದ್ರ ತಮ್ಮ ಟ್ವೀಟ್‌ನಲ್ಲಿ, 'ಸ್ಥಾವರಕ್ಕಳಿವುಂಟು ಜಂಗಮಕ್ಕಳಿವಿಲ್ಲ. ಕೋಟಿಗೊಬ್ಬ ಸಾಹಸಸಿಂಹ ಡಾ. ವಿಷ್ಣು ಸರ್ ನನ್ನಂತಹ ಕೋಟಿ ಕೋಟಿ ಅಭಿಮಾನಿಗಳ ಹೃದಯಗಳಲ್ಲಿ ಎಂದೆಂದಿಗೂ ಶಾಶ್ವತ' ಎಂದು ಬರೆದಿದ್ದಾರೆ. ಆದರೆ ಇದನ್ನ ವಿಷ್ಣು ಅಭಿಮಾನಿಗಳು ಅವರ ಸ್ಮಾರಕ ಧ್ವಂಸದ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ ಎಂದು ಭಾವಿಸಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಡಾ. ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್, ಉಪೇಂದ್ರ ಅವರ ಟ್ವೀಟ್‌ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. 'ಬನ್ನಿ ಉಪೇಂದ್ರ ಸರ್.. ರಾಜ್ಯದ, ದೇಶದ ಎಲ್ಲಾ ಸಾಧಕರ ಸ್ಮಾರಕಗಳನ್ನು ಕೆಡವಿಬಿಡೋಣ!' ಎಂದು ಸಾಮಾಜಿಕ ಮಾಧ್ಯಮದಲ್ಲಿ ಟಕ್ಕರ್ ನೀಡಿದ್ದಾರೆ.
ಈ ಹೇಳಿಕೆಯಿಂದಾಗಿ ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಚರ್ಚೆ ಆರಂಭವಾಗಿದ್ದು, ಅನೇಕ ಅಭಿಮಾನಿಗಳು ಉಪೇಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ವಿಷ್ಣುವರ್ಧನ್ ಅವರ ಸ್ಮಾರಕವು ಕನ್ನಡಿಗರ ಭಾವನಾತ್ಮಕ ಸಂಕೇತವಾಗಿದ್ದು, ಇದರ ಧ್ವಂಸವು ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ